IPL 2025: ರಿಷಭ್ ಪಂತ್ ಎದುರಿಸುತ್ತಿರುವ ಸಮಸ್ಯೆಯನ್ನು ರಿವೀಲ್ ಮಾಡಿದ ಯೋಗರಾಜ್ ಸಿಂಗ್!
Yograj Singh on Rishabh Pant: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ರಿಷಭ್ ಪಂತ್‌ಗೆ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಉಪಯುಕ್ತ ಸಲಹೆಯನ್ನು ನೀಡಿದ್ದಾರೆ.

ರಿಷಭ್ ಪಂತ್ ಎದುರಿಸುತ್ತಿರುವ ಸಮಸ್ಯೆಯನ್ನು ತಿಳಿಸಿದ ಯೋಗರಾಜ್ ಸಿಂಗ್.

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ರಿಷಭ್ ಪಂತ್ (Rishabh Pant) ವೈಫಲ್ಯ ಅನುಭವಿಸುತ್ತಿದ್ದಾರೆ. 27 ಕೋಟಿ ರೂ. ಗಳಿಗೆ ಲಖನೌ ಫ್ರಾಂಚೈಸಿಗೆ ಸೇರ್ಪಡೆಯಾಗಿದ್ದ ರಿಷಭ್ ಪಂತ್, ಬ್ಯಾಟ್ಸ್‌ಮನ್ ಆಗಿ ಹಾಗೂ ನಾಯಕನಾಗಿಯೂ ವಿಫಲರಾಗಿದ್ದಾರೆ. ಇಲ್ಲಿಯ ತನಕ ಆಡಿದ 12 ಪಂದ್ಯಗಳಿಂದ ಪಂತ್ 12.27ರ ಸರಾಸರಿಯಲ್ಲಿ ಕೇವಲ 135 ರನ್‌ಗಳನ್ನು ಕಲೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ರಿಷಭ್ ಪಂತ್ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ. ಅದರಂತೆ ಭಾರತ ತಂಡದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ (Yograj Singh), ಔಟ್ ಆಫ್ ಫಾರ್ಮ್ ರಿಷಭ್ ಪಂತ್‌ಗೆ ಉಪಯುಕ್ತ ಸಲಹೆಯನ್ನು ನೀಡಿದ್ದಾರೆ.
ಐಎಎನ್‌ಎಸ್ ಸಂಭಾಷಣೆಯಲ್ಲಿ ಮಾತನಾಡಿದ ಯೋಗರಾಜ್ ಸಿಂಗ್, ರಿಷಭ್ ಪಂತ್ ಅವರ ಬ್ಯಾಟಿಂಗ್ ಸಮಸ್ಯೆಯನ್ನು ಕೇವಲ 5 ನಿಮಿಷಗಳನ್ನು ಪರಿಹರಿಸಲಾಗುವುದು. ಅವರ ಬ್ಯಾಟಿಂಗ್‌ನಲ್ಲಿನ ತಪ್ಪನ್ನು ತಿದ್ದಲಾಗುವುದು. ಅವರ ತಲೆ ಒಂದು ಕಡೆ ಸ್ಥಿರವಾಗಿ ನಿಲ್ಲುತ್ತಿಲ್ಲ ಮತ್ತು ಅವರು ಎಡ ಭುಜ ಜಾಸ್ತಿ ತೆರೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಿವೀಸ್ ವಿಕೆಟ್ ಕೀಪರ್ ಟಿಮ್ ಸೀಫರ್ಟ್!
"ಕೇವಲ 5 ನಿಮಿಷಗಳಲ್ಲಿ ರಿಷಭ್ ಪಂತ್ ಅವರ ಸಮಸ್ಯೆಯನ್ನು ಪರಿಹರಿಸಲಾಗುವುದು. ಬ್ಯಾಟಿಂಗ್ ವೇಳೆ ಅವರ ತಲೆ ಸ್ಥಿರವಾಗಿ ಒಂದು ಕಡೆ ನಿಲ್ಲುತ್ತಿಲ್ಲ ಹಾಗೂ ಅವರ ಎಡ ಭುಜ ಹೆಚ್ಚುವರಿಯಾಗಿ ತೆರೆಯುತ್ತಿದೆ. ಈ ತಪ್ಪುಗಳನ್ನು ಸರಿ ಮಾಡಿದರೆ, ಅವರು ಹೆಚ್ಚಿನ ಸಮಯ ತೆಗೆದುಕೊಳ್ಳದೆ ಬ್ಯಾಟಿಂಗ್ ಲಯಕ್ಕೆ ಮರಳಲಿದ್ದಾರೆ," ಎಂದು ಯೋಗರಾಜ್ ಸಿಂಗ್ ತಿಳಿಸಿದ್ದಾರೆ.
ಮೇ 22 ರಂದು ಗುಜರಾತ್ ಟೈಟನ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಎಲ್‌ಎಸ್‌ಜಿ ನಾಯಕ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ದದ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ನಿಮಿತ್ತ ಭಾರತ ತಂಡಕ್ಕೆ ರಿಷಭ್ ಪಂತ್ ಕೀ ಆಟಗಾರನಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಫಾರ್ಮ್‌ಗೆ ಮರಳುವುದು ಅನಿವಾರ್ಯವಾಗಿದೆ.
IPL 2025: ನಾಯಕನಾಗಿ ರಿಷಭ್ ಪಂತ್ ವೈಫಲ್ಯಕ್ಕೆ ಕಾರಣ ತಿಳಿಸಿದ ಮೊಹಮ್ಮದ್ ಕೈಫ್!
ಭಾರತ ಟೆಸ್ಟ್ ತಂಡದ ನಾಯಕತ್ವದ ರೇಸ್‌ನಲ್ಲಿ ಪಂತ್
ಭಾರತ ಟೆಸ್ಟ್ ತಂಡದ ನಾಯಕತ್ವದ ರೇಸ್‌ನಲ್ಲಿ ಶುಭಮನ್ ಗಿಲ್ ಜೊತೆಗೆ ರಿಷಭ್ ಪಂತ್ ಕೂಡ ಇದ್ದಾರೆ. ಇತ್ತೀಚೆಗೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅಜಿತ್ ಅಗರ್ಜರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯ ಟೆಸ್ಟ್ ನಾಯಕತ್ವಕ್ಕೆರ ಸೂಕ್ತ ಆಟಗಾರನ ಹುಡುಕಾಟದಲ್ಲಿದೆ. ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಸಲುವಾಗಿ ಜಸ್‌ಪ್ರೀತ್ ಬುಮ್ರಾ ನಾಯಕತ್ವದ ರೇಸ್‌ನಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಗಿಲ್ ಅಥವಾ ಪಂತ್ ಅವರಲ್ಲಿ ಒಬ್ಬರಿಗೆ ಟೆಸ್ಟ್ ನಾಯಕತ್ವ ನೀಡಬಹುದಾಗಿದೆ.
ಪ್ಲೇಆಫ್ಸ್‌ನಿಂದ ಹೊರ ಬಿದ್ದಿರುವ ಎಲ್‌ಎಸ್‌ಜಿ
ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜಯಂಟ್ಸ್ ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇಆಫ್ಸ್ ರೇಸ್‌ನಿಂದ ಅಧಿಕೃತವಾಗಿ ಹೊರ ಬಿದ್ದಿದೆ. ಟೂರ್ನಯ ಮೊದಲ ಅವಧಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಲಖನೌ ತಂಡ, ಎರಡನೇ ಅವಧಿಯಲ್ಲಿ ಸತತ ವೈಫಲ್ಯ ಅನುಭವಿಸಿತು. ಇಲ್ಲಿಯ ತನಕ ಆಡಿದ 12 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಹಾಗೂ ಇನ್ನುಳಿದ 7 ರಲ್ಲಿ ಸೋಲು ಅನುಭವಿಸಿದೆ.