MI vs GT: ವಾಂಖೆಡೆ ಕ್ರೀಡಾಂಗಣದಲ್ಲಿ ಮುಬೈ ಇಂಡಿಯನ್ಸ್‌ಗೆ ಗುಜರಾತ್ ಟೈಟನ್ಸ್ ಸವಾಲು!
MI vs GT Match Preview: ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮೇ 6 ರಂದು ಮಂಗಳವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 56ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗುತ್ತಿವೆ.

ಗುಜರಾತ್ ಟೈಟನ್ಸ್ VS ಮುಂಬೈ ಇಂಡಿಯನ್ಸ್

ಮುಂಬೈ: ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ತಲಾ 14 ಅಂಕಗಳನ್ನು ಕಲೆ ಹಾಕಿರುವ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಏಪ್ರಿಲ್ 6 ರಂದು ಮಂಗಳವಾರ ನಡೆಯುವ 56ನೇ ಪಂದ್ಯದಲ್ಲಿ (GT vs MI) ಕಾದಾಟ ನಡೆಸಲು ಸಜ್ಜಾಗುತ್ತಿವೆ. ಈ ಪಂದ್ಯಕ್ಕೆ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. 2025ರ ಐಪಿಎಲ್ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳ ಎದುರು ನೋಡುತ್ತಿರುವ ಈ ಎರಡೂ ತಂಡಗಳ ನಡುವಣ ಪಂದ್ಯ ಅತ್ಯಂತ ತೀವ್ರ ರೋಚಕತೆಯನ್ನು ಕೆರಳಿಸಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರೇ ಇರುವ ಕಾರಣ ಈ ಪಂದ್ಯ ಹೈಸ್ಕೋರಿಂಗ್ ಆಗುವ ಸಾಧ್ಯತೆ ಇದೆ.
ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಲ್ಲಿಯ ತನಕ ಆಡಿ ಒಟ್ಟು 14 ಅಂಕಗಳನ್ನು ಕಲೆ ಹಾಕಿವೆ. ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಈ ಎರಡೂ ತಂಡಗಳಿಗೆ ಇನ್ನು ಕೇವಲ ಒಂದೇ ಒಂದು ಹೆಜ್ಜೆ ಮಾತ್ರ ಬಾಕಿ ಇದೆ. ಮುಂಬೈ ಇಂಡಿಯನ್ಸ್ 11 ಪಂದ್ಯಗಳನ್ನು ಮುಗಿಸಿದ್ದರೆ, ಗುಜರಾತ್ ಟೈಟನ್ಸ್ 10 ಪಂದ್ಯಗಳನ್ನು ಮುಗಿಸಿದೆ. ಎರಡು ವರ್ಷಗಳ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಮುಂಬೈ ಎದುರು ನೋಡುತ್ತಿದ್ದರೆ, ಗಿಲ್ ನಾಯಕತ್ವದಲ್ಲಿ ಜಿಟಿ ನಾಕ್‌ಔಟ್‌ಗೆ ಅರ್ಹತೆ ಪಡೆಯಲು ಕಣ್ಣಿಟ್ಟಿದೆ.
IPL 2025: ಸನ್‌ರೈಸರ್ಸ್ ಹೈದರಾಬಾದ್‌ಗೆ ಸೇರ್ಪೆಡಯಾದ ಹರ್ಷ್ ದುಬೆ!
ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ 10 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಮುಂಬೈ ಇಂಡಿಯನ್ಸ್‌ಗಿಂದ ಗುಜರಾತ್ ಮೇಲುಗೈ ಸಾಧಿಸಿದೆ. ಆದರೆ, ಈ ಎರಡೂ ತಂಡಗಳು ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳಿಗೆ ಲಗ್ಗೆ ಇಡಲು ಎದುರು ನೋಡುತ್ತಿವೆ.
ಮುಂಬೈ ಇಂಡಿಯನ್ಸ್ ಸತತ ಆರು ಪಂದ್ಯಗಳನ್ನು ಗೆದ್ದುಕೊಂಡು ಬಂದಿದ್ದು, ಇದೀಗ ಗುಜರಾತ್ ಎದುರು ಕೂಡ ಗೆಲುವಿನ ಲಯವನ್ನು ಮುಂದುವರಿಸಲು ಕಾಯುತ್ತಿದೆ. ಅದರಂತೆ ಗುಜರಾತ್ ಟೈಟನ್ಸ್ ಕೂಡ ತನ್ನ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಪಡೆದಿತ್ತು.
IPL 2025: ಆರ್‌ಸಿಬಿ ಇನ್ನೂ ಎಷ್ಟು ಪಂದ್ಯ ಗೆಲ್ಲಬೇಕು? ಎಲ್ಲಾ 8 ತಂಡಗಳ ಪ್ಲೇಆಫ್ಸ್ ಲೆಕ್ಕಾಚಾರ!
ಪಿಚ್ ರಿಪೋರ್ಟ್
ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಣ ಪಂದ್ಯ ನಡೆಯುವ ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರದ ಪಂದ್ಯ ಹೈಸ್ಕೋರಿಂಗ್ ಆಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಏಕೆಂದರೆ ದ್ವಿತೀಯ ಇನಿಂಗ್ಸ್‌ನಲ್ಲಿ ಇಬ್ಬನಿ ಬೀಳುವ ಕಾರಣ ಬೌಲ್ ಮಾಡುವುದು ಕಷ್ಟ.
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 06
ಮುಂಬೈ ಇಂಡಿಯನ್ಸ್ ಗೆಲುವು: 02
ಗುಜರಾತ್ ಟೈಟನ್ಸ್ ಗೆಲುವು: 04
IPL 2025: ಈಡನ್ ಗಾಡರ್ನ್ಸ್‌ನಲ್ಲಿ 1000 ರನ್ ಪೂರ್ಣಗೊಳಿಸಿದ ಆಂಡ್ರೆ ರಸೆಲ್!
ಉಭಯ ತಂಡಗಳ ಪ್ಲೇಯಿಂಗ್ XI
ಮುಂಬೈ ಇಂಡಿಯನ್ಸ್: ರಯಾನ್ ರಿಕೆಲ್ಟನ್ (ವಿ.ಕೀ), ರೋಹಿತ್ ಶರ್ಮಾ, ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಕಾರ್ಬಿನ್ ಬಾಷ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ
ಇಂಪ್ಯಾಕ್ಟ್ ಪ್ಲೇಯರ್: ಕರಣ್ ಶರ್ಮಾ
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ), ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಶಾರೂಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಜೆರಾಲ್ಡ್ ಕೋಯೆಡ್ಜಿ, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ
ಇಂಪ್ಯಾಕ್ಟ್ ಪ್ಲೇಯರ್: ಇಶಾಂತ್ ಶರ್ಮಾ
IPL 2025: ʻಕ್ಯಾಚ್‌ಗಳನ್ನು ಕೈ ಚೆಲ್ಲಿದ್ದೇವೆʼ-ಲಖನೌ ಸೋಲಿಗೆ ಕಾರಣ ತಿಳಿಸಿದ ರಿಷಭ್ ಪಂತ್!
ಪಂದ್ಯದ ವಿವರ
ಐಪಿಎಲ್ 2025-56ನೇ ಪಂದ್ಯ
ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟನ್ಸ್
ದಿನಾಂಕ: ಮೇ 6, 2025
ಸಮಯ: ಸಂಜೆ 07:30ಕ್ಕೆ
ಸ್ಥಳ: ವಾಂಖೆಡೆ ಕ್ರೀಡಾಂಗಣ, ಮುಂಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್