IND vs ENG: ಭಾರತ ಟೆಸ್ಟ್ ತಂಡದಲ್ಲಿ ಅರ್ಷದೀಪ್ ಸಿಂಗ್‌ಗೆ ಸ್ಥಾನ ನೀಡುವ ಸಾಧ್ಯತೆ!
ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಳಿಕ ಭಾರತ ತಂಡ ಇಂಗ್ಲೆಂಡ್ ಪ್ರವಾಸವನ್ನು ಹಮ್ಮಿಕೊಳ್ಳಲಿದೆ. ಇಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗೆ ಅತಿ ಶೀಘ್ರದಲ್ಲಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಅರ್ಷದೀಪ್ ಸಿಂಗ್‌ಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗುತ್ತಿದೆ ಇತ್ತೀಚಿನ ಬೆಳವಣಿಗೆಗಳು ತಿಳಿಸಿವೆ.

ಭಾರತ ಟೆಸ್ಟ್ ತಂಡದಲ್ಲಿ ಅರ್ಷದೀಪ್ ಸಿಂಗ್‌ಗೆ ಸ್ಥಾನ ಸಾಧ್ಯತೆ.

ನವದೆಹಲಿ: ಇಂಗ್ಲೆಂಡ್ ವಿರುದ್ದದ ಐದು ಪಂದ್ಯಗಳ ಟೆಸ್ಟ್ ಸರಣಿಯ (IND vs ENG) ಭಾರತ ತಂಡಕ್ಕೆ ಯುವ ವೇಗಿ ಅರ್ಷದೀಪ್ ಸಿಂಗ್ (Arshdeep Singh) ಆಯ್ಕೆಯಾಗಲಿದ್ದಾರೆಂದು ವರದಿಯಾಗಿದೆ. ಜೂನ್ 20 ರಂದು ಆರಂಭವಾಗುವ ಮೂದಲ ಮೊದಲ ಪಂದ್ಯದ ಮೂಲಕ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಗೆ ಭಾರತ ತಂಡವನ್ನು ಮುಂದಿನ ಕೆಲವೇ ದಿನಗಳಲ್ಲಿ ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಿದೆ. ಈ ಸರಣಿಯ ಮೂಲಕ ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (WTC) ಆವೃತ್ತಿಯನ್ನು ಆರಂಭಿಸಲಿದೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ರೇಸ್‌ನಲ್ಲಿ ಯುವ ಆಟಗಾರರ ಎದುರು ನೋಡುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾರತ ತಂಡದಲ್ಲಿ ಅರ್ಷದೀಪ್ ಸಿಂಗ್ ಸ್ಥಾನ ಪಡೆಯಲಿದ್ದಾರೆಂದು ದಿ ಟೆಲಿಗ್ರಾಫ್ ವರದಿ ಮಾಡಿದೆ. ಎಡಗೈ ವೇಗದ ಬೌಲರ್ ಇಂಗ್ಲೆಂಡ್ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆಂದು ಅಜಿತ್ ಅಗರ್ಜರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿ ತಿಳಿಸಿದೆ. ಅರ್ಷದೀಪ್ ಸಿಂಗ್ ಎರಡೂ ಹಾದಿಯಲ್ಲಿ ಚೆಂಡನ್ನು ಸ್ವಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ.ಈ ಕಾರಣದಿಂದಾಗಿ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗುತ್ತಿದೆ ಎಂಬ ಅಂಶ ಬಹಿರಂಗವಾಗಿದೆ.
IPL 2025: ರಿಷಭ್ ಪಂತ್ ಎದುರಿಸುತ್ತಿರುವ ಸಮಸ್ಯೆಯನ್ನು ರಿವೀಲ್ ಮಾಡಿದ ಯೋಗರಾಜ್ ಸಿಂಗ್!
ಇಂಗ್ಲೆಂಡ್ ಲಯನ್ಸ್ ವಿರುದ್ಧ ನಾಲ್ಕು ದಿನಗಳ ಎರಡು ಪಂದ್ಯಗಳನ್ನು ಆಡುವ ಭಾರತ ಎ ತಂಡದಲ್ಲಿಅರ್ಷದೀಪ್ ಸಿಂಗ್‌ಗೆ ಸ್ಥಾನವನ್ನು ನೀಡಲಾಗಿಲ್ಲ. ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಹಿರಿಯರ ತಂಡದ ಜೊತೆಗಿನ ಅಂತರ ಪಂದ್ಯಗಳಿಗೂ ಕೂಡ ಅರ್ಷದೀಪ್ ಸಿಂಗ್ ಆಯ್ಕೆಯಾಗಿಲ್ಲ.
ಟೆಸ್ಟ್ ನಾಯಕತ್ವದ ರೇಸ್‌ನಲ್ಲಿ ಗಿಲ್, ಪಂತ್
ಭಾರತ ಟೆಸ್ಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಸ್ಥಾನವನ್ನು ತುಂಬುವ ರೇಸ್‌ನಲ್ಲಿ ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ. ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಸಲುವಾಗಿ ಜಸ್‌ಪ್ರೀತ್ ಬುಮ್ರಾ ಅವರು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ. ಅಲ್ಲದೆ ಅವರನ್ನು ನಾಯಕತ್ವದ ರೇಸ್‌ನಿಂದ ಹೊರಗಿಡಲಾಗಿದೆ.
Team india: ನಾಳೆ ಭಾರತ ಟೆಸ್ಟ್ ತಂಡದ ನೂತನ ನಾಯಕನ ಆಯ್ಕೆ?
ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಅವರನ್ನು ಟೆಸ್ಟ್ ನಾಯಕತ್ವಕ್ಕೆ ಚರ್ಚೆ ನಡೆಸಲಾಗುತ್ತಿದೆ ಹಾಗೂ ಈ ಇಬ್ಬರ ಬಗ್ಗೆ ಬಿಸಿಸಿಐ ಆಯ್ಕೆದಾರರು ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದರಲ್ಲಿ ಕೆಲವರು ಶುಭಮನ್ ಗಿಲ್ ಟೆಸ್ಟ್ ತಂಡದ ನಾಯಕತ್ವಕ್ಕೆ ಸೂಕ್ತವಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಹಾಗೂ ಅವರನ್ನು ಉಪ ನಾಯಕತ್ವಕ್ಕೆ ಪರಿಗಣಿಸಬೇಕೆಂದು ಸಲಹೆ ನೀಡಿದ್ದಾರೆಂದು ವರದಿಯಾಗಿದೆ.
ಭಾರತ ತಂಡದ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ
ಜೂನ್ 13 ರಿಂದ 16-4 ದಿನಗಳ ಅಭ್ಯಾಸ ಪಂದ್ಯ-ಬೆಕಿನ್‌ಹ್ಯಾಮ್
ಜೂನ್ 20 ರಿಂದ 24-ಮೊದಲನೇ ಟೆಸ್ಟ್ ಪಂದ್ಯ, ಹೆಡಿಂಗ್ಲೆ, ಲೀಡ್ಸ್
ಜುಲೈ 2 ರಿಂದ ಜುಲೈ 6-ಎರಡನೇ ಟೆಸ್ಟ್ ಪಂದ್ಯ, ಎಜ್‌ಬಾಸ್ಟನ್, ಬರ್ಮಿಂಗ್‌ಹ್ಯಾಮ್
ಜುಲೈ 10 ರಿಂದ 14-ಮೂರನೇ ಟೆಸ್ಟ್ ಪಂದ್ಯ, ಲಾರ್ಡ್ಸ್, ಲಂಡನ್
ಜುಲೈ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ, ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
ಜುಲೈ 31 ರಿಂದ ಆಗಸ್ಟ್ 4- ಐದನೇ ಟೆಸ್ಟ್ ಪಂದ್ಯ, ದಿ ಓವಲ್, ಲಂಡನ್