MI vs RR: ಮುಂಬೈ ಇಂಡಿಯನ್ಸ್ ವಿರುದ್ದ ಗೆಲುವಿನ ವಿಶ್ವಾಸದಲ್ಲಿ ರಾಜಸ್ಥಾನ್ ರಾಯಲ್ಸ್!
RR vs MI Match Preview: ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಗುರುವಾರ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಮತ್ತೊಂದು ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ದವಾಗಿದೆ.

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್

ಜೈಪುರ: ತನ್ನ ತವರು ಅಂಗಣ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ (Gujarat Titans) ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ, ಇದೀಗ ಗುರುವಾರ ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಕಾದಾಟ ನಡೆಸಲು ಸಜ್ಜಾಗುತ್ತಿವೆ. ಪ್ರಸಕ್ತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈ ಎರಡೂ ತಂಡಗಳು ಇದೇ ಮೊದಲ ಬಾರಿ ಕಾದಾಟ ನಡೆಸಲು ಸಜ್ಜಾಗುತ್ತಿವೆ. ಇದೇ ಅಂಗಣದಲ್ಲಿ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ 14ರ ವಯಸ್ಸಿನ ವೈಭವ್ ಸೂರ್ಯವಂಶಿ ಮೇಲೆ ಈ ಪಂದ್ಯದಲ್ಲಿಯೂ ಸಾಕಷ್ಟು ನಿರೀಕ್ಷೆ ಇದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಅದ್ಭುತ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತನ್ನ ತವರು ಅಂಗಣದಲ್ಲಿ ಗೆಲುವು ಪಡೆದಿತ್ತು. ಅದೇ ಗೆಲುವಿನ ಲಯವನ್ನು ಮುಂದುವರಿಸಲು ಬ್ಲೂ ಬಾಯ್ಸ್ ಎದುರು ನೋಡುತ್ತಿದ್ದಾರೆ. ಇಲ್ಲಿಯ ತನಕ ಆಡಿದ 10 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರು ಗೆಲುವುಗಳ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
IPL 2025: ಪಂದ್ಯದ ಬಳಿಕ ರಿಂಕು ಸಿಂಗ್ ಕೆನ್ನೆಗೆ ಬಾರಿಸಿದ ಕುಲ್ದೀಪ್ ಯಾದವ್! ವಿಡಿಯೊ
ಇನ್ನು ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ವಿಶ್ವಾಸದಲ್ಲಿದೆ. ಈ ಪಂದ್ಯದಲ್ಲಿ ಜಿಟಿ ನೀಡಿದ್ದ 200ಕ್ಕೂ ಅಧಿಕ ರನ್‌ಗಳ ಗುರಿಯನ್ನು ಕೇವಲ 15.5 ಓವರ್‌ಗಳಿಗೆ ರಾಜಸ್ಥಾನ್ ರಾಯಲ್ಸ್ ತಲುಪಿತ್ತು. ವೈಭವ್ ಸೂರ್ಯವಂಶಿ ಅವರು ದಾಖಲೆಯ ಶತಕದ ಬಲದಿಂದ ಆರ್‌ಆರ್ ಗೆಲುವು ಪಡೆದಿದ್ದು, ಇದೀಗ ಅದೇ ಫಾರ್ಮ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲಲು ಆರ್‌ಆರ್ ಎದುರು ನೋಡುತ್ತಿದೆ.
ಆದರೆ, ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೂ ಆಡಿದ 10 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕೇವಲ ಮೂರು ಪಂದ್ಯಗಳಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಎಂಟನೇ ಸ್ಥಾನದಲ್ಲಿದೆ. ಇನ್ನುಳಿದ ನಾಲ್ಕು ಪಂದ್ಯಗಳನ್ನು ಗೆದ್ದರೂ ಆರ್‌ಆರ್‌ನ ಪ್ಲೇಆಫ್ಸ್ ಭವಿಷ್ಯ ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಿದೆ.
IPL 2025: ಕೋಲ್ಕತಾ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಸಲಿ ಕಾರಣ ತಿಳಿಸಿದ ಅಕ್ಷರ್ ಪಟೇಲ್!
ಪಂದ್ಯದ ವಿವರ
ಐಪಿಎಲ್ 2025
ರಾಜಸ್ಥಾನ್ ರಾಯಲ್ಸ್ VS ಮುಂಬೈ ಇಂಡಿಯನ್ಸ್
ದಿನಾಂಕ: ಮೇ 1, 2025
ಸಮಯ: ಸಂಜೆ 07: 30ಕ್ಕೆ
ಸ್ಥಳ: ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣ, ಜೈಪುರ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 29
ರಾಜಸ್ಥಾನ್ ರಾಯಲ್ಸ್ ಗೆಲುವು: 14
ಮುಂಬೈ ಇಂಡಿಯನ್ಸ್ ಗೆಲುವು: 15
ಟೈ: ೦೦
IPL 2025: ದಾಖಲೆಯ ಶತಕ ಸಿಡಿಸಿ ಅಮ್ಮನ ತ್ಯಾಗವನ್ನು ಸ್ಮರಿಸಿದ ವೈಭವ್ ಸೂರ್ಯವಂಶಿ!
ಪಿಚ್ ರಿಪೋರ್ಟ್
ಪ್ರಸಕ್ತ ಆವೃತ್ತಿಯಲ್ಲಿ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಇಲ್ಲಿನ ಪಿಚ್‌ನಲ್ಲಿ ಚೆಂಡು ನೆರವಾಗಿ ಬ್ಯಾಟ್‌ಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಬ್ಯಾಟ್ಸ್‌ಮನ್‌ಗಳು ಮುಕ್ತವಾಗಿ ಬ್ಯಾಟ್ ಬೀಸಬಹುದಾಗಿದೆ. ಹಾಗಾಗಿ ಮುಂದಿನ ಪಂದ್ಯ ಕೂಡ ಹೈಸ್ಕೋರಿಂಗ್ ಆಗಬಹುದು.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿ.ಕೀ), ಶಿಮ್ರಾನ್ ಹೆಟ್ಮಾಯೆರ್, ವಾನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ಯಧುವೀರ್ ಸಿಂಗ್ ಚರಕ್
ಇಂಪ್ಯಾಕ್ಟ್ ಪ್ಲೇಯರ್: ಶುಭಮ್ ದುಬೆ/ತುಷಾರ್ ದೇಶಪಾಂಡೆ
ಮುಂಬೈ ಇಂಡಿಯನ್ಸ್: ರಯಾನ್ ರಿಕೆಲ್ಟನ್ (ವಿ.ಕೀ), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಕಾರ್ಬಿನ್ ಬಾಷ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಮಿಚೆಲ್ ಸ್ಯಾಂಟ್ನರ್, ಜಸ್‌ಪ್ರೀತ್ ಬುಮ್ರಾ
ಇಂಪ್ಯಾಕ್ಟ್ ಪ್ಲೇಯರ್: ರೋಹಿತ್ ಶರ್ಮಾ/ಕರಣ್ ಶರ್ಮಾ