ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಅರ್ಧಶತಕ ಬಾರಿಸಿ ರಾಹುಲ್‌ ದ್ರಾವಿಡ್‌ರ ದಾಖಲೆ ಮುರಿದ ಜೋ ರೂಟ್‌!

Joe Root Breaks Rahul Dravid's Record: ಭಾರತ ವಿರುದ್ದ ನಾಲ್ಕನೇ ಟೆಸ್ಟ್‌ ಪಂದ್ಯದ ನಾಲ್ಕನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಭಾರತೀಯ ದಿಗ್ಗಜ ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ರಾಹುಲ್‌ ದ್ರಾವಿಡ್‌ ದಾಖಲೆ ಮುರಿದ ಜೋ ರೂಟ್‌!

ರಾಹುಲ್‌ ದ್ರಾವಿಡ್‌ ದಾಖಲೆಯನ್ನು ಮುರಿದ ಜೋ ರೂಟ್‌.

Profile Ramesh Kote Jul 25, 2025 6:37 PM

ಮ್ಯಾಂಚೆಸ್ಟರ್‌: ಭಾರತ ವಿರುದ್ಧ ಇಲ್ಲಿನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ ಪಂದ್ಯದ (IND vs ENG) ಪ್ರಥಮ ಇನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಇಂಗ್ಲೆಂಡ್‌ ಮಾಜಿ ನಾಯಕ ಜೋ ರೂಟ್‌ (Joe Root), ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಭಾರತೀಯ ದಿಗ್ಗಜ ರಾಹುಲ್‌ ದ್ರಾವಿಡ್‌ (Rahul Dravid) ಹಾಗೂ ಜಾಕ್‌ ಕಾಲಿಸ್‌ ಅವರನ್ನು ಹಿಂದಿಕ್ಕಿದ್ದಾರೆ. ಇದರೊಂದಿಗೆ ಜೋ ರೂಟ್‌ ಅವರು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯ ಸನಿಹದಲ್ಲಿದ್ದಾರೆ.

ಶುಕ್ರವಾರ ಮೂರನೇ ದಿನದಾಟದಲ್ಲಿ ಬ್ಯಾಟಿಂಗ್‌ ಮುಂದುವರಿಸಿದ ಜೋ ರೂಟ್‌ ಅತ್ಯುತ್ತಮ ಪ್ರದರ್ಶನವನ್ನು ತೋರಿದರು. ಭೋಜನ ವಿರಾಮದ ವೇಳೆಗೆ ಜೋ ರೂಟ್‌, 115 ಎಸೆತಗಳಲ್ಲಿ ಎಂಟು ಬೌಂಡರಿಗಳೊಂದಿಗೆ ಅಜೇಯ 63 ರನ್‌ಗಳನ್ನು ಕಲೆ ಹಾಕಿದ್ದಾರೆ. ಅಂದ ಹಾಗೆ ತಮ್ಮ ಇನಿಂಗ್ಸ್‌ಗೂ ಮುನ್ನ ಟೆಸ್ಟ್‌ ಕ್ರಿಕೆಟ್‌ನಲ್ಲಿ ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಲು ಜೋ ರೂಟ್‌ಗೆ 30 ರನ್‌ ಅಗತ್ಯವಿತ್ತು. ಅದರಂತೆ ಮೂರನೇ ದಿನ 30 ರನ್‌ ಕಲೆ ಹಾಕುತ್ತಿದ್ದಂತೆ ಜೋ ರೂಟ್‌, ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿದ್ದಾರೆ. ಆ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಜೋ ರೂಟ್‌ ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಮಾಸ್ಟರ್‌-ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ರಿಕಿ ಪಾಂಟಿಂಗ್‌ ಎರಡನೇ ಸ್ಥಾನದಲ್ಲಿದ್ದಾರೆ.

IND vs ENG: ʻನಡೆಯಲು ಕೂಡ ಸಾಧ್ಯವಾಗುತ್ತಿರಲಿಲ್ಲʼ-ರಿಷಭ್‌ ಪಂತ್‌ಗೆ ಆಕಾಶ್‌ ಚೋಪ್ರಾ ಮೆಚ್ಚುಗೆ!

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್ಸ್‌

ಸಚಿನ್‌ ತೆಂಡೂಲ್ಕರ್‌: 200 ಪಂದ್ಯಗಳಿಂದ 15,921 ರನ್‌ಗಳು, 51 ಶತಕಗಳು

ರಿಕಿ ಪಾಂಟಿಂಗ್:‌ 168 ಪಂದ್ಯಗಳಿಂದ 13378 ರನ್‌ಗಳು, 41 ಶತಕಗಳು

ಜೋ ರೂಟ್‌: 157 ಪಂದ್ಯಗಳಿಂದ 13292 ರನ್‌ಗಳು, 37 ಶತಕಗಳು

ಜಾಕ್‌ ಕಾಲಿಸ್‌: 166 ಪಂದ್ಯಗಳಿಂದ 13289 ರನ್‌ಗಳು, 45 ಶತಕಗಳು

ರಾಹುಲ್‌ ದ್ರಾವಿಡ್‌: 154 ಪಂದ್ಯಗಳಿಂದ 13288 ರನ್‌ಗಳು, 36 ಶತಕಗಳು



ಓಲ್ಡ್‌ ಟ್ರಾಫರ್ಡ್‌ನಲ್ಲಿ 1000 ರನ್‌ ಗಳಿಸಿದ ಜೋ ರೂಟ್‌

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಮೂರನೇ ಸ್ಥಾನಕ್ಕೆ ಪ್ರವೇಶ ಮಾಡುವ ಜೊತೆಗೆ ಜೋ ರೂಟ್‌ ಅವರು ಓಲ್ಡ್‌ ಟ್ರಾಫರ್ಡ್‌ನಲ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಅವರು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ನಲ್ಲಿ 1000 ರನ್‌ಗಳನ್ನು ಕಲೆ ಹಾಕಿದ ಮೊದಲ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

IND vs ENG: ಎರಡನೇ ದಿನ ಶುಭಮನ್‌ ಗಿಲ್‌ ಎಸಗಿದ ತಪ್ಪನ್ನು ಬಹಿರಂಗಪಡಿಸಿದ ರಿಕಿ ಪಾಂಟಿಂಗ್!

ಪ್ರಸ್ತುತ ನಡೆಯುತ್ತಿರುವ ಆಂಡರ್ಸನ್‌ ತೆಂಡೂಲ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಜೋ ರೂಟ್‌ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು ಇಲ್ಲಿಯ ತನಕ ಆಡಿದ ಏಳು ಇನಿಂಗ್ಸ್‌ಗಳಿಂದ 250ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಲಾರ್ಡ್ಸ್‌ ಟೆಸ್ಟ್‌ನಲ್ಲಿ ಇವರು ಶತಕವನ್ನು ಬಾರಿಸಿದ್ದರು. ಆ ಮೂಲಕ ಇಂಗ್ಲೆಂಡ್‌ ತಂಡದ 22 ರನ್‌ಗಳಿಗೆ ನೆರವು ನೀಡಿದ್ದರು.