ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻನನ್ನ ಪ್ರದರ್ಶನ ನಿಮ್ಮ ಕಣ್ಣ ಮುಂದೆ ಇದೆʼ: ಅಜಿತ್‌ ಅಗರ್ಕರ್‌ಗೆ ತಿರುಗೇಟು ಕೊಟ್ಟ ಮೊಹಮ್ಮದ್‌ ಶಮಿ!

ರಣಜಿ ಟ್ರೋಫಿ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ನಂತರ ಮೊಹಮ್ಮದ್ ಶಮಿ, ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್ ಅಗರ್ಕರ್ ಅವರನ್ನು ನೇರವಾಗಿ ಟೀಕಿಸಿದ್ದಾರೆ. ಅವರು ಏನು ಬೇಕಾದರೂ ಹೇಳಲಿ ರಣಜಿ ಪಂದ್ಯದಲ್ಲಿ ನನ್ನ ಪ್ರದರ್ಶನವನ್ನು ನೀವು ನೋಡಿದ್ದೀರಿ ಎಂದು ಮಾಧ್ಯಮದವರಿಗೆ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಅಜಿತ್‌ ಅಗರ್ಕರ್‌ಗೆ ತಿರುಗೇಟು ಕೊಟ್ಟ ಮೊಹಮ್ಮದ್‌ ಶಮಿ!

ಬಿಸಿಸಿಐ ಚೀಫ್‌ ಸೆಲೆಕ್ಟರ್‌ಗೆ ಮೊಹಮ್ಮದ್‌ ಶಮಿ ತಿರುಗೇಟು. -

Profile Ramesh Kote Oct 18, 2025 10:50 PM

ನವದೆಹಲಿ: ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಪಂದ್ಯಗಳ ಟಿ20ಐ ಸರಣಿಯನ್ನು (IND vs AUS) ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಪ್ರವಾಸದ ಭಾರತ ತಂಡದಲ್ಲಿ ಮೊಹಮ್ಮದ್ ಶಮಿಗೆ (Mohammed Shami) ಸ್ಥಾನವನ್ನು ನೀಡಲಾಗಿಲ್ಲ. ಶಮಿ ಗಾಯದಿಂದ ಮರಳಿದ್ದಾರೆ, ಆದರೆ ಫಿಟ್ನೆಸ್ ಸಮಸ್ಯೆಗಳಿಂದಾಗಿ ಅವರನ್ನು ತಂಡದಲ್ಲಿ ಸ್ಥಾನ ಕೊಡಲು ಸಾಧ್ಯವಾಗಿಲ್ಲ. ಇದರ ನಡುವೆ ಶಮಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನವನ್ನು ತೋರಿ ತಮ್ಮ ಸಂಪೂರ್ಣ ಫಿಟ್ನೆಸ್ ಪ್ರದರ್ಶಿಸಿದ್ದಾರೆ. ರಣಜಿ ಟ್ರೋಫಿ ಟೂರ್ನಿಯಲ್ಲಿನ ತಮ್ಮ ಅದ್ಭುತ ಪ್ರದರ್ಶನದ ನಂತರ, ಮೊಹಮ್ಮದ್ ಶಮಿ, ತಮ್ಮ ಫಿಟ್ನೆಸ್ ಬಗ್ಗೆ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ (Ajit Agarkar) ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ತಂಡದಿಂದ ಹೊರಗುಳಿದ ನಂತರ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ, ಆಯ್ಕೆದಾರರು ಏನೇ ಹೇಳಿದರೂ, ಅವರ ಬೌಲಿಂಗ್‌ನ ಪುರಾವೆಗಳು ಎಲ್ಲರಿಗೂ ಕಾಣುತ್ತಿವೆ ಎಂದು ಶಮಿ ಖಡಕ್‌ ಉತ್ತರ ನೀಡಿದ್ದಾರೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಉತ್ತರಾಖಂಡ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದ ಮೂರನೇ ದಿನದಾಟದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಮಿ, ಅಗರ್ಕರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದರು. "ಅವರು ಏನು ಬೇಕಾದರೂ ಹೇಳಲಿ. ನಾನು ಹೇಗೆ ಬೌಲ್‌ ಮಾಡಿದ್ದೇನೆಂದು ನೀವು ನೋಡಿದ್ದೀರಿ. ಇದೆಲ್ಲವೂ ನಿಮ್ಮ ಕಣ್ಣ ಮುಂದೆಯೇ ಇದೆ," ಎಂದು ಹೇಳಿದರು. ಶಮಿ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ, ಅವರನ್ನು ತಂಡಕ್ಕೆ ಏಕೆ ಸೇರಿಸಿಕೊಳ್ಳಬಾರದು ಎಂಬ ಅಜಿತ್ ಅಗರ್ಕರ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಶಮಿ ಕಡೆಯಿಂದ ಈ ಹೇಳಿಕೆ ಬಂದಿದೆ.

ʻನಾನು ಅವರಿಗೆ ಉತ್ತರ ಕೊಡುತ್ತೇನೆʼ: ಮೊಹಮ್ಮದ್‌ ಶಮಿಯ ಅಸಮಾಧಾನದ ಹೇಳಿಕೆಗೆ ಅಜಿತ್‌ ಅಗರ್ಕರ್‌ ಪ್ರತಿಕ್ರಿಯೆ!

ಶುಕ್ರವಾರ ಎನ್‌ಡಿಟಿವಿ ಕಾರ್ಯಕ್ರಮದಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ಶಮಿ ಅವರೊಂದಿಗೆ ಹಲವಾರು ಬಾರಿ ಮಾತನಾಡಿದ್ದೇನೆ ಮತ್ತು ಕಳೆದ ಆರರಿಂದ ಎಂಟು ತಿಂಗಳುಗಳಲ್ಲಿ ಅವರು ಫಿಟ್ ಆಗಿರಲಿಲ್ಲ, ಅದಕ್ಕಾಗಿಯೇ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗಿಲ್ಲ ಎಂದು ಹೇಳಿದರು. "ಅವರು ಫಿಟ್ ಆಗಿದ್ದರೆ, ನಾವು ಶಮಿಯಂತಹ ಬೌಲರ್ ಅನ್ನು ಏಕೆ ಆಯ್ಕೆ ಮಾಡಬಾರದು?" ಎಂದು ಅಗರ್ಕರ್ ಕೇಳಿದರು. ಆದಾಗ್ಯೂ, ಮುಂದಿನ ಕೆಲವು ತಿಂಗಳುಗಳಲ್ಲಿ ಶಮಿ ಫಿಟ್ ಆಗಿದ್ದರೆ, ಪರಿಸ್ಥಿತಿ ಬದಲಾಗಬಹುದು ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದರು.

ಉತ್ತರಾಖಂಡ ಎದುರು 7 ವಿಕೆಟ್‌ ಕಿತ್ತ ಶಮಿ

ಮೊಹಮ್ಮದ್ ಶಮಿ ರಣಜಿ ಟ್ರೋಫಿ ಟೂರ್ನಿಯಲ್ಲಿ ತಮ್ಮ ಫಿಟ್ನೆಸ್‌ ಹಾಗೂ ಫಾರ್ಮ್‌ ಅನ್ನು ಸಾಬೀತುಪಡಿಸಬಹುದು. ಉತ್ತರಾಖಂಡ್ ವಿರುದ್ಧದ ಪಂದ್ಯದಲ್ಲಿ ಅವರು ಒಟ್ಟು ಏಳು ವಿಕೆಟ್‌ಗಳನ್ನು ಕಬಳಿಸಿದರು. ಪ್ರಥಮ ಇನಿಂಗ್ಸ್‌ನಲ್ಲಿ ಅವರು ಒಂದೇ ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿ ತಮ್ಮ ತಂಡಕ್ಕೆ ಮುನ್ನಡೆ ತಂದುಕೊಟ್ಟಿದ್ದರು. ದ್ವಿತೀಯ ಇನಿಂಗ್ಸ್‌ನಲ್ಲಿ ಅವರ ಅತ್ಯುತ್ತಮ ಫಾರ್ಮ್ ಮುಂದುವರಿಯಿತು. ಅವರು, ನಾಯಕ ಕುನಾಲ್ ಚಾಂಡೆಲ್ (72) ಸೇರಿದಂತೆ ನಾಲ್ಕು ನಿರ್ಣಾಯಕ ವಿಕೆಟ್‌ಗಳನ್ನು ತೆಗೆದರು. ಶಮಿ ಅವರ ರಣಜಿ ಟ್ರೋಫಿ ಅಂಕಿಅಂಶಗಳು ಸಹ ಪ್ರಭಾವಶಾಲಿಯಾಗಿವೆ, 91 ಪಂದ್ಯಗಳಲ್ಲಿ 347 ವಿಕೆಟ್‌ಗಳನ್ನು ಗಳಿಸಿದ್ದಾರೆ.

IND vs AUS: ಮೊದಲನೇ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್‌ XI ಆರಿಸಿದ ಇರ್ಫಾನ್‌ ಪಠಾಣ್‌!

ದಕ್ಷಿಣ ಆಫ್ರಿಕಾ ವಿರುದ್ದ ಶಮಿ ಕಮ್‌ಬ್ಯಾಕ್‌ ಸಾಧ್ಯತೆ

ಆಸ್ಟ್ರೇಲಿಯಾ ಪ್ರವಾಸದ ಬಳಿಕ ದಕ್ಷಿಣ ಆಫ್ರಿಕಾ ತಂಡ ಭಾರತದ ಪ್ರವಾಸವನ್ನು ಕೈಗೊಳ್ಳಲಿದೆ. ಇಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಕಾದಾಟ ನಡೆಸಲಿವೆ. ಈ ಸರಣಿಯ ಭಾರತ ತಂಡದಲ್ಲಿ ಮೊಹಮ್ಮದ್‌ ಶಮಿಗೆ ಸ್ಥಾನ ನೀಡುವ ಸಾಧ್ಯತೆ ಇದೆ. ಆದರೆ, ಬಿಸಿಸಿಐ ಚೀಫ್‌ ಸೆಲೆಕ್ಟರ್‌ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ ಕಾರಣ ಶಮಿಗೆ ಸ್ಥಾನ ಸಿಗಬಹುದಾ? ಅಥವಾ ಇಲ್ಲವಾ? ಎಂದು ಕಾದು ನೋಡಬೇಕಾಗಿದೆ.