ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ: ಮೂರನೇ ಕ್ರಮಾಂಕದಲ್ಲಿ 13 ಸಾವಿರ ರನ್ ಗಳಿಸಿದ ಮೊದಲ ಬ್ಯಾಟರ್!
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಮೂರನೇ ಕ್ರಮಾಂಕದಲ್ಲಿ 13 ಸಾವಿರ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಆ ಮೂಲಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿ ನೂತನ ಮೈಲುಗಲ್ಲು ತಲುಪಿದ್ದಾರೆ.
ಕಿವೀಸ್ ಎದುರು ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ. -
ಆಂಕ್ಲೆಂಡ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಮತ್ತೊಂದು ಐತಿಹಾಸಿಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ (IND vs NZ) ಈ ಸಾಧನೆ ಮಾಡಿದ ಕೊಹ್ಲಿ, ಏಕದಿನ ಕ್ರಿಕೆಟ್ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 13 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ 186 ರನ್ ಗುರಿಯನ್ನು ಹಿಂಬಾಲಿಸಿದ ಭಾರತದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಅರ್ಧಶತಕದ ಸಮೀಪ ತಲುಪಿದ್ದ ಅವರು ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.
IND vs NZ 1st ODI: ಅರ್ಷದೀಪ್ ಸಿಂಗ್ ಮಾರಕ ವೇಗಕ್ಕೆ 185ಕ್ಕೆ ನ್ಯೂಜಿಲೆಂಡ್ ಆಲ್ಔಟ್!
2011ರ ವಿಶ್ವಕಪ್ ಟೂರ್ನಿಯಿಂದ ಮೂರನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ
ವಿರಾಟ್ ಕೊಹ್ಲಿ 2011ರ ಏಕದಿನ ವಿಶ್ವಕಪ್ ಟೂರ್ನಿಯಿಂದ ಭಾರತ ತಂಡದ ಪರ ಮೂರನೇ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ. ಅದಕ್ಕೂ ಮುನ್ನವೇ ಅವರು ಭಾರತ ಏಕದಿನ ತಂಡದಲ್ಲಿ ನಿಯಮಿತ ಆಟಗಾರರಾಗಿದ್ದರು. ಆರಂಭಿಕ ಹಂತದಲ್ಲಿ ವಿವಿಧ ಕ್ರಮಾಂಕಗಳಲ್ಲಿ ಬ್ಯಾಟ್ ಮಾಡಿದ್ದ ಕೊಹ್ಲಿ, ನಂತರ ಮೂರನೇ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.
ಈ ಕ್ರಮಾಂಕದಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತದ ಬ್ಯಾಟಿಂಗ್ ವಿಭಾಗದ ಪ್ರಮುಖ ಆಧಾರಸ್ತಂಭವಾಗಿ ಬೆಳೆದರು. ಅವರ ನಿರಂತರ ಪ್ರದರ್ಶನದ ಫಲವಾಗಿ 2012ರಲ್ಲಿ ಭಾರತ ತಂಡದ ಉಪನಾಯಕನ ಜವಾಬ್ದಾರಿಯನ್ನೂ ವಹಿಸಿಕೊಂಡರು. ಬಳಿಕ 2017ರ ಜನವರಿಯಲ್ಲಿ ಭಾರತ ಏಕದಿನ ತಂಡದ ನಾಯಕನಾದರು.
Sublime touch 🫡 @imVkohli gets to his 80th ODI half-century in just 35 deliveries. He also becomes the first player to get to 13000 ODI runs, batting at No 3 👏👏 #NZvIND #TeamIndia https://t.co/oiEZiY77r9
— BCCI (@BCCI) November 4, 2026
ಮೂರನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು
ಏಕದಿನ ಕ್ರಿಕೆಟ್ನಲ್ಲಿ ಮೂರನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 12,662 ರನ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 9,747 ರನ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 7,774 ರನ್ ಹಾಗೂ ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ 6,504 ರನ್ ಗಳಿಸಿ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
IND vs NZ: 4 ವಿಕೆಟ್ನೊಂದಿಗೆ ಜಾವಗಲ್ ಶ್ರೀನಾಥ್ ಒಳಗೊಂಡ ಎಲೈಟ್ ಲಿಸ್ಟ್ ಸೇರಿದ ಅರ್ಷದೀಪ್ ಸಿಂಗ್!
2027ರ ಏಕದಿನ ವಿಶ್ವಕಪ್ ಮೇಲೆ ಕೊಹ್ಲಿ ಕಣ್ಣು
ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಆಡುವ ನಿರೀಕ್ಷೆಯಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ತಮ್ಮ ರನ್ ಗಳಿಕೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಅವರಿಗೆ ಅವಕಾಶವಿದೆ. ಸದ್ಯ ಏಕದಿನ ಕ್ರಿಕೆಟ್ನಲ್ಲಿ 14 ಸಾವಿರ ರನ್ಗಳ ಮೈಲಿಗಲ್ಲಿನತ್ತ ಸಾಗುತ್ತಿರುವ ಕೊಹ್ಲಿ, 2027ರ ವಿಶ್ವಕಪ್ಗೂ ಮುನ್ನ ಈ ಸಾಧನೆ ಮಾಡುತ್ತಾರೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.