MI vs LSG: ತವರು ಅಂಗಣದಲ್ಲಿ ಲಖನೌ ಎದುರು ಸೇಡು ತೀರಿಸಿಕೊಳ್ಳಲು ಮುಂಬೈ ಸಜ್ಜು!
MI vs LSG Match Preview: ತಲಾ 5 ಪಂದ್ಯಗಳನ್ನು ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಏಪ್ರಿಲ್ 25ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 45ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ.

ಮುಂಬೈ ಇಂಡಿಯನ್ಸ್ vs ಲಖನೌ ಸೂಪರ್ ಜಯಂಟ್ಸ್.

ಮುಂಬೈ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ತಲಾ 5 ಪಂದ್ಯಗಳನ್ನು ಗೆದ್ದು ಪ್ಲೇಆಫ್ಸ್ ರೇಸ್‌ನಲ್ಲಿರುವ ಮುಂಬೈ ಇಂಡಿಯನ್ಸ್ (MI) ಹಾಗೂ ಲಖನೌ ಸೂಪರ್ ಜಯಂಟ್ಸ್ (LSG) ತಂಡಗಳು ಭಾನುವಾರ ಟೂರ್ನಿಯ 45ನೇ ಪಂದ್ಯದಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿವೆ. ಉಭಯ ತಂಡಗಳ ನಡುವಣ ಈ ಕಾದಾಟಕ್ಕೆ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ. ಈ ಎರಡೂ ತಂಡಗಳು ತಲಾ 10 ಅಂಕಗಳನ್ನು ಕಲೆ ಹಾಕಿದ್ದರೂ ಹೆಚ್ಚಿನ ರನ್ ರೇಟ್ ಹೊಂದಿರುವ ಕಾರಣ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ (+0.673), ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದರೆ, ಎಲ್‌ಎಸ್‌ಜಿ ( -0.054) ಕಡಿಮೆ ರನ್ ರೇಟ್ ಹೊಂದಿರುವುದರಿಂದ ಆರನೇ ಸ್ಥಾನದಲ್ಲಿದೆ.
ಟೂರ್ನಿಯ ಆರಂಭಿಕ 5 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದಿದ್ದು ಕೇವಲ ಒಂದೇ ಒಂದು ಪಂದ್ಯ ಮಾತ್ರ. ನಂತರ ಐದು ಬಾರಿ ಚಾಂಪಿಯನ್ಸ್ ಸತತ ನಾಲ್ಕು ಪಂದ್ಯಗಳನ್ನು ಗೆದ್ದು ಟೂರ್ನಿಯಲ್ಲಿ ಶಕ್ತಿಯುತವಾಗಿ ಕಮ್‌ಬ್ಯಾಕ್ ಮಾಡಿದೆ. ತನ್ನ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 7 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು.
IPL 2025: ಮತ್ತೆ ಕೆಕೆಆರ್ ತಂಡ ಸೇರಿದ ಉಮ್ರಾನ್ ಮಲಿಕ್
ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜಯಂಟ್ಸ್ ಕೂಡ ಇಲ್ಲಿಯ ತನಕ ಆಡಿದ 9 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಹಾಗೂ 4ರಲ್ಲಿ ಸೋಲು ಅನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತನ್ನ ಕೊನೆಯ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್, 8 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಕಮ್‌ಬ್ಯಾಕ್ ಮಾಡಲು ಎಲ್‌ಎಸ್‌ಜಿ ಎದುರು ನೋಡುತ್ತಿದೆ.
ಈ ಎರಡೂ ತಂಡಗಳು ಲಖನೌದ ಏಕನಾ ಕ್ರೀಡಾಂಗಣದಲ್ಲಿ ಈ ಸೀಸನ್‌ನ ಮೊದಲ ಬಾರಿ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ 12 ರನ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮಿಚೆಲ್ ಮಾರ್ಷ್, ಏಡೆನ್ ಮಾರ್ಕ್ರಮ್ ಹಾಗೂ ದಿಗ್ವೇಶ್ ಸಿಂಗ್ ರಾಠಿ ಉತ್ತಮ ಪ್ರದರ್ಶನವನ್ನು ತೋರಿದ್ದರು.
IPL 2025: ರಾಜಸ್ಥಾನ್ ಎದುರು ರೂಪಿಸಿದ್ದ ಬ್ಯಾಟಿಂಗ್ ರಣತಂತ್ರ ರಿವೀಲ್ ಮಾಡಿದ ವಿರಾಟ್ ಕೊಹ್ಲಿ!
ಪಿಚ್ ರಿಪೋರ್ಟ್
ಮುಂಬೈನ ವಾಂಖೆಡೆ ಕ್ರೀಡಾಂಗಣ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಹಾಗಾಗಿ ಲಖನೌ ಹಾಗೂ ಮುಂಬೈ ನಡುವೆ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು. ಕಳೆದ ನಾಲ್ಕು ಪಂದ್ಯಗಳ ಪೈಕಿ ಚೇಸಿಂಗ್ ತಂಡಗಳು ಮೂರರಲ್ಲಿ ಗೆಲುವು ಪಡೆದಿದೆ. ಈ ಅಂಗಣದಲ್ಲಿ ಟಾಸ್ ಗೆದ್ದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಬಹುದು. ಹೊಸ ಚೆಂಡಿನಲ್ಲಿ ವೇಗಿಗಳು ಸ್ವಿಂಗ್ ಪಡೆಯಬಹುದು ಹಾಗೂ ಪಿಚ್ ಸ್ಪಿನ್ನರ್‌ಗಳಿಗೂ ಕೂಡ ನೆರವು ನೀಡಬಹುದು. ಆದರೆ, ಇಬ್ಬನಿ ಬಂದರೆ ಎರಡನೇ ಇನಿಂಗ್ಸ್‌ನಲ್ಲಿ ಬೌಲ್ ಮಾಡುವುದು ಕಷ್ಟ.
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 07
ಮುಬೈ ಇಂಡಿಯನ್ಸ್: 01
ಲಖನೌ ಸೂಪರ್ ಜಯಂಟ್ಸ್: 06
RCB vs DC: ಕೆ ಎಲ್‌ರಾಹುಲ್‌ಗೆ ವಿರಾಟ್ ಕೊಹ್ಲಿ ತಿರುಗೇಟು ನೀಡಬೇಕೆಂದ ವರುಣ್ ಆರೋನ್!
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಲಖನೌ ಸೂಪರ್ ಜಯಂಟ್ಸ್: ಏಡೆನ್ ಮಾರ್ಕ್ರಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ, ವಿ.ಕೀ), ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಶಾರ್ದುಲ್ ಠಾಕೂರ್, ದಿಗ್ವೇಶ್ ಸಿಂಗ್ ರಾಠಿ, ರವಿ ಬಿಷ್ಣೋಯ್, ಆವೇಶ್ ಖಾನ್, ಪ್ರಿನ್ಸ್ ಯಾದವ್
ಇಂಪ್ಯಾಕ್ಟ್ ಪ್ಲೇಯರ್: ಆಯುಷ್ ಬದೋನಿ
ಮುಂಬೈ ಇಂಡಿಯನ್ಸ್: ರಯಾನ್ ರಿಕೆಲ್ಟನ್ (ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ವಿಲ್ ಜಾಕ್ಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರು
ಇಂಪ್ಯಾಕ್ಟ್ ಪ್ಲೇಯರ್: ರೋಹಿತ್ ಶರ್ಮಾ
ಪಂದ್ಯದ ವಿವರ
ಐಪಿಎಲ್ 2025: 45ನೇ ಪಂದ್ಯ
ಮುಂಬೈ ಇಂಡಿಯನ್ಸ್ vs ಲಖನೌ ಸೂಪರ್ ಜಯಂಟ್ಸ್
ದಿನಾಂಕ: ಏಪ್ರಿಲ್ 27, 2025
ಸಮಯ: ಮಧ್ಯಾಹ್ನ 03: 30ಕ್ಕೆ
ಸ್ಥಳ: ವಾಂಖೆಡೆ ಕ್ರೀಡಾಂಗಣ, ಮುಂಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್