IND vs AUS: ಜಸ್‌ಪ್ರೀತ್ ಬುಮ್ರಾ ಇನ್, ಮೊದಲ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಸೋತಿರುವ ಭಾರತ ತಂಡ ಮುಂದಿನ 5 ಪಂದ್ಯಗಳ ಟಿ20ಐ ಸರಣಿಯನ್ನು ಗೆದ್ದುಕೊಳ್ಳಲು ಎದುರು ನೋಡುತ್ತಿದೆ. ಮೊದಲ ಪಂದ್ಯ ಅಕ್ಟೋಬರ್ 29 ರಂದು ಓವಲ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI ಅನ್ನು ಇಲ್ಲಿ ವಿವರಿಸಲಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಮೊದಲನೇ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI -
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಲ್ಲಿ ಸೋತಿರುವ ಭಾರತ ತಂಡ, ಮುಂದಿನ ಐದು ಪಂದ್ಯಗಳ ಟಿ20ಐ ಸರಣಿಗೆ (IND vs AUS) ಸಜ್ಜಾಗುತ್ತಿದೆ. ಏಕದಿನ ತಂಡದಲ್ಲಿದ್ದ ಎಂಟು ಆಟಗಾರರು ಮಾತ್ರ ಟಿ20ಐ ಸರಣಿಗಾಗಿ ಆಸ್ಟ್ರೇಲಿಯಾದಲ್ಲಿ ಉಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ (Suryakumar Yadav) ಈ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದು, ಏಕದಿನ ಸರಣಿಯಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಭಾರತ ತಂಡ ಎದುರು ನೋಡುತ್ತಿದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ (ICC T20 World Cup 2025) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಸರಣಿ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ.
ಏಷ್ಯಾ ಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರನಾಗಿ ಸಂಜು ಸ್ಯಾಮ್ಸನ್‌ಗಿಂತ ಶುಭಮನ್ ಗಿಲ್ ಅವರಿಗೆ ಆದ್ಯತೆ ನೀಡಲಾಗಿತ್ತು. ಹೀಗಾಗಿ ಅಭಿಷೇಕ್ ಶರ್ಮಾ ಜೊತೆಗೆ ಆರಂಭಿಕರಾಗಿ ಗಿಲ್ ತಮ್ಮ ಆಟವನ್ನು ಮುಂದುವರಿಸಲಿದ್ದು, ತಿಲಕ್ ವರ್ಮಾ ಮೂರನೇ ಸ್ಥಾನದಲ್ಲಿ ಆಡಬಹುದು. ಬಳಿಕ ನಾಯಕ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನದಲ್ಲಿ ಕಣಕ್ಕಿಳಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ವಿಕೆಟ್ ಕೀಪರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾ ನಡುವೆ ಪೈಪೋಟಿ ನಡೆಯಲಿದ್ದು, ಏಷ್ಯಾ ಕಪ್‌ನಲ್ಲಿ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ತೋರದ ಕಾರಣ, ಭಾರತ ತಂಡ ಜಿತೇಶ್ ಶರ್ಮಾ ಅವರೊಂದಿಗೆ ಹೋಗಬಹುದು.
IND vs ರೋಹಿತ್, ಕೊಹ್ಲಿ ಅಜೇಯ ಶತಕದ ಜತೆಯಾಟ; ವೈಟ್‌ವಾಶ್‌ನಿಂದ ಪಾರಾದ ಭಾರತ
ಮೊದಲ ಟಿ20ಐನಲ್ಲಿ ಶಿವಂ ದುಬೆ ಮತ್ತು ನಿತೀಶ್ ರೆಡ್ಡಿ ಇಬ್ಬರೂ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಇನ್ನು ಭಾರತ ತಂಡ ಬಲಿಷ್ಠ ಸ್ಪಿನ್ ವಿಭಾಗದೊಂದಿಗೆ ಕಣಕ್ಕಿಳಿಯಲು ಯೋಜನೆ ಹಾಕಿಕೊಳ್ಳುತ್ತಿದೆ. ವಾಷಿಂಗ್ಟನ್ ಸುಂದರ್ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಸ್ಪಿನ್ ಆಲ್‌ರೌಂಡರ್ ಆಗಿ ಆಯ್ಕೆ ಮಾಡಬಹುದು. ಆದರೆ ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಪಡೆದರೆ ಕುಲ್ದೀಪ್ ಯಾದವ್ ಅವರನ್ನು ಕೈಬಿಡುವ ಸಾಧ್ಯತೆ ಇದೆ. ಟೀಮ್ ಇಂಡಿಯಾ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ಆಡುವ XI ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ. ಅವರ ಜೊತೆಗೆ ಹೊಸ ಬಾಲ್‌ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುವ ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡುವುದು ಅನಿವಾರ್ಯವಾಗಿದೆ.
ಮೊದಲನೇ ಟಿ20ಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ/ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್
ಅಕ್ಟೋಬರ್ 29 ರಂದು ಆರಂಭವಾಗುವ 5 ಪಂದ್ಯಗಳ ಈ ಟಿ20ಐ ಸರಣಿಯಲ್ಲಿ ಭಾರತ ತಂಡ, ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಸರಣಿ ಜಯಿಸಲು ಎದುರು ನೋಡುತ್ತಿದೆ.