IND vs ENG: ಜಸ್ಪ್ರೀತ್ ಬುಮ್ರಾ ಔಟ್, ಎರಡನೇ ಟೆಸ್ಟ್ಗೆ ಭಾರತ ತಂಡದಲ್ಲಿ 4 ಬದಲಾವಣೆ ಸಾಧ್ಯತೆ!
India's Probable Playing XI: ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಜುಲೈ 2 ರಂದು ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ನಾಲ್ಕು ಬದಲಾವಣೆಗಳನ್ನು ನಾವು ಕಾಣಬಹುದು. ಮೊದಲನೇ ಪಂದ್ಯದಲ್ಲಿ ಆಡಿದ್ದ ಜಸ್ಪ್ರೀತ್ ಬುಮ್ರಾ ಎರಡನೇ ಪಂದ್ಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI

ಬರ್ಮಿಂಗ್ಹ್ಯಾಮ್: ಮೊದಲನೇ ಟೆಸ್ಟ್ ಪಂದ್ಯದಲ್ಲಿ(IND vs ENG) ಸೋಲು ಅನುಭವಿಸಿದ್ದ ಭಾರತ ತಂಡ, ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 0-1 ಹಿನ್ನಡೆ ಅನುಭವಿಸಿದೆ. ಇದೀಗ ಜುಲೈ 2 ರಂದು ಇಲ್ಲಿನ ಎಜ್ಬಾಸ್ಟನ್ನಲ್ಲಿ ಆರಂಭವಾಗುವ ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಕಮ್ಬ್ಯಾಕ್ ಮಾಡಲು ಎದುರು ನೋಡುತ್ತಿದೆ. ಈ ಹಿನ್ನೆಲೆಯಲ್ಲಿ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ (IND Playing XI) ನಾಲ್ಕು ಬದಲಾವಣೆಗಳನ್ನು ಮಾಡಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಭಾರತ ತಂಡ ಭಾರತ ತಂಡದ ಕೆಳ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು ವೈಫಲ್ಯ ಅನುಭವಿಸಿದ್ದು. ಪ್ರಥಮ ಇನಿಂಗ್ಸ್ನಲ್ಲಿ 41 ರನ್ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಭಾರತ, ದ್ವಿತೀಯ ಇನಿಂಗ್ಸ್ನಲ್ಲಿ 77 ರನ್ಗಳಿಗೆ 7 ವಿಕೆಟ್ಗಳನ್ನು ಕಳೆದುಕೊಂಡಿತ್ತು. ಇದರ ಪರಿಣಾಮ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯವನ್ನು 5 ವಿಕೆಟ್ಗಳಿಂದ ಸೋಲು ಅನುಭವಿಸಿತ್ತು.
ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪರ ಐದು ಶತಕಗಳನ್ನು ಮೂಡಿ ಬಂದಿದ್ದವು. ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಅವರು ಶತಕಗಳನ್ನು ಬಾರಿಸಿದ್ದರು. ಕೆಳ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳ ವೈಫಲ್ಯದ ಜೊತೆಗೆ ಜಸ್ಪ್ರೀತ್ ಬುಮ್ರಾ ಅವರಿಗೆ ಇನ್ನುಳಿದ ಬೌಲರ್ಗಳು ಸಾಥ್ ನೀಡಿರಲಿಲ್ಲ. ಇದರ ಪರಿಣಾಮ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಭಾರತ ತಂಡ ಸೋಲು ಅನುಭವಿಸಿತ್ತು.
IND vs ENG 2nd Test: 2ನೇ ಟೆಸ್ಟ್ಗೂ ಮುನ್ನ ಭಾರತ ತಂಡಕ್ಕೆ ಗಾಯದ ಭೀತಿ
ಈ ಸರಣಿಯ ಆರಂಭದಲ್ಲಿಯೇ ಜಸ್ಪ್ರೀತ್ ಬುಮ್ರಾ ಲಭ್ಯತೆ ಬಗ್ಗೆ ಟೀಮ್ ಮ್ಯಾನೇಜ್ಮೆಂಟ್ ಮಾಹಿತಿ ನೀಡಿತ್ತು. ವರ್ಕ್ಲೋಡ್ ಮ್ಯಾನೇಜ್ಮೆಂಟ್ ಕಾರಣ ಈ ಸರಣಿಯಲ್ಲಿ ಬುಮ್ರಾ ಕೇವಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆಂದು ಮೊದಲೇ ಹೇಳಲಾಗಿತ್ತು. ಆದರೆ, ಅವರು ಯಾವ ಎರಡು ಪಂದ್ಯಗಳಲ್ಲಿ ವಿಶ್ರಾಂತಿ ಪೆಡಯಲಿದ್ದಾರೆಂದು ಗೊತ್ತಿಲ್ಲ. ಬಹುಶಃ ಅವರು ಎರಡನೇ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿ ಪಡೆಯಬಹುದೆಂದು ಹೇಳಲಾಗುತ್ತಿದೆ.
ಕರುಣ್ ನಾಯರ್, ರವೀಂದ್ರ ಜಡೇಜಾ ಹಾಗೂ ಶಾರ್ದುಲ್ ಠಾಕೂರ್ ಅವರು ಕೇಳ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇವರು ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದರು. ಹಾಗಾಗಿ ಅವರು ಕರುಣ್ ನಾಯರ್ ಬದಲು ಆಡುವ ಸಾಧ್ಯತೆ ಇದೆ. ಶಾರ್ದುಲ್ ಠಾಕೂರ್ ಅವರ ಸ್ಥಾನಕ್ಕೆ ಬ್ಯಾಟ್ಸ್ಮನ್ ಆಗಿ ಧ್ರುವ್ ಜುರೆಲ್ ಆಡಬಹುದು. ಜುರೆಲ್ ತಂಡದಲ್ಲಿ ಆಡಿದರೆ, ನಿತೀಶ್ ರೆಡ್ಡಿ ಅವರಿಂದ ಕೆಲ ಓವರ್ಗಳನ್ನು ಬೌಲ್ ಮಾಡಿಸಬಹುದು. ಜುರೆಲ್ ಹಾಗೂ ರೆಡ್ಡಿ ಆಗಮನದಿಂದ ಭಾರತ ತಂಡದ ಕೆಳ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಲ ಹೆಚ್ಚಾಗಲಿದೆ.
IND vs ENG: ರಿಷಭ್ ಪಂತ್ ತನ್ನ ಶತಕಗಳನ್ನು ದ್ವಿಶತಕಗಳನ್ನಾಗಿ ಪರಿವರ್ತಿಸಬೇಕೆಂದ ಆರ್ ಅಶ್ವಿನ್!
ಇನ್ನು ಮೊದಲನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರು ಒಬ್ಬರೇ ಸ್ಪಿನ್ನರ್ ಆಗಿದ್ದರು. ಆದರೆ, ಪೂರ್ಣಪ್ರಮಾಣದ ಸ್ಪಿನ್ನರ್ ಆಗಿ ಆಡಿಸಲು ಸಾಧ್ಯವಾಗಿರಲಿಲ್ಲ. ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರಸಿಧ್ ಕೃಷ್ಣ ಅವರ ಸ್ಥಾನದಲ್ಲಿ ಕುಲ್ದೀಪ್ ಯಾದವ್ ಅವರನ್ನು ಆಡಿಸಬಹುದು. ಇನ್ನು ಜಸ್ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರನ್ನು ಆಡಿಸಬಹುದು.
ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
1. ಕೆಎಲ್ ರಾಹುಲ್ (ಆರಂಭಿಕ ಬ್ಯಾಟ್ಸ್ಮನ್)
2. ಯಶಸ್ವಿ ಜೈಸ್ವಾಲ್ (ಆರಂಭಿಕ ಬ್ಯಾಟ್ಸ್ಮನ್)
3. ಸಾಯಿ ಸುದರ್ಶನ್ (ಬ್ಯಾಟ್ಸ್ಮನ್)
4. ಶುಭಮನ್ ಗಿಲ್ (ನಾಯಕ, ಬ್ಯಾಟ್ಸ್ಮನ್)
5. ರಿಷಭ್ ಪಂತ್ (ವಿಕೆಟ್ ಕೀಪರ್)
6. ನಿತೀಶ್ ರೆಡ್ಡಿ (ಆಲ್ರೌಂಡರ್)
7. ಧ್ರುವ ಜುರೆಲ್ (ವಿಕೆಟ್ ಕೀಪರ್, ಬ್ಯಾಟ್ಸ್ಮನ್)
8. ರವೀಂದ್ರ ಜಡೇಜಾ ( ಆಲ್ರೌಂಡರ್)
9. ಅರ್ಷದೀಪ್ ಸಿಂಗ್ (ವೇಗದ ಬೌಲರ್)
10. ಮೊಹಮ್ಮದ್ ಸಿರಾಜ್ (ವೇಗದ ಬೌಲರ್)
11. ಕುಲ್ದೀಪ್ ಯಾದವ್ (ಸ್ಪಿನ್ನರ್)