IND vs ENG: ಜೇಕಬ್ ಬೆಥೆಲ್ ಅಬ್ಬರದ ಬ್ಯಾಟಿಂಗ್‌ನಿಂದ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ-ಕಹಿ ಅನುಭವ!
ಭಾರತದ ವಿರುದ್ಧ ಎರಡನೇ ಟಿ20ಐ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಆಲ್‌ರೌಂಡರ್ ಜೇಕಬ್ ಬೆಥೆಲ್ ಇಂಗ್ಲೆಂಡ್ ತಂಡದ 4 ವಿಕೆಟ್ ಗೆಲುವಿಗೆ ನೆರವು ನೀಡಿದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ-ಕಹಿ ಅನುಭವ ಅನುಭವಿಸಿದರು.
ಜಾಕೋಬ್ ಬೆಥೆಲ್ ಅರ್ಧಶತಕ. -
ಮ್ಯಾಂಚೆಸ್ಟರ್: ಇಲ್ಲಿನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟಿ20ಐ ಪಂದ್ಯದಲ್ಲಿ(IND vs ENG) ಭಾರತದ ಎದುರು ಇಂಗ್ಲೆಂಡ್ ತಂಡ 4 ವಿಕೆಟ್‌ಗಳ ಗೆಲುವು ಪಡೆಯುವ ಮೂಲಕ ಟಿ20ಐ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆಯಿತು. ಇದರ ಶೇಯ ಇಂಗ್ಲೆಂಡ್ ಆಲ್‌ರೌಂಡರ್ ಜೇಕಬ್ ಬೆಥೆಲ್‌ಗೆ (Jacob Bethel) ಸಲ್ಲಬೇಕು. ಅವರು 191 ರನ್‌ಗಳ ಚೇಸಿಂಗ್‌ನಲ್ಲಿ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಆಡಿದರು. ಅವರು ಆಡಿದ 46 ಎಸೆತಗಳಲ್ಲಿ 76 ರನ್‌ಗಳನ್ನು ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಎರಡನೇ ಟಿ20ಐ ಪಂದ್ಯದ ಬಳಿಕ ಆರ್‌ಸಿಬಿ ಅಭಿಮಾನಿಗಳಿಗೆ ಕಹಿ-ಸಿಹಿ ಮಿಶ್ರ ಅನುಭವ ಉಂಟಾಯಿತು. ಏಕೆಂದರೆ ಜೇಕಬ್ ಬೆಥೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರ. ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ 2025 ಹಾಗೂ 2026ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಬೆಥೆಲ್ ಆಡಿದ್ದರು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಅಭಿಮಾನಿಗಳು, ಭಾರತದ ಸೋಲಿನಿಂದ ಬೇಸರ ಮಾಡಿಕೊಂಡರೆ, ಜೇಕಬ್ ಬೆಥೆಲ್ ಅವರ ಇನಿಂಗ್ಸ್‌ನಿಂದ ಸಂತಸ ಪಟ್ಟರು.
IND vs ENG: ಮೂರನೇ ಪಂದ್ಯವನ್ನು ಸೋತು ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಶ್ರೇಯಸ್ ಅಯ್ಯರ್!
2026ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಜೇಕಬ್ ಬೆಥೆಲ್ ಆಡಿದ್ದರು. ಆರಂಭಿಕ ಕೆಲ ಪಂದ್ಯಗಳ ಬಲಿಕ ಫಿಲ್ ಸಾಲ್ಟ್ ಅವರು ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ಮುಂದಿನ ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಅವರ ಸ್ಥಾನದಲ್ಲಿ ಜೇಕಬ್ ಬೆಥಲ್ ಇನಿಂಗ್ಸ್ ಆರಂಭಿಸಿದ್ದರು. ಆದರೂ ಅವರು ನಿರೀಕ್ಷಿತ ಯಶಸ್ಸು ಸಾಧಿಸುವಲ್ಲಿ ವಿಫಲರಾದರು. ಇದಾದ ಬಳಿಕ ಟೂರ್ನಿಯ ಕೊನೆಯ ಹಂತದಲ್ಲಿ ವೆಂಕಟೇಶ್ ಅಯ್ಯರ್‌ಗೆ ಇನಿಂಗ್ಸ್ ಆರಂಭಿಸಲು ಅವಕಾಶವನ್ನು ನೀಡಲಾಯಿತು. ನಂತರ ಬೆಥೆಲ್‌ಗೆ ಪ್ಲೇಯಿಂಗ್ Xiನಲ್ಲಿ ಅವಕಾಶ ನೀಡಲಾಗಿರಲಿಲ್ಲ.
ಆದರೆ, ಐಪಿಎಲ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನವನ್ನು ತೋರುವಲ್ಲಿ ವಿಫಲವಾದರೂ ಜೇಕಬ್ ಬೆಥೆಲ್ ಅವರು ಇಂಗ್ಲೆಂಡ್ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದಾರೆ. ಅವರು 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶತಕ ಸಿಡಿಸಿದ್ದ ಬೆಥೆಲ್, ಇದೀಗ ಭಾರತದ ಎದುರು ಎರಡನೇ ಪಂದ್ಯದಲ್ಲಿ ಸ್ಪೋಟಕ 76 ರನ್‌ಗಳನ್ನು ಕಲೆ ಹಾಕಿ, ಇಂಗ್ಲೆಂಡ್ ಗೆಲುವಿನಲ್ಲಿ ನೆರವು ನೀಡಿದರು. ಅದರಲ್ಲಿಯೂ ವಿಶೇಷವಾಗಿ ಬೆಥೆಲ್ ಈ ಇನಿಂಗ್ಸ್‌ನಲ್ಲಿ 5 ಸಿಕ್ಸರ್ ಹಾಗೂ 5 ಬೌಂಡರಿಗಳನ್ನು ಸಿಡಿಸಿದರು.
ಫಲಿತಾಂಶ ಕಾಣದೆ ರದ್ದಾಗಿದ್ದ ಮೊದಲನೇ ಪಂದ್ಯ
ಚೆಸ್ಟರ್-ಲೀ-ಸ್ಟ್ರೀಟ್‌ನ ರಿವರ್‌ಸೈಡ್ ಗ್ರೌಂಡ್‌ನಲ್ಲಿ ನಡೆದಿದ್ದ ಮೊದಲನೇ ಟಿ20ಐ ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದ ಭಾರತ ತಂಡ, 189 ರನ್‌ಗಳನ್ನು ಕಲೆ ಹಾಕಿತ್ತು. ಆದರೆ, ಎರಡನೇ ಇನಿಂಗ್ಸ್‌ಗೆ ಮಳೆ ಅಡ್ಡಿ ಉಂಟು ಮಾಡಿತ್ತು. ಅಂತಿಮವಾಗಿ ಈ ಪಂದ್ಯ ಫಲಿತಾಂಶ ಕಾಣದೆ ರದ್ದಾಗಿತ್ತು.
IND vs ENG: 17ನೇ ಓವರ್‌ನಲ್ಲಿ ಭಾರತವನ್ನು ಸೋಲಿಸಿದ್ದು ರವಿ ಬಿಷ್ಣೋಯ್? ಶ್ರೇಯಸ್ ಅಯ್ಯರ್ ಹೇಳಿದ್ದಿದು!
ಮೂರನೇ ಪಂದ್ಯ ಜುಲೈ 7 ರಂದು
ಇನ್ನು ಉಭಯ ತಂಡಗಳ ನಡುವಣ ಮೂರನೇ ಟಿ20ಐ ಪಂದ್ಯ ಜುಲೈ 7 ರಂದು ಟ್ರೆಂಟ್ ಬ್ರಿಡ್ಜ್‌ನ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಕಾಯ್ದುಕೊಳ್ಳಲು ಶ್ರೇಯಸ್ ಅಯ್ಯರ್ ನಾಯಕತ್ವದ ಟೀಮ್ ಇಂಡಿಯಾ ಎದುರು ನೋಡುತ್ತಿದೆ.