ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಯಶಸ್ವಿ ಜೈಸ್ವಾಲ್‌ ಔಟ್‌, ಇಶಾನ್‌ ಕಿಶನ್‌ ಇನ್‌; ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

India's Probable Playing XI for 1st ODI: ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳ ಮೊದಲನೇ ಏಕದಿನ ಪಂದ್ಯ ಜೂನ್‌ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ xi ಬಗ್ಗೆ ಇಲ್ಲಿ ವಿವರಿಸಲಾಗಿದೆ.

IND vs AFG: ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ಆಫ್ಘನ್‌ ವಿರುದ್ಧದ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI. -

Profile
Ramesh Kote Jun 10, 2026 3:41 PM

ಧರ್ಮಶಾಲಾ: ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್‌ ಪಂದ್ಯವನ್ನು ಗೆದ್ದಿರುವ ಭಾರತ ತಂಡ ಇದೀಗ ಮೂರು ಪಂದ್ಯಗಳ ಏಕದಿನ ಸರಣಿಗೆ (IND vs AFG) ಸಜ್ಜಾಗುತ್ತಿದೆ. ಮೊದಲನೇ ಏಕದಿನ ಪಂದ್ಯ ಜೂನ್‌ 13 ರಂದು ಶನಿವಾರ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಈಗಾಗಲೇ ಟೀಮ್‌ ಇಂಡಿಯಾ ಸಜ್ಜಾಗುತ್ತಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ xi ಯಾವ ರೀತಿ ಇರಬಹುದು ಎಂದು ಇಲ್ಲಿ ವಿವರಿಸಲಾಗಿದೆ. ಈ ಪಂದ್ಯದಲ್ಲಿ ಇಶಾನ್‌ ಕಿಶನ್‌ (Ishan Kishan) ಆಡುವ ಸಾಧ್ಯತೆ ಇದ್ದು, ಯಶಸ್ವಿ ಜೈಸ್ವಾಲ್‌ ತಮ್ಮ ಸ್ಥಾನಕ್ಕಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಬಹದು.

ಭಾರತ ಹಾಗೂ ಆಫ್ಘನ್‌ ನಡುವಣ ಏಕದಿನ ಸರಣಿಯ ಮೂರು ಪಂದ್ಯಗಳು ಕ್ರಮವಾಗಿ ಜೂನ್‌ 13, 17 ಮತ್ತು 20 ರಂದು ನಡೆಯಲಿವೆ. ಧರ್ಮಶಾಲಾ, ಲಖನೌ ಹಾಗೂ ಚೆನ್ನೈನಲ್ಲಿ ಪಂದ್ಯಗಳು ನಡೆಯಲಿವೆ. ಆದರೆ, ವಿರಾಟ್‌ ಕೊಹ್ಲಿ ಹಾಗೂ ಹಾರ್ದಿಕ್‌ ಪಾಂಡ್ಯ ಗಾಯದಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಇಬ್ಬರ ಅನುಪಸ್ಥಿತಿಯಲ್ಲಿ ಭಾರತ ತಂಡ ಕಣಕ್ಕೆ ಇಳಿಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XI ಯಾವ ರೀತಿ ಇರಲಿದೆ ಎಂದು ಇಲ್ಲಿ ವಿವರಿಸಲಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್

ಓಪನರ್ಸ್‌

ಶುಭಮನ್‌ ಗಿಲ್‌ ಹಾಗೂ ರೋಹಿತ್‌ ಶರ್ಮಾ ಇನಿಂಗ್ಸ್‌ ಆರಂಭಿಸಲಿದ್ದಾರೆ. ರೋಹಿತ್‌ ಶರ್ಮಾ ಫಿಟ್‌ನೆಸ್‌ ಪಾಸ್‌ ಮಾಡಿದ್ದು, ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಂದರ್ಭದಲ್ಲಿ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದ ರೋಹಿತ್‌ ಇದೀಗ ಸಂಪೂರ್ಣ ಫಿಟ್‌ ಆಗಿದ್ದಾರೆ. ವಿರಾಟ್‌ ಕೊಹ್ಲಿ ಸರಣಿಯಲ್ಲಿ ಆಡುತ್ತಿಲ್ಲವಾದ್ದರಿಂದ ರೋಹಿತ್‌ ಶರ್ಮಾ ದೀರ್ಘಾವಧಿ ಬ್ಯಾಟ್‌ ಮಾಡಬೇಕಾದ ಅಗತ್ಯವಿದೆ.

ಮಧ್ಯಮ ಕ್ರಮಾಂಕ

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವ ಸಾಧ್ಯತೆ ಇದೆ. ತಂಡಕ್ಕೆ ಮರಳಿದ ನಂತರ ಟಿ20ಐ ಪಂದ್ಯಗಳಲ್ಲಿ ಇಶಾನ್ ಕಿಶನ್ ನಿರಂತರವಾಗಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುತ್ತಿದ್ದು, ಅಂತಿಮ ಹನ್ನೊಂದರ ಬಳಗದಲ್ಲಿ ಕೊಹ್ಲಿಯ ಸ್ಥಾನವನ್ನು ಭರ್ತಿ ಮಾಡುವ ನಿರೀಕ್ಷೆಯಿದೆ. ಏಕದಿನ ಹಾಗೂ ಟಿ20ಐ ಕ್ರಿಕೆಟ್‌ನಲ್ಲಿ ಅವರು ವಿವಿಧ ಬ್ಯಾಟಿಂಗ್ ಕ್ರಮಾಂಕಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ.

ಭಾರತದ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ. 2023ರ ವಿಶ್ವಕಪ್‌ಗೆ ಮುನ್ನ ಭಾರತದ ನಾಲ್ಕನೇ ಕ್ರಮಾಂಕದ ಸಮಸ್ಯೆಗೆ ಪರಿಹಾರ ಕಂಡುಕೊಟ್ಟ ಅಯ್ಯರ್, ಮಧ್ಯಮ ಕ್ರಮಾಂಕದಲ್ಲಿ ತಮ್ಮ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ. ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಟ್‌ ಮಾಡುವುದರ ಜೊತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.

ಅಫ್ಘಾನಿಸ್ತಾನ ಏಕದಿನ ಸರಣಿಯನ್ನು ಆಡಲು ರೋಹಿತ್‌ ಶರ್ಮಾ, ಹಾರ್ದಿಕ್‌ ಪಾಂಡ್ಯಗೆ ಗ್ರೀನ್‌ ಸಿಗ್ನಲ್‌!

ಆಲ್‌ರೌಂಡರ್ಸ್‌

ಹಾರ್ದಿಕ್ ಪಾಂಡ್ಯ ಗಾಯದ ಕಾರಣ ಸರಣಿಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಅಂತಿಮ ಹನ್ನೊಂದರ ಬಳಗದಲ್ಲಿ ಇಬ್ಬರು ಆಲ್‌ರೌಂಡರ್‌ಗಳಾಗಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಪಾಂಡ್ಯ ಅವರ ಬದಲಿಗೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಇದೇ ವೇಳೆ, ಪಾಂಡ್ಯ ಅನುಪಸ್ಥಿತಿಯಲ್ಲಿ ಶಿವಂ ದುಬೆ ಅವರನ್ನು ಮತ್ತೆ ಏಕದಿನ ತಂಡಕ್ಕೆ ಕರೆಸಿಕೊಳ್ಳುವ ಸಾಧ್ಯತೆಯೂ ಇದೆ.

ಬೌಲರ್‌ಗಳು

ಅರ್ಷದೀಪ್ ಸಿಂಗ್ ಮತ್ತು ಪ್ರಸಿಧ್‌ ಕೃಷ್ಣ ಭಾರತದ ವೇಗದ ಬೌಲಿಂಗ್ ದಾಳಿಯನ್ನು ಜಂಟಿಯಾಗಿ ಮುನ್ನಡೆಸುವ ಸಾಧ್ಯತೆ ಇದೆ. ಸರಣಿಯ ಮೊದಲ ಪಂದ್ಯದಲ್ಲೇ ಪ್ರಿನ್ಸ್ ಯಾದವ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶ ದೊರೆಯಬಹುದು.

ಬಲಗೈ ವೇಗದ ಬೌಲರ್ ಆಗಿರುವ ಪ್ರಿನ್ಸ್ ಯಾದವ್, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿಗಳಿಗಾಗಿ ಆಯ್ಕೆಯಾದ ಭಾರತೀಯ ತಂಡಗಳಲ್ಲಿಯೂ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ, ಭಾರತದ ಸ್ಪಿನ್ ಬೌಲಿಂಗ್ ವಿಭಾಗವನ್ನು ಕುಲ್‌ದೀಪ್ ಯಾದವ್ ಮುನ್ನಡೆಸಬಹುದು.

ಭಾರತ 'ಎ' ಚೊಚ್ಚಲ ಪಂದ್ಯದಲ್ಲೇ ವೈಭವ್ ಸೂರ್ಯವಂಶಿ ವೈಫಲ್ಯ

ಅಫ್ಘಾನಿಸ್ತಾನ ವಿರುದ್ಧದ ಮೊದಲನೇ ಏಕದಿನ ಪಂದ್ಯಕ್ಕೆ ಭಾರತದ ಬಲಿಷ್ಠ ಪ್ಲೇಯಿಂಗ್‌ XI

ಶುಭಮನ್‌ ಗಿಲ್‌, ರೋಹಿತ್‌ ಶರ್ಮಾ, ಇಶಾನ್‌ ಕಿಶನ್‌, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌, ವಾಷಿಂಗ್ಟನ್‌ ಸುಂದರ್‌, ನಿತೀಶ್‌ ಕುಮಾರ್‌ ರೆಡ್ಡಿ, ಅರ್ಷದೀಪ್‌ ಸಿಂಗ್‌, ಪ್ರಸಿಧ್‌ ಕೃಷ್ಣ, ಪ್ರಿನ್ಸ್‌ ಯಾದವ್‌, ಕುಲ್ದೀಪ್‌ ಯಾದವ್‌