ಇಂಗ್ಲೆಂಡ್ ವಿರುದ್ದದ ಏಕದಿನ, ಟಿ20 ಸರಣಿಗಳಿಗೆ ಭಾರತ ಮಹಿಳಾ ತಂಡ ಪ್ರಕಟ!
ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗಳಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಎರಡೂ ಸ್ವರೂಪಗಳಲ್ಲಿ ಹರ್ಮನ್‌ಪ್ರೀತ್ ಕೌರ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಗಳಿಗೆ ಭಾರತ ಮಹಿಳಾ ತಂಡ ಪ್ರಕಟ.

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗಳಿಗೆ (INDW vs ENGW) ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಮೇ 15 ರಂದು ಪ್ರಕಟಿಸಿದೆ. ಮೊದಲಿಗೆ ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದಾದ ನಂತರ ಎರಡೂ ತಂಡಗಳು ಏಕದಿನ ಸರಣಿಯಲ್ಲಿ ಕಾದಾಟ ನಡೆಸಲಿವೆ. ಜೂನ್ 28 ರಂದು ಟಿ20ಐ ಸರಣಿ ಆರಂಭವಾಗಲಿದೆ. ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 16 ರಂದು ನಡೆಯಲಿದೆ. ಈ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು 8 ಪಂದ್ಯಗಳು ನಡೆಯಲಿವೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20ಐ ಸರಣಿಗಳಿಗೆ ತಂಡದ ನಾಯಕಿಯಾಗಿ ಅನುಭವಿ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ಅವರನ್ನು ನೇಮಿಸಲಾಗಿದೆ. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ತಂಡದ ಉಪನಾಯಕಿಯಾಗಿ ನೇಮಿಸಲಾಗಿದೆ. ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಶಫಾಲಿ ವರ್ಮಾ ತಂಡಕ್ಕೆ ಮರಳಿದ್ದಾರೆ. ಇದಲ್ಲದೆ, ಸಯಾಲಿ ಸತ್ಘರೆ ಅವರನ್ನು ಟಿ20ಐ ತಂಡದಲ್ಲಿ ಅವಕಾಶ ನೀಡಲಾಗಿದೆ. ಏಕದಿನ ತಂಡದಲ್ಲಿ ಶ್ರೀ ಚರಣಿ, ಶುಚಿ ಉಪಾಧ್ಯಾಯ, ಕ್ರಾಂತಿ ಗೌಡ್, ಅಮಂಜೋತ್ ಕೌರ್ ಮತ್ತು ಸ್ನೇಹ ರಾಣಾ ಅವರನ್ನು ಉಳಿಸಿಕೊಳ್ಳಲಾಗಿದೆ.
INDW vs SLW: ಶ್ರೀಲಂಕಾ ತಂಡವನ್ನು ಮಣಿಸಿ ತ್ರಿಕೋನ ಸರಣಿಯನ್ನು ಮುಡಿಗೇರಿಸಿಕೊಂಡ ಭಾರತ ವನಿತೆಯರು!
ಭಾರತ ತಂಡಕ್ಕೆ ಮಹತ್ವದ ಸರಣಿ
ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಇಂಗ್ಲೆಂಡ್ ವಿರುದ್ಧದ ಈ ಸರಣಿ ಭಾರತ ತಂಡಕ್ಕೆ ಬಹಳ ಮುಖ್ಯವಾಗಿದೆ. ಭಾರತ ತಂಡ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸುವ ಹಕ್ಕನ್ನು ಹೊಂದಿದೆ. ಈ ಸೀಮಿತ ಓವರ್‌ಗಳ ಸರಣಿಯಲ್ಲಿ ತಯಾರಿ ನಡೆಸಲು ಟೀಮ್ ಇಂಡಿಯಾಕ್ಕೆ ಇದೊಂದು ಉತ್ತಮ ಅವಕಾಶ. ಇದರೊಂದಿಗೆ ಭಾರತ ತಂಡದ ವಿಶ್ವಕಪ್ ತಂಡವನ್ನು ಬಹುತೇಕ ಈ ಸರಣಿಗಳಲ್ಲಿಯೇ ನಿರ್ಧರಿಸಲಾಗುವುದು ಎಂದು ಹೇಳಲಾಗುತ್ತಿದೆ.
ಇಂಗ್ಲೆಂಡ್ ಟಿ20ಐ ಸರಣಿಗೆ ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕ), ಸ್ಮೃತಿ ಮಂಧಾನ (ಉಪ ನಾಯಕ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿ.ಕೀ), ಯಾಸ್ತಿಕಾ ಭಾಟಿಯಾ (ವಿ.ಕೀ), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಶ್ರೀ ಚರಣಿ, ಶುಚಿ ಉಪಾಧ್ಯಾಯ, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ಸಯಾಲಿ ಸತ್ಘರೆ
🚨NEWS - Team India (Senior Women) squads for the upcoming England tour announced 🚨
— BCCI Women (@BCCIWomen) May 15, 2025
A look at the squads for T20Is and ODIs 👇#TeamIndia | #ENGvIND pic.twitter.com/lrUMzF09f8
ಇಂಗ್ಲೆಂಡ್ ಏಕದಿನ ಸರಣಿಗೆ ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿ.ಕೀ), ಯಾಸ್ತಿಕಾ ಭಾಟಿಯಾ (ವಿ.ಕೀ), ತೇಜಲ್ ಹಸ್ಸಾಬ್ನಿಸ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಶ್ರೀ ಚರಣಿ, ಶುಚಿ ಉಪಾಧ್ಯಾಯ್, ಅಮನ್ಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ಸಯಾಲಿ ಸತ್ಘರೆ