DC vs KKR: ಐಪಿಎಲ್ ಟೂರ್ನಿಯಲ್ಲಿ ಅಪರೂಪದ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್!
IPL 2026: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಣ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಕೆಎಲ್ ರಾಹುಲ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಆಟಗಾರನಿಂದ ಸಾಧ್ಯವಾಗದ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.
ಮೂರು ಫ್ರಾಂಚೈಸಿಗಳ ಪರ 1000 ರನ್ ಗಳಿಸಿರುವ ಕೆಎಲ್ ರಾಹುಲ್. -
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸಾಲಿನ (IPL 2026) 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC), ಮೇ 8 ರಂದು ಶುಕ್ರವಾರ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಕಾದಾಟ ನಡೆಸಿತು. ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅಂದರೆ, ಐಪಿಎಲ್ ಇತಿಹಾಸದಲ್ಲಿಯೇ ಯಾರಿಂದಲೂ ಸಾಧ್ಯವಾಗದ ದಾಖಲೆಯನ್ನು ಕನ್ನಡಿಗ ಬರೆದಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಮೂರು ವಿಭಿನ್ನ ಫ್ರಾಂಚೈಸಿಗಳ ಪರ ಆಡುವಾಗ 1,000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೆಕೆಆರ್ ವಿರುದ್ಧ 14 ಎಸೆತಗಳಲ್ಲಿ 23 ರನ್‌ಗಳನ್ನು ಗಳಿಸಿದ ಬಳಿಕ ಕನ್ನಡಿಗ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಇದಕ್ಕೂ ಮೊದಲು, ಅವರು ಪಂಜಾಬ್ ಕಿಂಗ್ಸ್ ಪರ 2,548 ರನ್‌ಗಳನ್ನು ಗಳಿಸಿದ್ದರು ಮತ್ತು ಲಖನೌ ಸೂಪರ್ ಜಯಂಟ್ಸ್ ಪರ 1,410 ರನ್‌ಗಳನ್ನು ಗಳಿಸಿದ್ದರು.
GT vs RR ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್, ಮುಖಾಮುಖಿ ದಾಖಲೆ!
ರಿಷಭ್ ಪಂತ್ ದಾಖಲೆಯನ್ನು ಮುರಿದ ಕೆಎಲ್ ರಾಹುಲ್
ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್‌ನಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾಗಿದ್ದಾರೆ. ರಾಹುಲ್ ಕೇವಲ 23ನೇ ಇನಿಂಗ್ಸ್‌ನಲ್ಲಿ ಈ ಮೈಲುಗಲ್ಲು ತಲುಪಿದರು. ಇದರ ಮೂಲಕ, ಡಿಸಿ ಪರ ಆಡುವಾಗ 35 ಇನಿಂಗ್ಸ್‌ಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದ್ದ ರಿಷಭ್ ಪಂತ್ ಅವರನ್ನು ಕನ್ನಡಿಗ ಹಿಂದಿಕ್ಕಿದ್ದಾರೆ.
ಟಾಸ್ ಸೋತ ಬಳಿಕ ಮೊದಲು ಬ್ಯಾಟ್ ಮಾಡುವಂತಾದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೆಎಲ್ ರಾಹುಲ್ ಮತ್ತು ಪಥುಮ್ ನಿಸಾಂಕ ಸ್ಥಿರ ಆರಂಭ ನೀಡಿದರು. ಈ ಜೋಡಿ 30 ಎಸೆತಗಳಲ್ಲಿ ಮೊದಲ ವಿಕೆಟ್‌ಗೆ 49 ರನ್ ಸೇರಿಸಿತು. ರಾಹುಲ್ ನಾಲ್ಕು ಬೌಂಡರಿಗಳ ನೆರವಿನಿಂದ 23 ರನ್ ಗಳಿಸಿ ಕಾರ್ತಿಕ್ ತ್ಯಾಗಿಗೆ ಬಲಿಯಾದರು. ಇದರ ನಡುವೆ ನಿತೀಶ್ ರಾಣಾ ಬ್ಯಾಟಿಂಗ್‌ನಲ್ಲಿ ಗಮನಾರ್ಹ ಪರಿಣಾಮ ಬೀರುವಲ್ಲಿ ವಿಫಲರಾದರು ಮತ್ತು ಕೇವಲ 8 ರನ್ ಗಳಿಸಿ ಔಟಾದರು.
PBKS ✅
— Cricbuzz (@cricbuzz) May 8, 2026
LSG ✅
DC ✅
KL Rahul becomes the first player to aggregate 1000+ runs for three different teams in IPL #IPL2026 pic.twitter.com/czUmi0BCyc
ಸುನೀಲ್ ನರೇನ್ 3 ರನ್ ಗಳಿಸಿ ಆಡುತ್ತಿದ್ದ ಸಮೀರ್ ರಿಜ್ವಿ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು, ಆದರೆ ಟ್ರಿಸ್ಟನ್ ಸ್ಟಬ್ಸ್ ಕೇವಲ 2 ರನ್ ಗಳಿಸಿ ಔಟ್ ಆದರು. 29 ಎಸೆತಗಳಲ್ಲಿ 50 ರನ್ ಗಳಿಸಿದ ನಂತರ ಓಪನರ್ ಪಥುಮ್ ನಿಸಾಂಕ ಔಟಾದರು; ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿವೆ. ಈ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಆಡುವ XI ನಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ: ಕರುಣ್ ನಾಯರ್ ಬದಲಿಗೆ ವಿಪ್ರಜ್ ನಿಗಮ್‌ಗೆ ಅವಕಾಶ ನೀಡಿತ್ತು, ಆದರೆ ಟಿ. ನಟರಾಜನ್ ಬದಲಿಗೆ ಮುಖೇಶ್ ಕುಮಾರ್ ಅವರನ್ನು ಕರೆತರಲಾಗಿತ್ತು.