IND vs ENG: ಭಾರತ ಟೆಸ್ಟ್ ತಂಡದಲ್ಲಿ ಆರ್‌ಸಿಬಿ ಆಟಗಾರನಿಗೆ ಅವಕಾಶ ನೀಡುವ ಸಾಧ್ಯತೆ!
ಇಂಗ್ಲೆಂಡ್ ವಿರುದ್ಧ ಮುಂಬರುವ 5 ಪಂದ್ಯಗಳ ಟೆಸ್ಟ್ ಸರಣಿಯ ಭಾರತ ತಂಡವನ್ನು ಪ್ರಕಟಿಸಲು ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಸಜ್ಜಾಗುತ್ತಿದೆ. ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ವಿರಾಟ್ ಕೊಹ್ಲಿ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಟೆಸ್ಟ್ ತಂಡದ ಆಯ್ಕೆ ತೀವ್ರ ಕುತೂಹಲವನ್ನು ಕೆರಳಿಸಿದೆ.

ಭಾರತ ಟೆಸ್ಟ್ ತಂಡದಲ್ಲಿ ರಜತ್ ಪಾಟಿದಾರ್‌ಗೆ ಅವಕಾಶ ಸಾಧ್ಯತೆ.

ನವದೆಹಲಿ: ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ (IND vs ENG) ಭಾರತ ತಂಡವನ್ನು ಮೇ ಕೊನೆಯ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ (Rohit sharma) ವಿದಾಯ ಹೇಳಿದ್ದಾರೆ ಹಾಗೂ ವಿರಾಟ್ ಕೊಹ್ಲಿ (Virat Kohli) ಕೂಡ ದೀರ್ಘಾವಧಿ ಸ್ವರೂಪಕ್ಕೆ ನಿವೃತ್ತಿ ಘೋಷಿಸಲು ಬಯಸಿದ್ದಾರೆ. ಇದರ ನಡುವೆ ವೇಗದ ಬೌಲಿಂಗ್ ಕಂಡೀಷನ್ಸ್ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು (Indian Test Squad) ಆಯ್ಕೆ ಮಾಡುವುದು ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಗೆ ದೊಡ್ಡ ಸವಾಲಾಗಿದೆ. ಅಂದ ಹಾಗೆ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ರೇಸ್‌ನಲ್ಲಿ ಕರುಣ್ ನಾಯರ್, ಸಾಯಿ ಸುದರ್ಶನ್ ಸೇರಿದಂತೆ ಹಲವು ಯುವ ಆಟಗಾರರು ಇದ್ದಾರೆ.
ಮತ್ತೊಂದೆಡೆ ಭಾರತ ಟೆಸ್ಟ್ ತಂಡಕ್ಕೆ ಶುಭಮನ್ ಗಿಲ್ ನೂತನ ನಾಯಕನಾಗಿ ನೇಮಕಗೊಂಡಿದ್ದಾರೆಂದು ಕೂಡ ಹೇಳಲಾಗುತ್ತಿದೆ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಆಯ್ಕೆಯನ್ನು ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಈ ಸಲ ಭಾರತ ಟೆಸ್ಟ್ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗುವ ಸಾಧ್ಯತೆ ಇದೆ. ಇದರ ಜೊತೆ ಮುಂಬೈ ತಂಡದ ಸರ್ಫರಾಝ್ ಖಾನ್ ಅವರು ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಕಲೆದುಕೊಳ್ಳಲಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಭಾರತ ಟೆಸ್ಟ್ ತಂಡಕ್ಕೆ ಶುಭಮನ್ ಗಿಲ್ ನಾಯಕನಾಗುವ ಸಾಧ್ಯತೆ, ಪಂತ್‌ಗೆ ಉಪನಾಯಕತ್ವ!
ರಜತ್ ಪಾಟಿದಾರ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್‌ಗೆ ಭಾರತ ಟೆಸ್ಟ್ ತಂಡದಲ್ಲಿ ಸರ್ಫರಾಝ್ ಖಾನ್ ಸ್ಥಾನದಲ್ಲಿ ಅವಕಾಶ ಪಡೆದುಕೊಳ್ಳಲಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳುತ್ತಿದೆ.
ಕಳೆದ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಸರ್ಫರಾಝ್ ಖಾನ್ ಸ್ಥಾನ ಪಡೆದಿದ್ದರು. ಆದರೆ, ಈ ಸರಣಿಯಲ್ಲಿ ಒಂದೇ ಒಂದು ಪಂದ್ಯದಲ್ಲಿಯೂ ಆಡಲು ಅವಕಾಶ ಸಿಕ್ಕಿರಲಿಲ್ಲ. ಅಂದ ಹಾಗೆ ಕಳೆದ ವರ್ಷಾಂತ್ಯದಲ್ಲಿ ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ ಸರ್ಫರಾಝ್ ಖಾನ್ ಅವರು ಅನ್‌ಸೋಲ್ಡ್ ಆಗಿದ್ದರು.
ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಸ್ಥಾನ ತುಂಬಬಲ್ಲ ಟಾಪ್ 5 ಆಟಗಾರರು!
2024ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ
2024ರಲ್ಲಿ ಇಂಗ್ಲೆಂಡ್ ವಿರುದ್ದದ ತವರು ಟೆಸ್ಟ್ ಸರಣಿಯಲ್ಲಿ ಸರ್ಫರಾಝ್ ಖಾನ್ ಹಾಗೂ ರಜತ್ ಪಾಟಿದಾರ್ ಅವರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ರಜತ್ ಪಾಟಿದಾರ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು ಹಾಗೂ ಮೂರು ಪಂದ್ಯಗಳನ್ನು ಆಡಿದ್ದರು. ಅವರು ಆಡಿದ್ದ ಆರು ಇನಿಂಗ್ಸ್‌ಗಳಿಂದ 63 ರನ್‌ಗಳನ್ನು ಗಳಿಸಿದ್ದರು.
ಕಳೆದ ವರ್ಷ ಇಂಗ್ಲೆಂಡ್ ವಿರುದ್ದದ ರಾಜ್‌ಕೋಟ್ ಪಂದ್ಯದಲ್ಲಿ ಸರ್ಫರಾಝ್ ಖಾನ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ ಅವರು ಸರ್ಫರಾಝ್ ಖಾನ್ ಕೂಡ ಟೆಸ್ಟ್ ತಂಡದಲ್ಲಿ ನಿಯಮಿತವಾಗಿ ಆಡುತ್ತಿದ್ದಾರೆ. ಇವರು ಆಡಿದ ಆರು ಟೆಸ್ಟ್ ಪಂದ್ಯಗಳಿಂದ 371 ರನ್‌ಗಳನ್ನು ಕಲೆ ಹಾಕಿದ್ದರು.
IND vs ENG: ʻದಯವಿಟ್ಟು ವಿದಾಯ ಹೇಳಬೇಡಿʼ-ವಿರಾಟ್ ಕೊಹ್ಲಿಗೆ ಅಂಬಾಟಿ ರಾಯುಡು ಮನವಿ!
ಜೂನ್ 20 ರಂದು ಆರಂಭವಾಗಲಿರುವ ಇಂಗ್ಲೆಂಡ್ ಟೆಸ್ಟ್ ಸರಣಿಯು ಆಗಸ್ಟ್ 5 ರಂದು ಅಂತ್ಯವಾಗಲಿದೆ. ಈ ಸರಣಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಐದು ಟೆಸ್ಟ್‌ಗಳನ್ನು ಕಾದಾಟ ನಡೆಸಲಿವೆ. ಪಂದ್ಯಗಳು ಕ್ರಮವಾಗಿ ಲೀಡ್ಸ್, ಬರ್ಮಿಂಗ್‌ಹ್ಯಾಮ್, ಲಾರ್ಡ್ಸ್, ಮ್ಯಾಂಚೆಂಸ್ಟರ್ ಹಾಗೂ ಕೆನ್ನಿಂಗ್ಟನ್ ಓವಲ್‌ನಲ್ಲಿ ಪಂದ್ಯಗಳು ನಡೆಯಲಿವೆ.