ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಭಾರತ ತಂಡದ ರೇಸ್‌ನಿಂದ ಇಬ್ಬರು ಸ್ಟಾರ್‌ ಆಟಗಾರರು ಔಟ್‌!

2025ರ ಏಷ್ಯಾ ಕಪ್ ಟೂರ್ನಿ ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗಲಿದೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡಲಿದೆ. ಅಂದ ಹಾಗೆ ಭಾರತ ಏಷ್ಯಾ ಕಪ್‌ ತಂಡಕ್ಕೆ ಶ್ರೇಯಸ್‌ ಅಯ್ಯರ್‌ ಹಾಗೂ ಯಶಸ್ವಿ ಜೈಸ್ವಾಲ್‌ ಆಡುವುದು ಅನುಮಾನ ಎಂದ ಹೇಳಲಾಗುತ್ತಿದೆ.

ಭಾರತ ಏಷ್ಯಾ ಕಪ್‌ ತಂಡದಿಂದ ಶ್ರೇಯಸ್‌, ಜೈಸ್ವಾಲ್‌ ಔಟ್‌!

ಏಷ್ಯಾ ಕಪ್‌ ಭಾರತ ತಂಡದಿಂದ ಜೈಸ್ವಾಲ್‌, ಅಯ್ಯರ್‌ ಔಟ್‌?

Profile Ramesh Kote Aug 15, 2025 5:59 PM

ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿ ಸೆಪ್ಟಂಬರ್‌ 9 ರಂದು ಆರಂಭವಾಗಲಿದೆ. 2026ರಲ್ಲಿ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಇರುವ ಕಾರಣ ಈ ಬಾರಿ ಏಷ್ಯಾ ಕಪ್‌ ಟೂರ್ನಿಯು ಕೂಡ ಟಿ20 ಸ್ವರೂಪದಲ್ಲಿ ನಡೆಯಲಿದೆ. ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡುವ ಮೂಲಕ ಭಾರತ ತಂಡ (India) ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದರ ನಂತರ ಸೆಪ್ಟೆಂಬರ್ 14 ರಂದು ದುಬೈನಲ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಏಷ್ಯಾ ಕಪ್‌ ಟೂರ್ನಿಗಾಗಿ ಭಾರತ ತಂಡವನ್ನು ಕೆಲವೇ ದಿನಗಳಲ್ಲಿ ಘೋಷಿಸಲಾಗುವುದು. ಇದೀಗ ಸ್ಟಾರ್ ಓಪನರ್ ಯಶಸ್ವಿ ಜೈಸ್ವಾಲ್‌ಗೆ (Yashasvi jaiswal) ಏಷ್ಯಾ ಕಪ್‌ ಟೂರ್ನಿಯಲ್ಲಿ ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಯಶಸ್ವಿ ಜೈಸ್ವಾಲ್‌ ಜೊತೆಗೆ ಶ್ರೇಯಸ್‌ ಅಯ್ಯರ್‌ಗೂ ಸ್ಥಾನ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

23ರ ವರ್ಷದ ಯಶಸ್ವಿ ಜೈಸ್ವಾಲ್ ಇಲ್ಲಿಯವರೆಗೆ ಭಾರತ ಪರ ಮೂರು ಸ್ವರೂಪಗಳನ್ನು ಆಡಿದ್ದಾರೆ. ಜೈಸ್ವಾಲ್ ತಮ್ಮ ಆಕ್ರಮಣಕಾರಿ ಆಟಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಟೆಸ್ಟ್ ಮತ್ತು ಟಿ20ಐ ತಂಡಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ ದೊಡ್ಡ ಹೆಸರು ಮಾಡಿದ ನಂತರ ಜೈಸ್ವಾಲ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಟಿ20ಐ ಗಳಲ್ಲಿಯೂ ಶತಕ ಸಿಡಿಸಿದ್ದಾರೆ. ಆದಾಗ್ಯೂ, ಇದರ ಹೊರತಾಗಿಯೂ ಅವರಿಗೆ 2025ರ ಏಷ್ಯಾ ಕಪ್‌ನಲ್ಲಿ ಅವಕಾಶ ಸಿಗುವುದು ಅನುಮಾನ.

ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತವನ್ನು ಮುನ್ನಡೆಸಬಲ್ಲ ಮೂವರು ಆಟಗಾರರು!

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಆಯ್ಕೆದಾರರು ಜೈಸ್ವಾಲ್ ಅವರನ್ನು ಟೆಸ್ಟ್ ಸ್ವರೂಪದತ್ತ ಗಮನಹರಿಸುವಂತೆ ಕೇಳಿಕೊಂಡಿದ್ದಾರೆ. ಹಾಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ. ಟಿ20ಯಲ್ಲಿ ಅವರ ಅಗಾಧ ಯಶಸ್ಸಿನ ಹೊರತಾಗಿಯೂ, ಅವರು ತವರು (ಭಾರತ) ಮತ್ತು ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೆಸ್ಟ್ ಸ್ವರೂಪದತ್ತ ಹೆಚ್ಚು ಗಮನಹರಿಸಲು ಅವರಿಗೆ ಸೂಚನೆ ನೀಡಲಾಗಿದೆ.

ಟೆಸ್ಟ್‌ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಜೈಸ್ವಾಲ್‌

ಯಶಸ್ವಿ ಜೈಸ್ವಾಲ್ ಭಾರತದ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಅವರು ಇದೀಗ ಟೆಸ್ಟ್ ಸ್ವರೂಪದಲ್ಲಿ ಟೀಮ್ ಇಂಡಿಯಾದ ಮೊದಲ ಆಯ್ಕೆಯ ಆರಂಭಿಕ ಆಟಗಾರರಾಗಿದ್ದಾರೆ. ಜೈಸ್ವಾಲ್ ಇದುವರೆಗೆ 24 ಟೆಸ್ಟ್‌ಗಳಲ್ಲಿ 50.2ರ ಸರಾಸರಿಯಲ್ಲಿ 2209 ರನ್ ಗಳಿಸಿದ್ದಾರೆ. ಅವರು ಟೆಸ್ಟ್‌ಗಳಲ್ಲಿ 6 ಶತಕಗಳು ಮತ್ತು 12 ಅರ್ಧಶತಕಗಳನ್ನು ಹೊಂದಿದ್ದಾರೆ.

Asia Cup 2025: ಏಷ್ಯಾ ಕಪ್‌ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಆತಂಕ

ಏಷ್ಯಾಕಪ್‌ ಟೂರ್ನಿಯಿಂದ ಶ್ರೇಯಸ್‌ ಅಯ್ಯರ್‌ ಔಟ್‌

2025ರ ಏಷ್ಯಾ ಕಪ್‌ ಟೂರ್ನಿಯಲ್ಲಿ ಶ್ರೇಯಸ್‌ ಅಯ್ಯರ್‌ ಆಡುವುದು ಕೂಡ ಅನುಮಾನ ಎಂದು ಮೂಲಗಳು ತಿಳಿಸಿವೆ. "ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್‌ ಶರ್ಮಾ ಅವರು ಇನಿಂಗ್ಸ್‌ ಆರಂಭಿಸುವುದು ಬಹುತೇಕ ಖಚಿತ. ಗಿಲ್‌ ಟಿ20ಐ ತಂಡದಿಂದ ಹೊರಗುಳಿದಿದ್ದಾರೆ. ಶ್ರೇಯಸ್‌ ಅಯ್ಯರ್‌ ಅವರು ಕೂಡ ಏಷ್ಯಾ ಕಪ್‌ ಟೂರ್ನಿಯ ತಂಡಕ್ಕೆ ಆಯ್ಕೆಯಾಗುವುದು ಅನುಮಾನ. ಇಂಗ್ಲೆಂಡ್‌ ಟೆಸ್ಟ್‌ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದ ಯಶಸ್ವಿ ಜೈಸ್ವಾಲ್‌ಗೂ ಅವಕಾಶ ಇಲ್ಲ," ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.