ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IND vs AFG: ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಎಬಿ ಡಿ ವಿಲಿಯರ್ಸ್‌!

ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಗೂ ಮುನ್ನ ಭಾರತೀಯ ಕ್ರಿಕೆಟ್‌ನ ಸೆನ್ಸೇಷನಲ್‌ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿಯನ್ನು ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ವೈಭವ್‌ ಅವರನ್ನು ನೋಡಿದರೆ, ಅವರು 15 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುತ್ತಿರುವಂತೆ ಭಾಸವಾಗುತ್ತದೆ ಎಂದಿದ್ದಾರೆ.

ವೈಭವ್‌ ಸೂರ್ಯವಂಶಿ ಬಗ್ಗೆ ಎಬಿ ಡಿವಿಲಿಯರ್ಸ್‌ ದೊಡ್ಡ ಹೇಳಿಕೆ!

ವೈಭವ್‌ ಸೂರ್ಯವಂಶಿಯನ್ನು ಶ್ಲಾಘಿಸಿದ ಎಬಿ ಡಿ ವಿಲಿಯರ್ಸ್‌. -

Profile
Ramesh Kote Sep 10, 2026 10:56 PM

ನವದೆಹಲಿ: ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಯಲ್ಲಿ (IND vs ZIM) ಸ್ಫೋಟಕ ಪ್ರದರ್ಶನ ನೀಡುವ ಮೂಲಕ ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ (vaibhav Sooryavanshi) ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. 2011ರ ಮಾರ್ಚ್ 27ರಂದು ಜನಿಸಿರುವ ಎಡಗೈ ಆರಂಭಿಕ ಬ್ಯಾಟರ್ ವೈಭವ್, ಇದೇ ವರ್ಷದ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಜಿಂಬಾಬ್ವೆ ಪ್ರವಾಸದಲ್ಲಿ ತಮ್ಮ ಸಾಮರ್ಥ್ಯವನ್ನು ವಿಶ್ವದ ಮುಂದೆ ಅನಾವರಣಗೊಳಿಸಿದರು.

ಸೆಪ್ಟೆಂಬರ್ 13ರಿಂದ 17ರವರೆಗೆ ನವದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾದ ದಿಗ್ಗಜ ಬ್ಯಾಟರ್ ಎಬಿ ಡಿವಿಲಿಯರ್ಸ್ ವೈಭವ್ ಸೂರ್ಯವಂಶಿ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ವೈಭವ್ ತೋರುತ್ತಿರುವ ಪ್ರಬುದ್ಧತೆ ಹಾಗೂ ಸ್ಥಿರ ಪ್ರದರ್ಶನವನ್ನು ಡಿವಿಲಿಯರ್ಸ್ ಶ್ಲಾಘಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಆಟಗಾರನಂತೆ ವೈಭವ್ ಆಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

IND vs WI: ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಸರಣಿಗೆ ತಯಾರಿ ಆರಂಭಿಸಿದ ರೋಹಿತ್‌ ಶರ್ಮಾ!

‘10-15 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದಂತೆ ಕಾಣುತ್ತಾರೆ’: ಎಬಿಡಿ

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಎಬಿ ಡಿವಿಲಿಯರ್ಸ್, “ವೈಭವ್ ಸೂರ್ಯವಂಶಿ ಈಗ ದೊಡ್ಡ ಚರ್ಚೆಯ ವಿಷಯ. ಆತ ಇನ್ನೂ ಹದಿಹರೆಯದ ಬಾಲಕ. ಆದರೆ ಎಲ್ಲೆಡೆ ರನ್‌ಗಳನ್ನು ಬಾರಿಸುತ್ತಿದ್ದಾನೆ. ಕಳೆದ 10-15 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವಂತೆ ಕಾಣುತ್ತದೆ. ಆತನಿಗೆ ಆಕಾಶವೇ ಮಿತಿ. ಮತ್ತೊಮ್ಮೆ ಆತನ ಆಟವನ್ನು ನೋಡಲು ನಾನು ಸಂಪೂರ್ಣವಾಗಿ ಕಾತರನಾಗಿದ್ದೇನೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಈಗಾಗಲೇ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದು, ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ಅವರು ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

CPL 2026: 47ನೇ ವಯಸ್ಸಿನಲ್ಲಿ 5 ವಿಕೆಟ್‌ ಕಿತ್ತು ವಿಶ್ವ ದಾಖಲೆ ಬರೆದ ಇಮ್ರಾನ್‌ ತಾಹಿರ್‌!

ಜಿಂಬಾಬ್ವೆ ಟಿ20ಐ ಸರಣಿಯಲ್ಲಿ ಮಿಂಚಿದ್ದ ವೈಭವ್‌ ಸೂರ್ಯವಂಶಿ

ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಅಗ್ರ ದರ್ಜೆಗೆ ತಾನು ಸಿದ್ಧ ಎಂಬುದನ್ನು ತಮ್ಮ ಪ್ರದರ್ಶನದ ಮೂಲಕ ಸಾಬೀತುಪಡಿಸಿದರು. ಮೂರು ಪಂದ್ಯಗಳ ಸರಣಿಯಲ್ಲಿ ವೈಭವ್ 151 ರನ್ ಗಳಿಸಿದ್ದು, 50.33ರ ಸರಾಸರಿ ಹಾಗೂ 196.10ರ ಸ್ಟ್ರೈಕ್‌ರೇಟ್ ದಾಖಲಿಸಿದ್ದಾರೆ. ಈ ಅದ್ಭುತ ಪ್ರದರ್ಶನಕ್ಕಾಗಿ ಅವರಿಗೆ ‘ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಕೂಡ ಲಭಿಸಿತ್ತು.

ಸರಣಿಯ ಮೊದಲ ಪಂದ್ಯದಲ್ಲೇ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ವೈಭವ್, ಪುರುಷರ ಟಿ20ಐ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ಇದಾದ ಬಳಿಕ ಮೂರನೇ ಟಿ20ಐ ಪಂದ್ಯದಲ್ಲಿ ತಮ್ಮ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ ನೀಡಿದ ಅವರು, 49 ಎಸೆತಗಳಲ್ಲಿ 81 ರನ್ ಸಿಡಿಸಿದರು. ವೈಭವ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.