vs NZ: ಇಶಾನ್ ಕಿಶನ್ ಇನ್, ಮೊದಲನೇ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
IND vs NZ 1st T20I match Preview: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಮುಗಿಸಿದ್ದು, ಜನವರಿ 21 ರಂದು ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಕಾದಾಟ ನಡೆಸಲಿವೆ. ಮೊದಲನೇ ಪಂದ್ಯ ಬುಧವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡಯಲಿದೆ. ಈ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್ ಸೇರಿದಂತೆ ಪ್ರಮುಖ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.
ಮೊದಲನೇ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI. -
ನಾಗ್ಪುರ: ನ್ಯೂಜಿಲೆಂಡ್ ವಿರುದ್ಧ 1-2 ಅಂತರದಲ್ಲಿ ಏಕದಿನ ಸರಣಿಯನ್ನು (IND vs NZ) ಸೋತಿರುವ ಭಾರತ ತಂಡ, ಇದೀಗ ಐದು ಪಂದ್ಯಗಳ ಟಿ20ಐ ಸರಣಿಯನ್ನು ಇದೇ ತಂಡದ ವಿರುದ್ಧ ಕಾದಾಟ ನಡೆಸಲು ಸಜ್ಜಾಗುತ್ತಿದೆ. ಮೊದಲನೇ ಟಿ20ಐ ಪಂದ್ಯ ಜನವರಿ 21 ರಂದು ಬುಧವಾರ ಇಲ್ಲಿನ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಭಾರತ ತಂಡದಲ್ಲಿ ವಿಭಿನ್ನ ಆಟಗಾರರು ಆಡಲಿದ್ದಾರೆ. ಸೂರ್ಯಕುಮಾರ್ ಯಾದವ್ (Suryakumar Yadav) ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಮುಂದಿನ ತಿಂಗಳು ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯಿದ್ದು, ಈ ಸರಣಿಯು ಮಹತ್ವದ ಟೂರ್ನಿಗೆ ಪೂರ್ವ ತಯಾರಿಯಾಗಲಿದೆ.
ಟಿ20 ವಿಶ್ವಕಪ್ ಟೂರ್ನಿಯು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಸರಣಿಯ ಮೂಲಕ ಉಭಯ ತಂಡಗಳು ಇಲ್ಲಿನ ಕಂಡೀಷನ್ಸ್ ಅನ್ನು ಅರ್ಥ ಮಾಡಿಕೊಳ್ಳಲು ನೆರವಾಗಲಿದೆ. ಭಾರತ ತಂಡದಲ್ಲಿ ತಿಲಕ್ ವರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಗಾಯಕ್ಕೆ ತುತ್ತಾಗಿದ್ದಾರೆ. ತಿಲಕ್ ವರ್ಮಾ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಟಿ20ಐ ತಂಡಕ್ಕೆ ಮರಳಿದ್ದಾರೆ. ತಿಲಕ್ ವರ್ಮಾ ಆರಂಭಿಕ ಮೂರು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಕೊನೆಯ ಎರಡು ಪಂದ್ಯಗಳಿಗೆ ಅವರು ಲಭ್ಯರಾಗಬಹುದು. ಸಂಪೂರ್ಣ ಫಿಟ್ ಆದರೆ, ಅವರನ್ನು ಕೊನೆಯ ಎರಡು ಪಂದ್ಯಗಳಿಗೆ ಸೇರಿಸಹುದು. ಇಲ್ಲವಾದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರ ವಾರ್ಷಿಕ ಸಂಬಳಕ್ಕೆ ಕಡಿವಾಣ ಹಾಕಲಿರುವ ಬಿಸಿಸಿಐ?
ಹಲವು ವರ್ಷಗಳ ಬಳಿಕ ಇಶಾನ್ ಕಿಶನ್ ಅವರು ಟಿ20ಐ ತಂಡಕ್ಕೆ ಮರಳಿದ್ದಾರೆ. ಅವರು ಮೊದಲನೇ ಪಂದ್ಯದಲ್ಲಿ ಆಡಲಿದ್ದಾರೆಂದು ನಾಯಕ ಸೂರ್ಯಕುಮಾರ್ ಯಾದವ್ ಖಚಿತಪಡಿಸಿದ್ದಾರೆ. ಕಿಶನ್ ಪೂರ್ಣ ಪ್ರಮಾಣದ ಬ್ಯಾಟ್ಸ್‌ಮನ್ ಆಗಿ ಆಡಿದರೆ, ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಹಾಗೂ ಓಪನಿಂಗ್ ಬ್ಯಾಟ್ ಮಾಡಲಿದ್ದಾರೆ. ಏಕದಿನ ಸರಣಿಗೆ ವಿಶ್ರಾಂತಿ ಪಡೆದಿದ್ದ ಜಸ್‌ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಟಿ20ಐ ಸರಣಿಯಲ್ಲಿ ಆಡುವ ಮೂಲಕ ಟಿ2 ವಿಶ್ವಕಪ್ ಟೂರ್ನಿಗೆ ಸಜ್ಜಾಗಲಿದ್ದಾರೆ.
ಪಿಚ್ ರಿಪೋರ್ಟ್
ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಕ್ಕೂ ಸಮತೋಲವನ್ನು ತಂದುಕೊಡುತ್ತದೆ. ಆರಂಭದಲ್ಲಿ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ನೆರವು ನೀಡಲಿದೆ. ನಂತರ ಪಂದ್ಯ ಸಾಗುತ್ತಿದ್ದಂತೆ ಸ್ಪಿನ್ನರ್‌ಗಳು ಪಂದ್ಯದಲ್ಲಿ ಮೇಲುಗೈ ಸಾಧಿಸಲಿದ್ದಾರೆ. ಇಲ್ಲಿನ ಪಿಚ್ ಕೆಂಪು ಮಣ್ಣಿನಿಂದು ಕೂಡಿದ್ದು, ಹೊಸ ಚೆಂಡಿನಲ್ಲಿ ಬೌನ್ಸ್ ಆಗಲಿದ್ದು ವೇಗದ ಬೌಲರ್‌ಗಳ ಇದರ ಲಾಭ ಪಡೆಯಬಹುದು. ಆರಂಭದಲ್ಲಿ ಬ್ಯಾಟ್ಸ್‌ಮನ್‌ಗಳು ಸವಾಲನ್ನು ಮೆಟ್ಟಿ ನಿಂತು ಹೊಂದಿಕೊಂಡರೆ ನಂತರ ಅವರು ಹೆಚ್ಚಿನ ರನ್‌ಗಳನ್ನು ಗಳಿಸಬಹುದು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ.
WPL 2026: ಚೊಚ್ಚಲ ಅರ್ಧಶತಕ ಬಾರಿಸಿದ ಗೌತಮಿ ನಾಯಕ್‌ಗೆ ಹಾರ್ದಿಕ್ ಪಾಂಡ್ಯ ವಿಶೇಷ ಸಂದೇಶ!
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್: ಫಿನ್ ಆಲೆನ್, ಡೆವೋನ್ ಕಾನ್ವೆ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮಾರ್ಜ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್ (ನಾಯಕ), ರಚಿನ್ ರವೀಂದ್ರ, ಜೇಮ್ಸ್ ನೀಶಮ್, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಇಶ್ ಸೋಧಿ
ಏಕದಿನ ವಿಶ್ವಕಪ್ ಸನಿಹವಾಗುತ್ತದೆ ಏನು ಮಾಡುತ್ತಿದ್ದೀರಿ? ಗೌತಮ್ ಗಂಭೀರ್‌ಗೆ ಅಜಿಂಕ್ಯ ರಹಾನೆ ಪ್ರಶ್ನೆ!
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 25
ಭಾರತದ ಗೆಲುವು: 15
ನ್ಯೂಜಿಲೆಂಡ್: 10
ಪಂದ್ಯದ ವಿವರ
ಭಾರತ vs ನ್ಯೂಜಿಲೆಂಡ್
ಮೊದಲನೇ ಟಿ20ಐ ಪಂದ್ಯ
ದಿನಾಂಕ: ಜನವರಿ 21, 2026
ಸಮಯ: ಸಂಜೆ 07: 00ಕ್ಕೆ
ಸ್ಥಳ: ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ನಾಗ್ಪುರ