ನ್ಯೂಜಿಲೆಂಡ್ ವಿರುದ್ಧ ಭಾರತ ತಂಡದ ಏಕದಿನ ಸರಣಿಯನ್ನು ಸೋಲಲು ಕಾರಣ ತಿಳಿಸಿದ ಸುನೀಲ್ ಗವಾಸ್ಕರ್!
Sunil Gavaskar on India's ODI Series lost: ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ 1-2 ಅಂತರದಲ್ಲಿ ಸೋಲು ಅನುಭವಿಸಿತು. ಮೊದಲನೇ ಪಂದ್ಯವನ್ನು ಗೆದ್ದಿದ್ದ ಭಾರತ, ನಂತರ ಎರಡು ಮತ್ತು ಮೂರನೇ ಪಂದ್ಯಗಳಲ್ಲಿ ಸೋಲು ಅನುಭವಿಸಿತು. ಭಾರತದ ಸೋಲಿಗೆ ಬಲವಾದ ಕಾರಣವೇನೆಂದು ತಿಳಿಸಿದ್ದಾರೆ.
ಭಾರತ ತಂಡದ ಸೋಲಿಗೆ ಕಾರಣ ತಿಳಿಸಿದ ಗವಾಸ್ಕರ್. -
ನವದೆಹಲಿ: ವಿರಾಟ್ ಕೊಹ್ಲಿಯ (Virat Kohli) ಶತಕದ ಹೊರತಾಗಿಯೂ ಭಾರತ ತಂಡ, ಮೂರನೇ ಏಕದಿನ ಪಂದ್ಯದಲ್ಲಿ (IND vs NZ) ನ್ಯೂಜಿಲೆಂಡ್ ವಿರುದ್ಧ 41 ರನ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಲ್ಲಿ ಸೋಲು ಅನುಭವಿಸಿತು. ಅಂದ ಹಾಗೆ ಮೂರನೇ ಪಂದ್ಯದಲ್ಲಿ ಭಾರತ ತಂಡದ ಸೋಲಿನ ಬಲವಾದ ಕಾರಣವೇನೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ (Sunil Gavaskar) ಬಹಿರಂಗಪಡಿಸಿದ್ದಾರೆ. ಫೀಲ್ಡಿಂಗ್ ವೈಫಲ್ಯದಿಂದಾಗಿ ಭಾರತ ತಂಡದ ಏಕದಿನ ಸರಣಿಯನ್ನು ಕಳೆದುಕೊಂಡಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಭಾನುವಾರ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ನ್ಯೂಜಿಲೆಂಡ್ ತಂಡಕ್ಕೆ ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಆರಂಭಿಕ ಆಘಾತ ನೀಡಿದ್ದರು. ಡೆವೋನ್ ಕಾನ್ವೆ ಹಾಗೂ ಹೆನ್ರಿ ನಿಕೋಲ್ಸ್ ಅವರು ಬಹುಬೇಗ ಔಟ್ ಆಗಿದ್ದರು. ಆ ಮೂಲಕ ಕಿವೀಸ್ ತಂಡ 5 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತ್ತು.
T20 World Cup 2026: ಆಸ್ಟ್ರೇಲಿಯಾ ತಂಡಕ್ಕೆ ಆಘಾತ! ಆರಂಭಿಕ 2 ಪಂದ್ಯಗಳಿಂದ ಪ್ಯಾಟ್ ಕಮಿನ್ಸ್ ಔಟ್!
ನಂತರ ವಿಲ್ ಯಂಗ್ ಹಾಗೂ ಡ್ಯಾರಿಲ್ ಮಿಚೆಲ್ ಅವರು ಮೂರನೇ ವಿಕೆಟ್‌ಗೆ 53 ರನ್‌ಗಳನ್ನು ಕಲೆ ಹಾಕಿ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು. ವಿಲ್ ಯಂಗ್ 30 ರನ್ ಗಳಿಸಿ ಉತ್ತಮ ಆರಂಭ ಪಡೆದ ಬಳಿಕ ವಿಕೆಟ್ ಒಪ್ಪಿಸಿದ್ದರು. ನಂತರ ಡ್ಯಾರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಅವರು ತಲಾ ಶತಕಗಳನ್ನು ಬಾರಿಸಿದರು. ಆ ಮೂಲಕ ಕಿವೀಸ್ ತನ್ನ ಪಾಲಿನ 50 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 338 ರನ್‌ಗಳನ್ನು ಕಲೆ ಹಾಕಿತ್ತು.
ನಂತರ ಗುರಿ ಹಿಂಬಾಲಿಸಿದ ಭಾರತ ತಂಡ, ವಿರಾಟ್ ಕೊಹ್ಲಿ ಶತಕ, ನಿತೀಶ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರ ಅರ್ಧಶತಕಗಳ ಬಲದಿಂದ ಗೆಲುವಿನ ಸನಿಹ ಬಂದು ಆಲ್‌ಔಟ್ ಆಗಿತ್ತು. ಆ ಮೂಲಕ ಟೀಮ್ ಇಂಡಿಯಾ 41 ರನ್‌ಗಳಿಂದ ಸೋಲು ಅನುಭವಿಸಿತ್ತು. ಅಂತಿಮವಾಗಿ ಟೀಮ್ ಇಂಡಿಯಾ ಮೂರನೇ ಪಂದ್ಯವನ್ನು ಸೋತು ಏಕದಿನ ಸರಣಿಯನ್ನು ಕಳೆದುಕೊಂಡಿತು.
IND vs NZ: ವಿರಾಟ್ ಕೊಹ್ಲಿ ಹೋರಾಟದ ಶತಕ ವ್ಯರ್ಥ, ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್!
ಭಾರತದ ಸೋಲಿಗೆ ಕಾರಣ ತಿಳಿಸಿದ ಸುನೀಲ್ ಗವಾಸ್ಕರ್
"ನಾನು ಹೆಸರುಗಳನ್ನು ತೆಗೆದುಕೊಳ್ಳಲು ಬಯಸುವುದಿಲ್ಲ, ಆದರೆ ಅವರು ಒಂದೊಂದು ರನ್‌ಗಳನ್ನು ಸುಲಭವಾಗಿ ಬಿಟ್ಟುಕೊಟ್ಟಿದ್ದಾರೆ. ಹೌದು, ರೋಹಿತ್ ಶರ್ಮಾ ಚುರುಕಾಗಿದ್ದರು ಮತ್ತು ವಿರಾಟ್ ಕೊಹ್ಲಿ ಅವರು ಮೈದಾನದಲ್ಲಿ ಎಂತಹ ಕ್ರೀಡಾಪಟು ಎಂದು ನಮಗೆಲ್ಲರಿಗೂ ತಿಳಿದಿದೆ, ಆದರೆ ಫೀಲ್ಡಿಂಗ್ ಇನ್ನೂ ಹೆಚ್ಚು ಕ್ರಿಯಾಶೀಲವಾಗಿರಬಹುದೆಂದು ನನಗೆ ಅನಿಸಿತು, ” ಎಂದು ಸೈಮನ್ ದೌಲ್ ಅವರ ಸಂಭಾಷಣೆಯಲ್ಲಿ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಹೋರಾಟ ವ್ಯರ್ಥ
ವಿರಾಟ್ ಕೊಹ್ಲಿ ಅವರು ಭಾರತ ತಂಡದ ಚೇಸಿಂಗ್‌ನಲ್ಲಿ ಕಠಿಣ ಹೋರಾಟ ನಡೆಸಿದರು. ಅವರು ರೋಹಿತ್ ಶರ್ಮಾ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ವಿಫಲರಾದರು. ಆದರೆ, ವಿರಾಟ್ ಕೊಹ್ಲಿಗೆ ನಿತೀಶ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರು ದೊಡ್ಡ ಜೊತೆಯಾಟಗಳಿಗೆ ನೆರವು ನೀಡಿದ್ದರು. ಆದರೆ, ಕೊಹ್ಲಿ ದೀರ್ಘಾವಧಿ ಬ್ಯಾಟ್ ಮಾಡಿದ 124 ರನ್‌ಗಳನ್ನು ಗಳಿಸಿದ್ದರು. ಆದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ 296 ರನ್‌ಗಳಿಗೆ ಆಲ್‌ಔಟ್ ಆಯಿತು.