IND vs ENG: ಎಂಎಸ್ ಧೋನಿ ಅಲ್ಲ! ನಾಯಕನಾಗಿ ವಿರಾಟ್ ಕೊಹ್ಲಿ ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ನಲ್ಲಿ ಕಿಂಗ್!
Most Test Wins vs England: ಜೂನ್ 20 ರಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಟೆಸ್ಟ್ ಪಂದ್ಯ ಗೆದ್ದ ಭಾರತದ ನಾಯಕ ಯಾರು ಎಂದು ನೋಡಿದರೆ ಕಿಂಗ್ ಕೊಹ್ಲಿ 8 ಗೆಲುವಿನೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಕಿಂಗ್.

ನವದೆಹಲಿ: ಭಾರತ ಹಾಗೂ ಇಂಗ್ಲೆಂಡ್ ತಂಡಗಳು (IND vs ENG) ಜೂನ್ 20 ರಿಂದ ಆಗಸ್ಟ್ 5 ವರೆಗೆ ನಡೆಯಲಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಾದಾಟ ನಡೆಸಲಿವೆ. ಆ ಮೂಲಕ ಎರಡು ತಂಡಗಳ ಐಸಿಸಿಯ 2025-27ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ (WTC 2025-27) ತನ್ನ ಪಯಣ ಆರಂಭಗೊಳ್ಳಲಿದೆ. ಹಿಟ್ಮ್ಯಾನ್ ರೋಹಿತ್ ಶರ್ಮಾ ನಿವೃತ್ತಿ ಘೋಷಣೆಯ ನಂತರ ಶುಭಮನ್ ಗಿಲ್ (Shubman Gill) ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದು ಇಂಗ್ಲೆಂಡ್ ತಂಡದ ಸವಾಲು ಎದುರಿಸಲು ಸಜ್ಜಾಗಿದ್ದಾರೆ.
2016 ರಿಂದ 2021ರವರೆಗೆ ವಿರಾಟ್ ಕೊಹ್ಲಿ ಭಾರತ ತಂಡದ ಸಾರಥ್ಯ ವಹಿಸಿಕೊಂಡಿದ್ದರು. ನಂತರ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಿದ್ದರು. ಈಗ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಈ ದಿಗ್ಗಜರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರರಿಗೆ ಇಂಗ್ಲೆಂಡ್ ಕಂಡೀಷನ್ಸ್ನಲ್ಲಿ ದೊಡ್ಡ ಸವಾಲು ಎದುರಾಗಲಿದೆ.
IND vs ENG: ಸೆಹ್ವಾಗ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ಯಶಸ್ವಿ ಜೈಸ್ವಾಲ್!
ಟೆಸ್ಟ್ ಕ್ರಿಕೆಟ್ನಲ್ಲಿ ನಂ.1 ಸ್ಥಾನಕ್ಕೇರಿದ್ದ ಭಾರತ
ಭಾರತ ತಂಡದ ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೂ ಮುನ್ನ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ 2009ರಲ್ಲಿ ಟೀಮ್ ಇಂಡಿಯಾವನ್ನು ಟೆಸ್ಟ್ ಕ್ರಿಕೆಟ್ನಲ್ಲೂ ಮುನ್ನಡೆಸಿದ್ದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ತಂಡವನ್ನು ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ನ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೆ ತಲುಪಿಸಿದ್ದರು. ಆದ್ದರಿಂದ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಟೆಸ್ಟ್ ಗೆಲುವು ದಾಖಲಿಸಿದ ಟೀಮ್ ಇಂಡಿಯಾದ ನಾಯಕರ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರ ಸ್ಥಾನದಲ್ಲಿದ್ದಾರೆಂದು ಅಂದಾಜಿಸಲಾಗಿದೆ.
ವಿರಾಟ್ ಕೊಹ್ಲಿ ನಂ 1 ನಾಯಕ
ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿದ ಟೀಮ್ ಇಂಡಿಯಾ ನಾಯಕರ ಸಾಲಿನಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿ ನಿಂತಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತ ತಂಡವನ್ನು ಚೊಚ್ಚಲ ಡಬ್ಲ್ಯುಟಿಸಿ ಫೈನಲ್ಗೆ ತಲುಪಿಸಿದ್ದ ಕೊಹ್ಲಿ, ಇಂಗ್ಲೆಂಡ್ ವಿರುದ್ಧ ತಮ್ಮ ನಾಯಕತ್ವದಲ್ಲಿ ಆಡಿದ 18 ಪಂದ್ಯಗಳಲ್ಲಿ ಭಾರತ ತಂಡಕ್ಕೆ 10ರಲ್ಲಿ ಗೆಲುವು ತಂದುಕೊಟ್ಟಿದ್ದರೆ, 6ರಲ್ಲಿ ಸೋಲು ಕಂಡಿದ್ದಾರೆ. ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯಲ್ಲಿ ಟೀಮ್ ಇಂಡಿಯಾ ತವರು ಅಂಗಳದಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲು ಕಂಡಿದೆ. ಭಾರತದ ಬೇರೆ ನಾಯಕರು ಇಂಗ್ಲೆಂಡ್ ವಿರುದ್ಧ 4ಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ಗೆಲುವು ಸಾಧಿಸಿಲ್ಲ.
ರೋಹಿತ್ ಶರ್ಮಾಗೆ 2ನೇ ಸ್ಥಾನ
2024ರಲ್ಲಿ ಇಂಗ್ಲೆಂಡ್ ತಂಡವು ಭಾರತದ ಪ್ರವಾಸದ ವೇಳೆ ರೋಹಿತ್ ಶರ್ಮಾ ಸಾರಥ್ಯದ ತಂಡ, 4-1 ಅಂತರದಲ್ಲಿ ಎದುರಾಳಿ ತಂಡವನ್ನು ಮಣಿಸಿ ಸರಣಿ ಜಯಿಸಿತ್ತು.
IND vs ENG: ಮೊದಲ ಟೆಸ್ಟ್ ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್ಗೆ ಕೋಚಿಂಗ್ ಜವಾಬ್ದಾರಿ?
ಧೋನಿ ಕಳಪೆ ಸಾಧನೆ
ಭಾರತ ತಂಡಕ್ಕೆ ಬಹುತೇಕ ಎಲ್ಲಾ ಐಸಿಸಿ ಟ್ರೋಫಿ ಗೆದ್ದು ಕೊಟ್ಟಿರುವ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ಗೆಲುವಿಗಿಂತ ಸೋಲನ್ನೇ ಹೆಚ್ಚು ಕಂಡಿದ್ದಾರೆ. 15 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ಧ ಎಂಎಸ್ಡಿ ಕೇವಲ 3ರಲ್ಲಿ ಗೆಲುವು ಕಂಡರೆ, 9 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. 2011ರಲ್ಲಿ ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ವೈಟ್ವಾಷ್ ಕಂಡಿದ್ದರೆ, 2014 ರಲ್ಲಿ 3-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಭಾರತ ತಂಡ ಕೈಚೆಲ್ಲಿತ್ತು.
2012ರಲ್ಲಿ ಭಾರತ ಪ್ರವಾಸದಲ್ಲಿದ್ದ ಇಂಗ್ಲೆಂಡ್ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ರಿಂದ ಸೋಲು ಕಂಡಿತ್ತು. ಇದಾದ ನಂತರ ಮುಂದಿನ 12 ವರ್ಷಗಳ ಕಾಲ ತವರು ಅಂಗಣದಲ್ಲಿ ಟೀಮ್ ಇಂಡಿಯಾ ಗೆಲುವಿನ ಪ್ರಾಬಲ್ಯ ಮೆರೆದಿದೆ. ಎಂಎಸ್ ಧೋನಿ ಸಾರಥ್ಯದಲ್ಲಿ ಭಾರತ ತಂಡ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ವಿರಾಟ್ ಕೊಹ್ಲಿ 40 ಪಂದ್ಯಗಳಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಂತ ಯಶಸ್ವಿ ನಾಯಕ ಎಂಬ ದಾಖಲೆ ಬರೆದಿದ್ದಾರೆ.