ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IPL 2027: ಮುಂಬೈ ಇಂಡಿಯನ್ಸ್‌ ನಾಯಕತ್ವದ ರೇಸ್‌ನಲ್ಲಿ ಮೂವರು ಆಟಗಾರರು! ಸ್ಪಷ್ಟನೆ ನೀಡಿದ ಫ್ರಾಂಚೈಸಿ

ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ನಾಯಕತ್ವದ ಸ್ಥಾನ ತೆರವಾಗಿದೆ. ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್‌ಪ್ರೀತ್ ಬುಮ್ರಾ ಹಾಗೂ ತಿಲಕ್ ವರ್ಮಾ ನಾಯಕತ್ವದ ರೇಸ್‌ನಲ್ಲಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಫ್ರಾಂಚೈಸಿ ತಿಳಿಸಿದೆ.

ಮುಂಬೈ ಇಂಡಿಯನ್ಸ್‌ ನಾಯಕತ್ವದ ರೇಸ್‌ನಲ್ಲಿ ಮೂವರು!

ಮುಂಬೈ ಇಂಡಿಯನ್ಸ್‌ ನಾಯಕತ್ವದ ಬಗ್ಗೆ ಮಾಹಿತಿ ನೀಡಿದ ಫ್ರಾಂಚೈಸಿ. -

Profile
Ramesh Kote Nov 11, 2026 11:39 PM

ನವದೆಹಲಿ: ಮುಂಬರುವ 2027ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2027) ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡವನ್ನು ಸೇರುವ ಮೂಲಕ ಮುಂಬೈ ಇಂಡಿಯನ್ಸ್‌ನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ತಂಡದ ಮುಂದಿನ ನಾಯಕ ಯಾರು ಎಂಬ ಕುತೂಹಲ ಹೆಚ್ಚಾಗಿದೆ.

ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್, 2024ರಿಂದ ಮೊದಲ ಬಾರಿ ನಾಯಕನಿಲ್ಲದ ಸ್ಥಿತಿಯಲ್ಲಿದೆ. ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿ ನಾಯಕತ್ವದ ಸ್ಥಾನ ತೆರವಾಗಿದೆ. ಹೀಗಾಗಿ ಮುಂದಿನ ನಾಯಕನ ಆಯ್ಕೆ ವಿಚಾರದಲ್ಲಿ ಫ್ರಾಂಚೈಸಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.

ʻಆ ದಿನಗಳು ತುಂಬಾ ಕಠಿಣವಾಗಿದ್ದವುʼ: ತಮ್ಮ ಕಷ್ಟದ ಅವಧಿಯನ್ನು ನೆನೆದ ಸೂರ್ಯಕುಮಾರ್‌ ಯಾದವ್‌!

ಮಾಜಿ ನಾಯಕ ರೋಹಿತ್ ಶರ್ಮಾ ಮತ್ತೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಕುರಿತು ಯಾವುದೇ ಅಧಿಕೃತ ನಿರ್ಧಾರ ಪ್ರಕಟವಾಗಿಲ್ಲ. ರೋಹಿತ್ ಶರ್ಮಾ ಜೊತೆಗೆ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಹಾಗೂ ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ಕೂಡ ನಾಯಕತ್ವದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ. ಈ ಹಿಂದೆ ವಿವಿಧ ಸಂದರ್ಭಗಳಲ್ಲಿ ರೋಹಿತ್, ಸೂರ್ಯಕುಮಾರ್ ಹಾಗೂ ಬುಮ್ರಾ ತಂಡವನ್ನು ಮುನ್ನಡೆಸಿದ್ದಾರೆ.

ನಾಯಕನ ಆಯ್ಕೆ ಕುರಿತು ಮುಂಬೈ ಇಂಡಿಯನ್ಸ್ ಹೇಳಿದ್ದೇನು?

ತಂಡಕ್ಕೆ ಅರ್ಷದೀಪ್ ಸಿಂಗ್ ಸೇರ್ಪಡೆಯಾಗಿರುವುದನ್ನು ಸ್ವಾಗತಿಸಿರುವ ಮುಂಬೈ ಇಂಡಿಯನ್ಸ್, ನಾಯಕತ್ವದ ಆಯ್ಕೆ ವಿಚಾರದಲ್ಲೂ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

"ಅರ್ಷದೀಪ್ ಆಗಮನವು ನಮ್ಮ ಬೌಲಿಂಗ್ ವಿಭಾಗಕ್ಕೆ ಹೊಸ ಆಯಾಮವನ್ನು ನೀಡಲಿದೆ. ಅನುಭವ, ಕೌಶಲ ಮತ್ತು ಗೆಲ್ಲುವ ಹಸಿವು ಹೊಂದಿರುವ ಸಮತೋಲಿತ ತಂಡವನ್ನು ನಿರ್ಮಿಸಲು ನಾವು ಸದಾ ಪ್ರಯತ್ನಿಸುತ್ತೇವೆ. ಅರ್ಷದೀಪ್ ಈ ಎಲ್ಲ ಗುಣಗಳನ್ನು ಹೊಂದಿದ್ದಾರೆ. ಅವರನ್ನು ಮುಂಬೈ ಇಂಡಿಯನ್ಸ್ ಕುಟುಂಬಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ."

IND vs NZ: ಯುವ ವೇಗಿ ಅನ್ಶುಲ್‌ ಕಾಂಬೋಜ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ರವಿ ಶಾಸ್ತ್ರಿ!

"ವಿಶ್ವದ ಪ್ರಮುಖ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿರುವ ಅರ್ಷದೀಪ್, ಅಪಾರ ಅಂತಾರಾಷ್ಟ್ರೀಯ ಅನುಭವ ಹೊಂದಿದ್ದಾರೆ. ವಿಭಿನ್ನ ಪರಿಸ್ಥಿತಿಗಳು ಹಾಗೂ ಪಂದ್ಯದ ಸನ್ನಿವೇಶಗಳಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡುವ ಸಾಮರ್ಥ್ಯ ಅವರಲ್ಲಿದೆ. ಅವರ ಕೌಶಲ, ಸ್ಪರ್ಧಾತ್ಮಕ ಮನೋಭಾವ ಮತ್ತು ಉತ್ಸಾಹ ನಮ್ಮ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ನೀಡಲಿದೆ," ಎಂದು ಮುಂಬೈ ಇಂಡಿಯನ್ಸ್ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

"2027ರ ಐಪಿಎಲ್ ಟೂರ್ನಿಯಲ್ಲಿ ಅರ್ಷದೀಪ್ ಸಿಂಗ್ ಮುಂಬೈ ತಂಡದ ನೀಲಿ ಮತ್ತು ಚಿನ್ನದ ಜೆರ್ಸಿಯಲ್ಲಿ ಕಣಕ್ಕಿಳಿಯುವುದನ್ನು ಅಭಿಮಾನಿಗಳು ಎದುರು ನೋಡಬಹುದು. ಮುಂಬರುವ ಆವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವದ ಆಯ್ಕೆಗಳ ಕುರಿತು ಫ್ರಾಂಚೈಸಿ ಸೂಕ್ತವಾಗಿ ಪರಿಶೀಲನೆ ನಡೆಸಲಿದೆ. ಸರಿಯಾದ ಸಮಯದಲ್ಲಿ ತಂಡದ ನಾಯಕತ್ವದ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು," ಎಂದು ತಿಳಿಸಿದೆ.



ಡಿಸೆಂಬರ್ 16ರಂದು ಮಿನಿ ಹರಾಜು

ನವೆಂಬರ್ 17ರ ಆಟಗಾರರ ರಿಟೆನ್ಷನ್ ಗಡುವಿನತ್ತ ತಂಡಗಳು ಗಮನಹರಿಸಿವೆ. ಇದರ ಬೆನ್ನಲ್ಲೇ ಡಿಸೆಂಬರ್ 16ರಂದು ಗೋವಾದಲ್ಲಿ ಐಪಿಎಲ್ 2027ರ ಮಿನಿ ಹರಾಜು ನಡೆಯಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ನಾಯಕನ ಆಯ್ಕೆ ಹಾಗೂ ಹರಾಜಿನ ಕಾರ್ಯತಂತ್ರ ಪ್ರಮುಖವಾಗಿವೆ.

2015ರಲ್ಲಿ ಯುವ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ್ದ ಹಾರ್ದಿಕ್ ಪಾಂಡ್ಯ, ಕಾಲಕ್ರಮೇಣ ಟಿ20 ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿ ಬೆಳೆದಿದ್ದರು. ಇದೀಗ ಅವರ ನಿರ್ಗಮನದೊಂದಿಗೆ ಮುಂಬೈ ತಂಡದೊಂದಿಗಿನ ಸುದೀರ್ಘ ಪಯಣ ಅಂತ್ಯಗೊಂಡಿದೆ.