IND vs ENG: ಸತತ 14 ಬಾರಿ ಟಾಸ್ ಸೋತು ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಭಾರತ!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ಮತ್ತೊಮ್ಮೆ ಟಾಸ್ ಸೋತಿದ್ದಾರೆ. ಇದರೊಂದಿಗೆ ಭಾರತ ತಂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿಯೂ ಸತತ 14 ಬಾರಿ ಟಾಸ್ ಸೋತಂತಾಗಿದೆ. ಆ ಮೂಲಕ ಶುಭಮನ್ ಗಿಲ್ ನಾಯಕತ್ವದ ಟೀಮ್ ಇಂಡಿಯಾ ಅನಗತ್ಯ ದಾಖಲೆಯನ್ನು ಹೆಗಲೇರಿಸಿಕೊಂಡಿದೆ.

ಸತತ 14 ಪಂದ್ಯಗಳಲ್ಲಿ ಟಾಸ್ ಸೋತು ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ!

ಮ್ಯಾಂಚೆಸ್ಟರ್: ಟೆಸ್ಟ್ ಪಂದ್ಯದಲ್ಲಿ (IND vs ENG) ಟಾಸ್ ಗೆಲ್ಲುವುದು ಭಾರತ ಕ್ರಿಕೆಟ್ ತಂಡಕ್ಕೆ ಇದೀಗ ಕಠಿಣ ಕೆಲಸವಾಗಿದೆ. ಜುಲೈ 23 ರಂದು ಬುಧವಾರ ಭಾರತ ತಂಡದ ಹೊಸ ಟೆಸ್ಟ್ ನಾಯಕ ಶುಭಮನ್ ಗಿಲ್ (Shubman Gill) ಈ ಸರಣಿಯಲ್ಲಿ ಸತತ ನಾಲ್ಕನೇ ಬಾರಿ ಟಾಸ್ ಸೋತರು. ಇದು ಭಾರತದ ನಿರಾಶಾದಾಯಕ ಸರಣಿಯನ್ನು ಮತ್ತಷ್ಟು ಹೆಚ್ಚಿಸಿತು. ಜನವರಿಯಲ್ಲಿ ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20ಐ ಪಂದ್ಯದಲ್ಲಿ ಭಾರತ ಕೊನೆಯ ಬಾರಿ ಪುರುಷರ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಟಾಸ್ ಗೆದ್ದಿತ್ತು. ಅಂದಿನಿಂದ ಇಲ್ಲಿಯವರೆಗೆ ಭಾರತ ತಂಡ (India) ಎಲ್ಲಾ ಸ್ವರೂಪಗಳಲ್ಲಿ ಸತತ 14 ಬಾರಿ ಟಾಸ್ ಸೋತಿದೆ. ಆ ಮೂಲಕ ಅನಗತ್ಯ ದಾಖಲೆಯನ್ನು ಹೆಗಲೇರಿಸಿಕೊಂಡಿದೆ.
ಇಲ್ಲಿನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಜುಲೈ 23 ರಂದು ಆರಂಭವಾದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಅನ್ನು ಸೋತಿತು. ಇದರೊಂದಿಗೆ ಭಾರತ ತಂಡ ಸತತವಾಗಿ ಟಾಸ್ ಅನಗತ್ಯ ದಾಖಲೆಯನ್ನು ತನ್ನ ಮೇಲೆ ಎಳೆದುಕೊಂಡಿದೆ. ರಾಜ್‌ಕೋಟ್‌ನಲ್ಲಿ ಆಡಿದ ಟಿ20ಐ ಪಂದ್ಯದ ನಂತರ ಭಾರತ ಸತತವಾಗಿ ಟಾಸ್ ಸೋಲುತ್ತಾ ಬಂದಿದೆ. ಇದರಲ್ಲಿ ಎರಡು ಟಿ20ಐ ಪಂದ್ಯಗಳಲ್ಲಿ, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಟಾಸ್ ಸೋತಿದೆ. ಲಂಡನ್ ಲಾರ್ಡ್ಸ್ ಟೆಸ್ಟ್ ವೇಳೆ ಭಾರತ ತಡ, ವೆಸ್ಟ್ ಇಂಡೀಸ್‌ನ ಸತತ 12 ಟಾಸ್ ಸೋಲುಗಳ ಅನಗತ್ಯ ದಾಖಲೆಯನ್ನು ಮುರಿದಿತ್ತು.
IND vs ENG: IND vs ENG: ಕನ್ನಡಿಗ ಕರುಣ್ ನಾಯರ್‌ರ ಟೆಸ್ಟ್ ವೃತ್ತಿ ಜೀವನ ಅಂತ್ಯ? ಫ್ಯಾನ್ಸ್ ಪ್ರತಿಕ್ರಿಯೆ!
ಟಾಸ್ ಗೆದ್ದ ಬೆನ್ ಸ್ಟೋಕ್ಸ್
ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೋಡ ಕವಿದ ವಾತಾವರಣ ಮತ್ತು ಹಸಿರು ಪಿಚ್ ತಮ್ಮ ಬೌಲರ್‌ಗಳಿಗೆ ಒಳ್ಳೆಯದು ಎಂದು ಅವರು ಭಾವಿಸಿದ್ದರು. ಸರಣಿಯ ತೀವ್ರತೆಯ ಬಗ್ಗೆಯೂ ಅವರು ಮಾತನಾಡಿದರು ಮತ್ತು ಆಡುವ XI ಗೆ ಲಿಯಾಮ್ ಡಾಸನ್ ಮರಳುವುದನ್ನು ದೃಢಪಡಿಸಿದರು.
ಭಾರತ ತಂಡದಲ್ಲಿ 3 ಬದಲಾವಣೆ
ಗಾಯದ ಸಮಸ್ಯೆ ಮತ್ತು ಕಳಪೆ ಫಾರ್ಮ್ ಕಾರಣದಿಂದಾಗಿ ಭಾರತ ಮೂರು ಬದಲಾವಣೆಗಳನ್ನು ಮಾಡಿಕೊಂಡಿದೆ. ಕರುಣ್ ನಾಯರ್ ಬದಲಿಗೆ ಸಾಯಿ ಸುದರ್ಶನ್, ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಶಾರ್ದುಲ್ ಠಾಕೂರ್ ಮತ್ತು ಆಕಾಶ್ ದೀಪ್ ಅವರ ಸ್ಥಾನದಲ್ಲಿ ಅನ್ಶುಲ್ ಕಾಂಬೋಜ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಜಸ್‌ಪ್ರೀತ್ ಬುಮ್ರಾ ತಮ್ಮ ಮೂರನೇ ಟೆಸ್ಟ್ ಪಂದ್ಯವನ್ನು ಆಡಲು ತಂಡಕ್ಕೆ ಮರಳಿದರು. ಬೆರಳಿನ ಗಾಯದಿಂದ ಚೇತರಿಸಿಕೊಂಡ ನಂತರ ರಿಷಭ್ ಪಂತ್ ವಿಕೆಟ್ ಕೀಪಿಂಗ್ ಕರ್ತವ್ಯಗಳನ್ನು ವಹಿಸಿಕೊಂಡರು.
🚨 Toss Update 🚨
— BCCI (@BCCI) July 23, 2025
England win the toss and elect to bowl in Manchester.
Updates ▶️ https://t.co/L1EVgGu4SI#TeamIndia | #ENGvIND pic.twitter.com/Gn8NzxZZkQ
ಭಾರತದ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಅನ್ಶುಲ್ ಕಾಂಬೋಜ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್ ಪ್ಲೇಯಿಂಗ್ XI: ಝ್ಯಾಕ್ ಕ್ರಾವ್ಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿ.ಕೀ), ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡೆನ್ ಕಾರ್ಸ್, ಜೋಫ್ರಾ ಆರ್ಚರ್