ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MI vs LSG: ವೇಗವಾಗಿ 4000 ರನ್‌ಗಳನ್ನು ಸಿಡಿಸಿ ಕೊಹ್ಲಿ, ರೋಹಿತ್‌ ದಾಖಲೆ ಮುರಿದ ಸೂರ್ಯಕುಮಾರ್‌ ಯಾದವ್‌!

Suryakumar Yadav scored 4000 Runs: ಮುಂಬೈ ಇಂಡಿಯನ್ಸ್‌ ತಂಡದ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ಯಾದವ್‌ ಅವರು ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 4000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ವೇಗವಾಗಿ 4000 ರನ್‌ ಪೂರ್ಣಗೊಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ವೇಗವಾಗಿ 4000 ರನ್‌ ಗಳಿಸಿ ವಿಶೇಷ ದಾಖಲೆ ಬರೆದ ಸೂರ್ಯಕುಮಾರ್‌ ಯಾದವ್‌!

ಐಪಿಎಲ್‌ ಟೂರ್ನಿಯಲ್ಲಿ ಸೂರ್ಯಕುಮಾರ್‌ ಯಾದವ್‌ 4000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.

Profile Ramesh Kote Apr 27, 2025 7:30 PM

ಮುಂಬೈ: ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಪಂದ್ಯದಲ್ಲಿ ಸ್ಪೋಟಕ ಅರ್ದಶತಕ ಸಿಡಿಸಿದ ಮುಂಬೈ ಇಂಡಿಯನ್ಸ್‌ (Mumbai Indians) ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ (Suryakumar yadav) 4000 ಐಪಿಎಲ್‌ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ನಲ್ಲಿ ವೇಗವಾಗಿ 4 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ ಹಾಗೂ ಈ ಸಾಧಕರ ಪಟ್ಟಿಯಲ್ಲಿ ದಿಗ್ಗಜರಾದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾದ ಮುಂಬೈ ಇಂಡಿಯನ್ಸ್‌ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದ ಸೂರ್ಯಕುಮಾರ್‌ ಯಾದವ್‌, 28 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 4 ಬೌಂಡರಿಗಳೊಂದಿಗೆ 54 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಮುಂಬೈ ಇಂಡಿಯನ್ಸ್‌ ತಂಡ 215 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದ್ದರು.

ಅಂದ ಹಾಗೆ ತಮ್ಮ ಈ ಇನಿಂಗ್ಸ್‌ನಲ್ಲಿ 33 ರನ್‌ಗಳನ್ನು ಪೂರ್ಣಗೊಳಿಸುತ್ತಿದ್ದಂತೆ ಸೂರ್ಯಕುಮಾರ್‌ ಯಾದವ್‌ ಅವರು 4000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ವೇಗವಾಗಿ 4000 ರನ್‌ಗಳನ್ನು ಪೂರ್ಣಗೊಳಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ ಮೂರನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. 4000 ರನ್‌ಗಳನ್ನು ಪೂರ್ಣಗೊಳಿಸಲು ಸೂರ್ಯಕುಮಾರ್‌ ಯಾದವ್‌ 2714 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ಆ ಮೂಲಕ ಭಾರತದ ದಿಗ್ಗಜ ಬ್ಯಾಟ್ಸ್‌ಮನ್‌ಗಳಾ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

IPL 2025: ಸಾಮರ್ಥ್ಯವಿದ್ದರೂ ಪಂಜಾಬ್‌ ಕಪ್‌ ಗೆಲ್ಲಲ್ಲ; ಮಾಜಿ ಆಟಗಾರನ ಅಚ್ಚರಿಯ ಹೇಳಿಕೆ

ಐಪಿಎಲ್‌ ಟೂರ್ನಿಯಲ್ಲಿ ವೇಗವಾಗಿ 4000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್‌ ಹೆಸರಿನಲ್ಲಿದೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು 2658 ಎಸೆತಗಳಲ್ಲಿ ಈ ಮೈಲುಗಲ್ಲು ತಲುಪಿದ್ದಾರೆ. ಮೂರನೇ ಸ್ಥಾನದಲ್ಲಿ ಸೂರ್ಯಕುಮಾರ್‌ ಇದ್ದಾರೆ. ನಾಲ್ಕು ಹಾಗೂ ಐದನೇ ಸ್ಥಾನಗಳಲ್ಲಿ ಕ್ರಮವಾಗಿ ಡೇವಿಡ್‌ ವಾರ್ನರ್‌ (2809) ಹಾಗೂ ಸುರೇಶ್‌ ರೈನಾ (2881) ಇದ್ದಾರೆ.



4021 ರನ್‌ ಸಿಡಿಸಿರುವ ಸೂರ್ಯಕುಮಾರ್‌

ಸೂರ್ಯಕುಮಾರ್‌ ಯಾದವ್‌ ಅವರು ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 145 ಇನಿಂಗ್ಸ್‌ಗಳಿಂದ 33.79ರ ಸರಾಸರಿಯಲ್ಲಿ ಎರಡು ಶತಕಗಳು ಹಾಗೂ 26 ಅರ್ಧಶತಕಗಳ ಮೂಲಕ 4021 ರನ್‌ಗಳನ್ನು ಸಿಡಿಸಿದ್ದಾರೆ. 4000 ರನ್‌ ಐಪಿಎಲ್‌ ರನ್‌ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ಹೆಚ್ಚಿನ ಸ್ಟ್ರೈಕ್‌ ರೇಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಕೂಡ ಸೂರ್ಯಕುಮಾರ್‌ ಯಾದವ್‌ ಬರೆದಿದ್ದಾರೆ.



ಮುಂಬೈ ಇಂಡಿಯನ್ಸ್‌ ಪರ 3000 ರನ್‌

ಇದೇ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಮುಂಬೈ ಇಂಡಿಯನ್ಸ್‌ ಪರ 3000 ರನ್‌ಗಳನ್ನು ಪೂರ್ಣಗೊಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿಗೆ ಇದೀಗ ಸೂರ್ಯಕುಮಾರ್‌ ಯಾದವ್‌ ಸೇರ್ಪಡೆಯಾಗಿದ್ದಾರೆ. ಇನ್ನು ಐಪಿಎಲ್‌ ಟೂರ್ನಿಯಲ್ಲಿ 150 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ರೋಹಿತ್‌ ಶರ್ಮಾ ಹಾಗೂ ಕೈರೊನ್‌ ಪೊಲಾರ್ಡ್‌ ಕೂಡ ಈ ಸಾಧನೆ ಮಾಡಿದ್ದಾರೆ.