ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IPL 2026: ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳು!

RCB's IPL Matches in Bengaluru: ಮುಂಬರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಐದು ಪಂದ್ಯಗಳು ತವರು ಅಂಗಣ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನುಳಿದ ಎರಡು ತವರು ಪಂದ್ಯಗಳನ್ನು ಆರ್‌ಸಿಬಿ ರಾಯ್ಪುರದ ಶಾಹೀದ್‌ ವೀರ್‌ ನಾರಾಯನ್‌ ಸಿಂಗ್‌ ಸ್ಟೇಡಿಯಂನಲ್ಲಿ ನಡೆಯಲಿವೆ.

IPL 2026: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳು!

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳು. -

Profile
Ramesh Kote Mar 3, 2026 5:45 PM

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಐದು ತವರು ಪಂದ್ಯಗಳು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ನಡೆಯಲಿವೆ ಎಂದು ವರದಿಯಾಗಿದೆ. ಆರ್‌ಸಿಬಿ ತಂಡದ ಇನ್ನುಳಿದ ಎರಡು ತವರು ಪಂದ್ಯಗಳು ರಾಯ್ಪುರದ ಶಾಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯಲಿವೆ. ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಮಾರ್ಗಸೂಚಿಗಳ ಪ್ರಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.

2025ರ ಐಪಿಎಲ್‌ ಟೂರ್ನಿಯ ಚಾಂಪಿಯನ್ಸ್‌ ಆರ್‌ಸಿಬಿ ತಂಡದ ಪಂದ್ಯಗಳನ್ನು ತವರು ಅಂಗಣ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸುವ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಿಸುವ ಬಗ್ಗೆ ಸಾಕಷ್ಟು ಅನುಮಾನಗಳಿದ್ದವು. ಏಕೆಂದರೆ ಕಳೆದ ವರ್ಷ ಸಂಭವಿಸಿದ್ದ ಕಾಲ್ತುಳಿದ ಪ್ರಕರಣದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದರು. ಈ ಹಿನ್ನಲೆಯಲ್ಲಿ ಅಂದಿನಿಂದ ಇಲ್ಲಿಯವರೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಿಷೇಧಿಸಲಾಗಿತ್ತು.

IND vs ENG: ಪವರ್‌ಪ್ಲೇನಲ್ಲಿ ಜಸ್‌ಪ್ರೀತ್‌ ಬುಮ್ರಾಗೆ ಬೌಲಿಂಗ್‌ ಕೊಡಿ ಎಂದ ಸುನೀಲ್‌ ಗವಾಸ್ಕರ್‌!

ಈ ದುರ್ಘನೆಯಿಂದಾಗಿ ಇಲ್ಲಿ ರಣಜಿ ಟ್ರೋಫಿ ಹಾಗೂ ವಿಜಯ್‌ ಹಝಾರೆ ಟ್ರೋಫಿ ಸೇರಿದಂತೆ ದೇಶಿ ಹಾಗೂ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟೂರ್ನಿಯ ಪಂದ್ಯಗಳನ್ನು ಕೂಡ ಇಲ್ಲಿಯವರೆಗೂ ಆಡಿಸಿರಲಿಲ್ಲ.

“ಎಂ ಚಿನ್ನಸ್ವಾಮಿ ಕ್ರೀಡಾಂಗಣ ನಮ್ಮ ತವರು ಅಂಗಣಕ್ಕಿಂತ ಹೆಚ್ಚಾಗಿದೆ; ಅದು ತಂಡವಾಗಿ ನಮ್ಮ ಗುರುತು ಜೀವಂತವಾಗುವ ಸ್ಥಳವಾಗಿದೆ. ಬೆಂಗಳೂರಿಗೆ ನಮ್ಮ ಅಭಿಮಾನಿಗಳು ತರುವ ಉತ್ಸಾಹವು ಸದಾ ಆಟಗಾರರಿಗೆ ಪ್ರತಿಯೊಂದು ಹಂತದಲ್ಲೂ ಪ್ರೇರಣೆಯಾಗಿ ಕೆಲಸ ಮಾಡಿದೆ. ನಮ್ಮ ಅಭಿಮಾನಿಗಳು ನಿರಂತರವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ ಮತ್ತು ತಮ್ಮ ತಂಡವನ್ನು ತವರು ಮೈದಾನದಲ್ಲಿ ಸ್ಪರ್ಧಿಸುವುದನ್ನು ನೋಡುವ ಅವಕಾಶ ಅವರಿಗೆ ಸಿಗಬೇಕಾಗಿದೆ,” ಎಂದು ಆರ್‌ಸಿಬಿ ಸಿಇಒ ರಾಜೇಶ್‌ ಮೆನನ್‌ ತಿಳಿಸಿದ್ದಾರೆ.

IPL 2026: 19ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಮಾರ್ಚ್‌ 28 ರಂದು ಆರಂಭ, ಮೇ 31ಕ್ಕೆ ಫೈನಲ್‌?

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2025ರ ಐಪಿಎಲ್‌ ಟೂರ್ನಿಯಲ್ಲಿ ರಜತ್‌ ಪಾಟಿದಾರ್‌ ಅವರ ನಾಯಕತ್ವದಲ್ಲಿ ತಮ್ಮ ಚೊಚ್ಚಲ ಕಪ್‌ ಗೆದ್ದು ಸಂಭ್ರಮಿಸಿತ್ತು. 2008ರಿಂದಲೇ ವಿರಾಟ್‌ ಕೊಹ್ಲಿ ಆರ್‌ಸಿಬಿಯ ಪ್ರಮುಖ ಕೀ ಆಟಗಾರರಾಗಿದ್ದಾರೆ. ಒಂದೇ ತಂಡದ ಪರ 9,000ಕ್ಕೂ ಹೆಚ್ಚು ಐಪಿಎಲ್‌ ರನ್‌ಗಳನ್ನು ಸಿಡಿಸಿದ್ದಾರೆ. ಅದರಲ್ಲಿಯೂ ಎಂಟು ಶತಕಗಳನ್ನು ಸಿಡಿಸಿ, ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ.

“ಅಭಿಮಾನಿಗಳಿಗಾಗಿ ಐಪಿಎಲ್‌ ಪಂದ್ಯಗಳನ್ನು ಮತ್ತೆ ತವರು ಅಂಗಣಕ್ಕೆ ತರುವ ಸಾಮಾನ್ಯ ಗುರಿಯೊಂದಿಗೆ, ಸಂಬಂಧಿತ ಎಲ್ಲಾ ಅಧಿಕಾರಿಗಳೊಂದಿಗೆ ಹಲವು ತಿಂಗಳ ಪರಿಶ್ರಮ ಮತ್ತು ಸಮನ್ವಯದ ನಂತರ ಈ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲು ನಿರಂತರ ಮಾರ್ಗದರ್ಶನ, ಸಹಕಾರ ಮತ್ತು ಬೆಂಬಲ ನೀಡಿದ ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಹಾಗೂ ಕರ್ನಾಟಕ ಪೊಲೀಸ್‌ಗೆ ಆರ್‌ಸಿಬಿ ಹೃದಯಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತದೆ," ಎಂದು ಅವರು ತಿಳಿಸಿದ್ದಾರೆ.