ಬಾಂಗ್ಲಾದೇಶ ಪ್ರವಾಸ ಬೆನ್ನಲ್ಲೆ, ಶ್ರೀಲಂಕಾ ಪ್ರವಾಸವನ್ನು ರದ್ದುಗೊಳಿಸಿದ ಬಿಸಿಸಿಐ? ವರದಿ
ಭಾರತ ಕ್ರಿಕೆಟ್ ತಂಡದ ಬಾಂಗ್ಲಾದೇಶ ಪ್ರವಾಸ ರದ್ದಾದ ಬಳಿಕ ಶ್ರೀಲಂಕಾ ಕ್ರಿಕೆಟ್ ಮಂಡಳಿ, ಭಾರತ ತಂಡಕ್ಕೆ ಪ್ರವಾಸಕ್ಕೆ ಆಹ್ವಾನ ನೀಡಿತ್ತು. ಆದರೆ ಬಿಸಿಸಿಐ ಅದನ್ನು ತಿರಸ್ಕರಿಸಿದೆ. ಇದರ ನಡುವೆ ಅಭಿಮಾನಿಗಳು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಮೈದಾನದಲ್ಲಿ ನೋಡಲು ಇನ್ನಷ್ಟು ಹೆಚ್ಚಿನ ಸಮಯ ಕಾಯಬೇಕಾಗುತ್ತದೆ.

ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಪ್ರಸ್ತಾಪವನ್ನು ತಿರಸ್ಕರಿಸಿದ ಬಿಸಿಸಿಐ.

ನವದೆಹಲಿ: ರಾಜಕೀಯ ಕಾರಣಗಳಿಂದಾಗಿ ಭಾರತ ಕ್ರಿಕೆಟ್ ತಂಡ (India) ಮುಂದಿನ ತಿಂಗಳು ಹಮ್ಮಿಕೊಳ್ಳಬೇಕಾಗಿದ್ದ ಬಾಂಗ್ಲಾದೇಶ ಪ್ರವಾಸವನ್ನು ರದ್ದುಗೊಳಿಸಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಿತ್ತು. ಈ ಪ್ರವಾಸ ರದ್ದಾದ ನಂತರ, ಶ್ರೀಲಂಕಾ ಕ್ರಿಕೆಟ್ ಮಂಡಳಿಯು (SLC) ಭಾರತ ತಮ್ಮ ರಾಷ್ಟ್ರಕ್ಕೆ ಪ್ರವಾಸ ಮಾಡಲು ಅವಕಾಶ ನೀಡಿತ್ತು. ಆದರೆ ಮಾಧ್ಯಮ ವರದಿಗಳ ಪ್ರಕಾರ, ಬಿಸಿಸಿಐ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ. ಹಾಗಾಗಿ ಅಭಿಮಾನಿಗಳು ಇದೀಗ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ (Virat Kohli) ದಂತಕಥೆಗಳನ್ನು ಮೈದಾನದಲ್ಲಿ ನೋಡಲು ಇನ್ನಷ್ಟು ಹೆಚ್ಚು ಸಮಯ ಕಾಯಬೇಕಾಗುತ್ತದೆ. ರೋಹಿತ್ ಮತ್ತು ವಿರಾಟ್ ಟೆಸ್ಟ್ ಮತ್ತು ಟಿ20ಐ ಕ್ರಿಕೆಟ್‌ನಿಂದ ಗಳಿಂದ ನಿವೃತ್ತರಾಗಿರುವುದರಿಂದ ಈಗ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಾರೆ.
ಶ್ರೀಲಂಕಾ ಕ್ರಿಕೆಟ್ ಅಧಿಕಾರಿಯೊಬ್ಬರು 'ಟೆಲಿಕಾಮ್ ಏಷ್ಯಾ ಸ್ಪೋರ್ಟ್ಸ್'ಗೆ ಬಿಸಿಸಿಐನಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ಹೇಳಿದ್ದಾರೆ. ಸರಣಿಯ ಕುರಿತು ಕೆಲವು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ, ಆದರೆ 'ಸ್ಪೋರ್ಟ್ಸ್ ತಕ್' ವರದಿಯ ಪ್ರಕಾರ, ಶ್ರೀಲಂಕಾದೊಂದಿಗೆ ಸರಣಿಯ ಸಾಧ್ಯತೆಗಳು ತುಂಬಾ ಕಡಿಮೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.
IND vs ENG: ಕೆಎಲ್ ರಾಹುಲ್ ಬ್ಯಾಟಿಂಗ್ ಬದಲಾವಣೆ ಬಗ್ಗೆ ದೊಡ್ಡ ಹೇಳಿಕೆ ಕೊಟ್ಟ ರವಿ ಶಾಸ್ತಿ!
ಭಾರತ ಕ್ರಿಕೆಟ್ ತಂಡ, ಇಂಗ್ಲೆಂಡ್ ಪ್ರವಾಸದಲ್ಲಿ ಐದು ಟೆಸ್ಟ್ ಸರಣಿಯನ್ನು ಆಡುತ್ತಿದೆ. ಟೀಮ್ ಇಂಡಿಯಾ ಪ್ರಸ್ತುತ ಈ ಸರಣಿಯಲ್ಲಿ 1-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ. ಬಿಸಿಸಿಐ ಶ್ರೀಲಂಕಾ ಪ್ರವಾಸದ ಪ್ರಸ್ತಾಪವನ್ನು ತಿರಸ್ಕರಿಸಿದರೆ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಕ್ರಿಕೆಟ್ ಕಮ್‌ಬ್ಯಾಕ್‌ಗೆ ಇನ್ನೂ ಹೆಚ್ಚಿನ ಸಮಯ ತೆಗೆದುಕೊಳ್ಳಲಿದೆ. ಟೆಸ್ಟ್ ಹಾಗೂ ಟಿ20ಐ ಕ್ರಿಕೆಟ್‌ಗೆ ವಿದಾಯ ಹೇಳಿರುವುದ ಈ ಇಬ್ಬರು ದಂತಕಥೆಗಳು ಅಂಗಣದಲ್ಲಿ ಕಣ್ತುಂಬಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಬಳಿಕ ಟೀಮ್ ಇಂಡಿಯಾ ಪರ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಅಂದಿನಿಂದ ಭಾರತ ತಂಡ ಒಂದೇ ಒಂದು ಏಕದಿನ ಪಂದ್ಯವನ್ನು ಕೂಡ ಆಡಿಲ್ಲ. ಶ್ರೀಲಂಕಾ ಮತ್ತು ಬಾಂಗ್ಲಾದೇಶದೊಂದಿಗೆ ಯಾವುದೇ ಏಕದಿನ ಸರಣಿ ಇಲ್ಲದಿದ್ದರೆ, ಈ ಎರಡು ದೈತ್ಯರು ಈ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳವರೆಗೂ ಕಾಯಬೇಕಾಗುತ್ತದೆ.