ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಭಾರತ ತಂಡದಲ್ಲಿ ಮೊಹಮ್ಮದ್‌ ಸಿರಾಜ್‌ಗೆ ಅನ್ಯಾಯವಾಗುತ್ತಿದೆ ಎಂದ ಆಕಾಶ್‌ ಚೋಪ್ರಾ!

ಬಿಸಿಸಿಐನ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಆಕಾಶ್ ಚೋಪ್ರಾ ಪ್ರಶ್ನೆಗಳನ್ನು ಕೇಳಿದ್ದಾರೆ. ಮೊಹಮ್ಮದ್ ಸಿರಾಜ್ ಅವರ ಕೆಲಸದ ಹೊರೆಯ ಬಗ್ಗೆ ಯಾರೂ ಚರ್ಚೆ ಮಾಡುತ್ತಿಲ್ಲ, ಆದರೆ ಜಸ್‌ಪ್ರೀತ್‌ ಬುಮ್ರಾ ಅವರ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಮೊಹಮ್ಮದ್‌ ಸಿರಾಜ್‌ಗೆ ಅನ್ಯಾಯವಾಗುತ್ತಿದೆ ಎಂದ ಆಕಾಶ್‌ ಚೋಪ್ರಾ!

ಮೊಹಮ್ಮದ್‌ ಸಿರಾಜ್‌ಗೆ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಇಲ್ಲವೆಂದ ಆಕಾಶ್‌ ಚೋಪ್ರಾ!

Profile Ramesh Kote Jul 17, 2025 5:59 PM

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ (Aakash Chopra)ಬಿಸಿಸಿಐನ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ (Mohammed Siraj) ಅವರ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಯಾವುದೇ ಚರ್ಚೆಯಾಗಿಲ್ಲದಿರುವುದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಜಸ್‌ಪ್ರೀತ್‌ ಬುಮ್ರಾ (Jasprit Bumrah) ಅವರ ಕೆಲಸದ ಹೊರೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ, ಇದರಲ್ಲಿ ಬಿಸಿಸಿಐ ಟೆಸ್ಟ್ ಸರಣಿಗೂ ಮೊದಲೇ ಅವರು ಎಲ್ಲಾ ಪಂದ್ಯಗಳನ್ನು ಆಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಸಿರಾಜ್ ಅವರನ್ನು ಬೆಂಬಲಿಸುತ್ತಾ ಆಕಾಶ್ ಚೋಪ್ರಾ, ಟೆಸ್ಟ್ ಪಂದ್ಯಗಳಲ್ಲಿ ದೀರ್ಘ ಸ್ಪೆಲ್‌ಗಳನ್ನು ಬೌಲ್ ಮಾಡುತ್ತಾರೆ. ಆದರೆ ಇತರೆ ಆಟಗಾರರಂತೆ ಸಿರಾಜ್‌ ಅವರ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿರುವ ವಿಡಿಯೊದಲ್ಲಿ ಮಾತನಾಡಿ, "ಅವರು (ಮೊಹಮ್ಮದ್‌ ಸಿರಾಜ್‌) ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಅವರು ಬಹಳಷ್ಟು ಓವರ್‌ಗಳನ್ನು ಬೌಲ್ ಮಾಡುತ್ತಾರೆ. ಕುತೂಹಲಕಾರಿಯಾಗಿ, ಯಾರೂ ಅವರ ಬಗ್ಗೆ ಮಾತನಾಡುತ್ತಿಲ್ಲ ಮತ್ತು ನೀವು ಎಲ್ಲರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ನೀವು ಭಾವಿಸುತ್ತೀರಿ. ಆದಾಗ್ಯೂ, ಅವರು ತಮ್ಮ ಕಡೆಯಿಂದ ಶೇ 100ರಷ್ಟು ಪ್ರಯತ್ನವನ್ನು ನೀಡುತ್ತಾರೆ. ಬೌಲ್‌ ಮಾಡಲು ಬಂದಾಗಲೆಲ್ಲಾ, ಅವರು ಪೂರ್ಣ ಹೃದಯದಿಂದ ಮತ್ತು ವೇಗವಾಗಿ ಓಡುವ ಮೂಲಕ ಬೌಲ್‌ ಮಾಡುತ್ತಾರೆ," ಎಂದು ಹೇಳಿದ್ದಾರೆ.

IND vs ENG 4th Test: ಬುಮ್ರಾಗೆ ಮತ್ತೆ ವಿಶ್ರಾಂತಿ; ನಾಲ್ಕನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಹಲವು ಬದಲಾವಣೆ

ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್‌ಪ್ರೀತ್‌ ಬುಮ್ರಾ ಕೆಲಸದ ಹೊರೆಯ ನಿರ್ವಹಣೆಯಲ್ಲಿ ಮೈದಾನಕ್ಕೆ ಇಳಿದಿರಲಿಲ್ಲ. ಮೊಹಮ್ಮದ್ ಸಿರಾಜ್ ಆ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡರು. ಆಕಾಶ್ ದೀಪ್ ಜೊತೆಗೆ ಬೌಲಿಂಗ್ ವಿಬಾಗವನ್ನು ಮುನ್ನಡೆಸಿದ ಸಿರಾಜ್, ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 7 ವಿಕೆಟ್‌ಗಳನ್ನು ಕಬಳಿಸಿದರು. ಅವರ ಅದ್ಭುತ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಈ ಪಂದ್ಯವನ್ನು ಗೆದ್ದುಕೊಂಡಿತ್ತು.

ENG vs IND: ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಜೋ ರೂಟ್‌!

ಇನ್ನು ಮೊಹಮ್ಮದ್ ಸಿರಾಜ್ ಇದುವರೆಗೆ ನಡೆದಿದ್ದ ಮೂರು ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 13 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಅವರಿಂದ ಅತ್ಯುತ್ತಮ ಪ್ರದರ್ಶನ ಮೂಡಿಬಂದಿತ್ತು. ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು 1-1 ರಿಂದ ಸಮಬಲ ಮಾಡಿಕೊಂಡಿತ್ತು. ಆದರೆ ಲಾರ್ಡ್ಸ್ ಟೆಸ್ಟ್‌ನಲ್ಲಿನ ಸೋಲಿನ ನಂತರ ಟೀಮ್ ಇಂಡಿಯಾ ಈಗ 2-1 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.