IPL 2026: ಟಿ20 ಕ್ರಿಕೆಟ್‌ನಲ್ಲಿ 6000 ರನ್‌ಗಳನ್ನು ಪೂರ್ಣಗೊಳಿಸಿ ವಿಶೇಷ ದಾಖಲೆ ಬರೆದ ಶುಭಮನ್ ಗಿಲ್!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಅರ್ಧಶತಕದ ಮೂಲಕ ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ ಅವರು 6000 ಟಿ20 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ವೇಗವಾಗಿ 6000 ಟಿ20 ರನ್‌ಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
6000 ಟಿ20 ರನ್‌ಗಳನ್ನು ಪೂರ್ಣಗೊಳಿಸಿದ ಶುಭಮನ್ ಗಿಲ್. -
ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ (CSK) ಎದುರು ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮನ್ ಗಿಲ್ (Shubman Gill) ಟಿ20 ಕ್ರಿಕೆಟ್‌ನಲ್ಲಿ ನೂತನ ದಾಖಲೆಯನ್ನು ಬರೆದಿದ್ದಾರೆ. ತಮ್ಮ ಟಿ20 ಕ್ರಿಕೆಟ್‌ನಲ್ಲಿ 6000 ರನ್‌ಗಳನ್ನು ಗಿಲ್ ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 6000 ರನ್‌ಗಳನ್ನು ಗಳಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಸಿಎಸ್‌ಕೆ ಎದುರಿನ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ 36 ರನ್ ಗಳಿಸಿದ ಬಳಿಕ ಗಿಲ್ ಈ ಮೈಲುಗಲ್ಲು ತಲುಪಿದ್ದಾರೆ.
ಗುರುವಾರ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಗುಜರಾತ್ ಟೈಟನ್ಸ್ ಪರ ಇನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್‌ಗೆ ಕೈ ಹಾಕಿದರು. 18 ಎಸೆತಗಳಲ್ಲಿ 35 ರನ್ ಗಳಿಸಿ ಆಡುತ್ತಿದ್ದ ವೇಳೆ ಗಿಲ್, ನೂರ್ ಅಹ್ಮದ್‌ಗೆ ಸಿಕ್ಸರ್ ಬಾರಿಸಿದರು. ಆ ಮೂಲಕ ತಮ್ಮ ಟಿ20 ವೃತ್ತಿ ಜೀವನದಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ.
IPL 2026: ʻಮುಂಬೈ ಇಂಡಿಯನ್ಸ್ ತೊರೆಯಿರಿʼ-ಹಾರ್ದಿಕ್ ಪಾಂಡ್ಯಗೆ ಮೈಕಲ್ ವಾನ್ ಸಲಹೆ!
ಕೆಎಲ್ ರಾಹುಲ್‌ಗೆ ಅಗ್ರ ಸ್ಥಾನ
ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 6000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿದೆ. 20 ಓವರ್‌ಗಳ ಸ್ವರೂಪದಲ್ಲಿ ಕರ್ನಾಟಕ ಮೂಲದ ಬ್ಯಾಟ್ಸ್‌ಮನ್ 6000 ಟಿ20 ರನ್‌ಗಳನ್ನು ಪೂರ್ಣಗೊಳಿಸಲು 166 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 6000 ರನ್‌ಗಳನ್ನು ಪೂರ್ಣಗೊಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳು
ಕೆಎಲ್ ರಾಹುಲ್: ಭಾರತ, ಕರ್ನಾಟಕ, ಲಖನೌ ಸೂಪರ್ ಜಯಂಟ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್
ವಿರಾಟ್ ಕೊಹ್ಲಿ: ದೆಹಲಿ, ಭಾರತ, ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು
ಶುಬ್‌ಮನ್ ಗಿಲ್: ಭಾರತ, ಪಂಜಾಬ್, ಕೋಲ್ಕತಾ ನೈಟ್ ರೈಡರ್ಸ್, ಗುಜರಾತ್ ಟೈಟನ್ಸ್
Captaincy aura.
— V I V E K (@vivekbhole079) May 21, 2026
Run machine mentality.
890 runs in IPL 2023.
650 runs in IPL 2025.
602* runs in IPL 2026.
Different seasons. Same dominance. 👑
Shubman Gill is not just consistent, he’s building a legacy already.
pic.twitter.com/dPeUt9RdDy
ವಿರಾಟ್ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 6000 ರನ್ ಮೈಲುಗಲ್ಲು ತಲುಪಲು 184 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು. ಅಹಮದಾಬಾದ್‌ನಲ್ಲಿ ನಡೆಯುತ್ತಿರುವ 2026ರ ಐಪಿಎಲ್ ಟೂರ್ನಿಯ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಶುಭಮನ್ ಗಿಲ್ ತಮ್ಮ 188ನೇ ಟಿ20 ಪಂದ್ಯದಲ್ಲಿ 6000 ರನ್ ಮೈಲುಗಲ್ಲು ತಲುಪಿದರು ಮತ್ತು ಅದನ್ನು ಸಾಧಿಸಲು 185 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 6000 ರನ್ ತಲುಪಿದ ವಿಶ್ವದಾಖಲೆ ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್‌ನ ಈ ದಂತಕಥೆ ಬ್ಯಾಟರ್ 162ನೇ ಇನಿಂಗ್ಸ್‌ನಲ್ಲಿಯೇ ಈ ಮೈಲುಗಲ್ಲು ತಲುಪಿದ್ದರು.