ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಇಂಗ್ಲೆಂಡ್‌ ಟೆಸ್ಟ್‌ ಸರಣಿ ನಿಮಿತ್ತ ರೋಹಿತ್‌, ಕೊಹ್ಲಿ ನೀಡಿದ್ದ ಸಲಹೆಯನ್ನು ರಿವೀಲ್‌ ಮಾಡಿದ ಶುಭಮನ್‌ ಗಿಲ್!

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಶುಕ್ರವಾರ ಲೀಡ್ಸ್‌ನಲ್ಲಿ ಮೊದಲನೇ ಟೆಸ್ಟ್‌ ಪಂದ್ಯವನ್ನು ಆರಂಭಿಸಲಿವೆ. ಈ ಪಂದ್ಯದ ಮೂಲಕ ಉಭಯ ತಂಡಗಳು ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಅಭಿಯಾನವನ್ನು ಆರಂಭಿಸಲಿವೆ. ಮೊಲದನೇ ಟೆಸ್ಟ್‌ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಯಕ ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ನೀಡಿದ್ದ ಸಲಹೆಯನ್ನು ರಿವೀಲ್‌ ಮಾಡಿದ್ದಾರೆ.

ರೋಹಿತ್‌, ಕೊಹ್ಲಿ ನೀಡಿದ್ದ ಸಲಹೆಯನ್ನು ರಿವೀಲ್‌ ಮಾಡಿದ ಗಿಲ್!

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಸಲಹೆಯನ್ನು ರಿವೀಲ್‌ ಮಾಡಿದ ಶುಭಮನ್‌ ಗಿಲ್‌.

Profile Ramesh Kote Jun 19, 2025 10:04 PM

ಲೀಡ್ಸ್‌: ಹದಿನೆಂಟನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಸಂದರ್ಭದಲ್ಲಿ ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ (IND vs ENG) ಸಂಬಂಧಿಸಿದಂತೆ ಸ್ಟಾರ್‌ ಬ್ಯಾಟ್ಸ್‌ಮನ್‌ಗಳಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ನೀಡಿದ್ದ ಉಪಯುಕ್ತ ಸಲಹೆಗಳನ್ನು ಭಾರತ ತಂಡದ ನಾಯಕ ಶುಭಮನ್‌ ಗಿಲ್‌ (Shubman Gill) ಬಹಿರಂಗಪಡಿಸಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಜೂನ್‌ 20 ರಂದು ಇಲ್ಲಿನ ಹೆಡಿಂಗ್ಲೆ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್‌ ಪಂದ್ಯವನ್ನು ಆರಂಭಿಸಲಿವೆ. ಈ ಪಂದ್ಯದ ಮೂಲಕ ಉಭಯ ತಂಡಗಳು ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಅಭಿಯಾನವನ್ನು ಆರಂಭಿಸಲಿವೆ. ಮೊದಲನೇ ಟೆಸ್ಟ್‌ ಪಂದ್ಯದ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಶುಭಮನ್‌ ಗಿಲ್‌ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಹಾಗೂ ಆರ್‌ ಅಶ್ವಿನ್‌ ಅವರು ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಟೆಸ್ಟ್‌ ತಂಡಕ್ಕೆ ಶುಭಮನ್‌ ಗಿಲ್‌ ಅವರನ್ನು ನೂತನ ನಾಯಕನ್ನಾಗಿ ನೇಮಿಸಲಾಗಿದೆ. ಸ್ಟಾರ್‌ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ಯುವ ತಂಡಕ್ಕೆ ಇಂಗ್ಲಿಷ್‌ ಕಂಡೀಷನ್ಸ್‌ನಲ್ಲಿ ಕಠಿಣ ಸವಾಲು ಎದುರಾಗಲಿದೆ.

IND vs ENG: ಐಪಿಎಲ್‌ ಟ್ರೋಫಿಗಿಂತ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿ ಗೆಲ್ಲುವುದು ಎಂದ ಶುಭಮನ್‌ ಗಿಲ್‌!

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶುಭಮನ್‌ ಗಿಲ್‌,"ಹೌದು, ಐಪಿಎಲ್‌ ಟೂರ್ನಿಯ ಸಂದರ್ಭದಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರನ್ನು ಭೇಟಿಯಾಗಿದ್ದೇನೆ. ಇಂಗ್ಲೆಂಡ್‌ನಲ್ಲಿ ತಮ್ಮ ಅನುಭವ ಹಾಗೂ ಅಲ್ಲಿ ಎದುರಿಸಬಹುದಾದ ಸವಾಲನ್ನು ಅವರು ನಮಗೆ ತಿಳಿಸಿದ್ದಾರೆ. ಆದರೆ, ಭಾರತದಲ್ಲಿ ಇಂಗ್ಲೆಂಡ್‌ ವಿರುದ್ಧ ಆಡಿದ್ದ ಟೆಸ್ಟ್‌ ಸರಣಿ ನಮ್ಮ ಪಾಲಿಗೆ ಅತ್ಯುತ್ತಮ ಸರಣಿಗಳಲ್ಲಿ ಒಂದಾಗಿದೆ. ಆ ಸರಣಿಯಲ್ಲಿ ಸಾಕಷ್ಟು ಮುಖ್ಯ ಆಟಗಾರರು ಲಭ್ಯರಿದ್ದರು ಹಾಗೂ ಆ ಸರಣಿಯಲ್ಲಿ ನಾವು ಹೇಗೆ ಸಾಗಿದ್ದೇವೆಂಬುದು ತುಂಬಾ ಮುಖ್ಯವಾಗಿದೆ. ಈ ಸರಣಿಯನ್ನು ನಾವು 4-1 ಅಂತರದಲ್ಲಿ ಗೆದ್ದಿದ್ದೆವು. ಇಂಗ್ಲೆಂಡ್‌ ವಿರುದ್ದ ಈ ಟೆಸ್ಟ್‌ ಸರಣಿ ಕಠಿಣವಾಗಿತ್ತು ಎಂಬುದನ್ನು ಸಮರ್ಥಸಿಲ್ಲ. ಇದೇ ಪ್ರದರ್ಶನವನ್ನು ಇಂಗ್ಲೆಂಡ್‌ನಲ್ಲಿ ತೋರಿದರೆ ಅದು ನಮಗೆ ಕೀ ಸಂಗತಿಯಾಗಲಿದೆ," ಎಂದು ಶುಭಮನ್‌ ಗಿಲ್‌ ತಿಳಿಸಿದ್ದಾರೆ.

ಭಾರತ ಟೆಸ್ಟ್‌ ತಂಡಕ್ಕೆ ಶುಭಮನ್‌ ಗಿಲ್‌ 37ನೇ ನಾಯಕ

ಇಂಗ್ಲೆಂಡ್‌ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವನ್ನು 37ನೇ ನಾಯಕನಾಗಿ ಶುಭಮನ್‌ ಗಿಲ್‌ ಮುನ್ನಡೆಸಲಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸುವುದು ದೊಡ್ಡ ಗೌರವ ಎಂದು ಗಿಲ್‌ ಹೇಳಿಕೊಂಡಿದ್ದಾರೆ. ಆದರೆ, ನಾಯಕನಾಗಿ ಗಿಲ್‌ಗೆ ಮೊದಲನೇ ಟೆಸ್ಟ್‌ ಸರಣಿಯಲ್ಲಿ ಕಠಿಣ ಸವಾಲು ಎದುರಾಗಲಿದೆ. ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲು ಉತ್ಸುಕನಾಗಿದ್ದೇನೆಂದು ಹೇಳಿದ್ದಾರೆ.

IND vs ENG 1st Test: ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಇಂಗ್ಲೆಂಡ್‌ ನಾಯಕ ಬೆನ್‌ ಸ್ಟೋಕ್ಸ್‌

"ಹೌದು, ಖಚಿತವಾಗಿ ಟೀಮ್‌ ಇಂಡಿಯಾವನ್ನು ಮುನ್ನಡೆಸುವುದು ಆಟಗಾರನಾಗಿ ದೊಡ್ಡ ಗೌರವ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಹಾಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ನಾನು ಉತ್ಸುಕತೆಯಿಂದ ಎದುರು ನೋಡುತ್ತಿದ್ದೇನೆ," ಎಂದು ಶುಭಮನ್‌ ಗಿಲ್‌ ತಿಳಿಸಿದ್ದಾರೆ.

ಸೇನಾ ರಾಷ್ಟ್ರಗಳಲ್ಲಿ ಗಿಲ್‌ ವೈಫಲ್ಯ

ಶುಭಮನ್‌ ಗಿಲ್‌ ಟೆಸ್ಟ್‌ ವೃತ್ತಿ ಜೀವನದಲ್ಲಿ 32 ಟೆಸ್ಟ್‌ ಪಂದ್ಯಗಳಿಂದ 6 ಶತಕಗಳ ಮೂಲಕ 1893 ರನ್‌ಗಳನ್ನು ಬಾರಿಸಿದ್ದಾರೆ. ಆದರೆ, ಗಿಲ್‌ ವಿದೇಶಿ ಟೆಸ್ಟ್‌ ಸರಣಿಗಳಲ್ಲಿ ವಿಫಲರಾಗುತ್ತಿದ್ದಾರೆ. ಅವರು ಸೇನಾ ರಾಷ್ಟ್ರಗಳಲ್ಲಿ ಅವರ ಬ್ಯಾಟಿಂಗ್‌ ಪ್ರದರ್ಶನ ಅಷ್ಟೊಂದು ಉತ್ತಮವಾಗಿಲ್ಲ. ಈ ರಾಷ್ಟ್ರಗಳಲ್ಲಿ ಅವರು 11 ಟೆಸ್ಟ್‌ ಪಂದ್ಯಗಳಿಂದ 25.70ರ ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ಅವರು ಮೂರು ಟೆಸ್ಟ್‌ ಪಂದ್ಯಗಳಿಂದ ಕೇವಲ 88 ರನ್‌ ಗಳಿಸಿದ್ದಾರೆ.