ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS: ಅರ್ಧಶತಕ ಬಾರಿಸಿ ಕುಮಾರ ಸಂಗಕ್ಕಾರ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ಆಸ್ಟ್ರೇಲಿಯಾ ವಿರುದ್ಧ ಮೂರನೇ ಹಾಗೂ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ವಿರಾಟ್‌ ಕೊಹ್ಲಿಅರ್ಧಶತಕ ಬಾರಿಸಿ ಫಾರ್ಮ್‌ಗೆ ಮರಳಿದರು. ಈ ಇನಿಂಗ್ಸ್‌ನ ಮೂಲಕ ವಿರಾಟ್‌ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಸಚಿನ್‌ ಒಳಗೊಂಡ ಎಲೈಟ್‌ ಲಿಸ್ಟ್‌ನಲ್ಲಿ ಎರಡನೇ ಸ್ಥಾನಕ್ಕೇರಿದ ಕೊಹ್ಲಿ!

ಕುಮಾರ ಸಂಗಕ್ಕಾರ ದಾಖಲೆ ಮುರಿದ ವಿರಾಟ್‌ ಕೊಹ್ಲಿ. -

Profile Ramesh Kote Oct 25, 2025 4:28 PM

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಎರಡೂ ಪಂದ್ಯಗಳ (IND vs AUS) ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ್ದ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli), ಮೂರನೇ ಹಾಗೂ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ಆ ಮೂಲಕ ಭಾರತ ತಂಡ (India) 9 ವಿಕೆಟ್‌ಗಳ ಗೆಲುವಿಗೆ ನೆರವು ನೀಡಿದರು. ತಮ್ಮ ಈ ಇನಿಂಗ್ಸ್‌ನ ಮೂಲಕ ವಿರಾಟ್‌ ಕೊಹ್ಲಿ, ಆಸ್ಟ್ರೇಲಿಯಾದಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಕೊನೆಯ ಪಂದ್ಯವನ್ನು ಆಡಿದರು. ಅಂದ ಹಾಗೆ ಈ ಇನಿಂಗ್ಸ್‌ನ ಮೂಲಕ ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ.

ಪರ್ತ್‌ ಹಾಗೂ ಅಡಿಲೇಡ್‌ ಅಂಗಣದಲ್ಲಿ ಸತತ ಎರಡೂ ಪಂದ್ಯಗಳಲ್ಲಿ ವಿರಾಟ್‌ ಕೊಹ್ಲಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ ಬಳಿಕ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಆ ಮೂಲಕ ಅವರು ಏಕದಿನ ಕ್ರಿಕೆಟ್‌ಗೂ ವಿದಾಯ ಹೇಳಬಹುದೆಂಬ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಸಿಡ್ನಿ ಅಂಗಣದಲ್ಲಿ ನಡೆದಿದ್ದ ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯದಲ್ಲಿ ಎಲ್ಲರ ಭವಿಷ್ಯಗಳನ್ನು ಸುಳ್ಳಾಗಿಸಿದರು. ಆಸ್ಟ್ರೇಲಿಯಾ ನೀಡಿದ್ದ 237 ರನ್‌ಗಳ ಗುರಿಯನ್ನು ಹಿಂಬಾಲಸಿದ್ದ ಭಾರತ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಆಡಿದ ವಿರಾಟ್‌ ಕೊಹ್ಲಿ, ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದರು.

IND vs ರೋಹಿತ್‌, ಕೊಹ್ಲಿ ಅಜೇಯ ಶತಕದ ಜತೆಯಾಟ; ವೈಟ್‌ವಾಶ್‌ನಿಂದ ಪಾರಾದ ಭಾರತ

ಕುಮಾರ ಸಂಗಕ್ಕಾರ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ವಿರಾಟ್‌ ಕೊಹ್ಲಿಆಡಿದ 81 ಎಸೆತಗಳಲ್ಲಿ 7 ಮನಮೋಹಕ ಬೌಂಡರಿಗಳೊಂದಿಗೆ ಅಜೇಯ 74 ರನ್‌ಗಳನ್ನು ದಾಖಲಿಸಿದರು. ಅಲ್ಲದೆ ರೋಹಿತ್‌ ಶರ್ಮಾ ಜೊತೆ ಮುರಿಯದ ಎರಡನೇ ವಿಕೆಟ್‌ಗೆ 168 ರನ್‌ಗಳ ಜೊತೆಯಾಟವನ್ನು ಆಡಿದರು. ಆ ಮೂಲಕ ಭಾರತ ತಂಡದ ಗೆಲುವಿಗೆ ನೀಡಿದರು. ಈ ಇನಿಂಗ್ಸ್‌ನ ನೆರವಿನಿಂದ ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಳ ಸಾಲಿನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟರು. ಆ ಮೂಲಕ ಶ್ರೀಲಂಕಾ ದಿಗ್ಗಜ ಕುಮಾರ ಸಂಗಕ್ಕಾರ ಅವರ ದಾಖಲೆಯನ್ನು ಮುರಿದಿದ್ದಾರೆ.

ವಿರಾಟ್‌ ಕೊಹ್ಲಿ ಅವರು ಇಲ್ಲಿಯವರೆಗೂ ಆಡಿದ 305 ಒಡಿಐ ಪಂದ್ಯಗಳಿಂದ 14243 ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರು ತಮ್ಮ ಒಡಿಐ ವೃತ್ತಿ ಜೀವನದಲ್ಲಿ ಆಡಿದ 463 ಪಂದ್ಯಗಳಿಂದ 18426 ರನ್‌ಗಳನ್ನು ಕಲೆ ಹಾಕಿ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇದೀಗ ಕುಮಾರ್‌ ಸಂಗಕ್ಕಾರ ಅವರು 404 ಪಂದ್ಯಗಳಿಂದ 14234 ರನ್‌ಗಳ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.



ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳು

ಸಚಿನ್‌ ತೆಂಡೂಲ್ಕರ್ (ಭಾರತ)18426 (463 ಪಂದ್ಯಗಳು)

ವಿರಾಟ್‌ ಕೊಹ್ಲಿ (ಭಾರತ) 14243 (305 ಪಂದ್ಯಗಳು)

ಕುಮಾರ ಸಂಗಕ್ಕಾರ (ಶ್ರೀಲಂಕಾ) 14234* (404)

ರಿಕಿ ಪಾಂಟಿಂಗ್‌ (ಆಸ್ಟ್ರೇಲಿಯಾ) 13704 (375 ಪಂದ್ಯಗಳು)

ಸನತ್‌ ಜಯಸೂರ್ಯ (ಶ್ರೀಲಂಕಾ) 13430 (445)