IND vs NZ T20 World Cup Final: ನ್ಯೂಜಿಲೆಂಡ್ ಎದುರು ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್!
IND vs NZ T20 World Cup Final: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆರಿಸಿಕೊಂಡಿದೆ. ಆ ಮೂಲಕ ಭಾರತ ಮೊದಲು ಬ್ಯಾಟ್ ಮಾಡಲಿದೆ.
ಭಾರತ-ನ್ಯೂಜಿಲೆಂಡ್ ನಡುವಣ ಟಿ20 ವಿಶ್ವಕಪ್ ಫೈನಲ್ ಪಂದ್ಯ. -
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ (IND vs NZ) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ (New Zealand) ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಎದುರಾಳಿ ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಟೀಮ್ ಇಂಡಿಯಾ ಇದೀಗ ಮೂರನೇ ಟಿ20 ವಿಶ್ವಕಪ್ ಗೆಲ್ಲಲು ಎದುರು ನೋಡುತ್ತಿದ್ದರೆ, ಎದುರಾಳಿ ಕಿವೀಸ್ ಚೊಚ್ಚಲ ಚುಟುಕು ವಿಶ್ವಕಪ್ ಗೆಲ್ಲುವ ತವಕದಲ್ಲಿದೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಪ್ರಸಕ್ತ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರುವ ಮೂಲಕ ಫೈನಲ್‌ಗೆ ಪ್ರವೇಶ ಮಾಡಿವೆ. ಅಂದ ಹಾಗೆ ಭಾರತ ತಂಡ ಈಗಾಗಲೇ ಎರಡು ಬಾರಿ ಟಿ20 ವಿಶ್ವಕಪ್ ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿದೆ. ಎಂಎಸ್ ಧೋನಿ ನಾಯಕತ್ವದಲ್ಲಿ 2007ರಲ್ಲಿ ಚೊಚ್ಚಲ ಚುಟುಕು ವಿಶ್ವಕಪ್ ಗೆದ್ದಿದ್ದ ಭಾರತ, 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಎರಡನೇ ಬಾರಿ ವಿಶ್ವಕಪ್ ತನ್ನದಾಗಿಸಿಕೊಂಡಿತ್ತು. ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಮೂರನೇ ಚುಟುಕು ವಿಶ್ವಕಪ್ ತನ್ನದಾಗಿಸಿಕೊಳ್ಳಲು ಟೀಮ್ ಇಂಡಿಯಾ ಯೋಜನೆಯನ್ನು ಹಾಕಿಕೊಂಡಿದೆ.
IND vs NZ: ಭಾರತವನ್ನು ಮಣಿಸಿ ನ್ಯೂಜಿಲೆಂಡ್ ಟಿ20 ವಿಶ್ವಕಪ್ ಗೆಲ್ಲಲಿದೆ ಎಂದ ಮೊಹಮ್ಮದ್ ಆಮಿರ್!
ಆದರೆ, ಮಿಚೆಲ್ ಸ್ಯಾಂಟ್ನರ್ ಅವರ ನಾಯಕತ್ವದ ನ್ಯೂಜಿಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿದೆ. ಕಿವೀಸ್ ಇಲ್ಲಿಯವರೆಗೂ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂದ ಹಾಗೆ ಕಿವೀಸ್ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯವನ್ನು ಆಡಿದ್ದ ಕೋಲ್ ಮೆಕಾಂಚಿ ಅವರ ಸ್ಥಾನದಲ್ಲಿ ಜಾಕೋಬ್ ಡಫಿ ಅವರನ್ನು ಆಡಿಸಲಾಗುತ್ತಿದೆ ಎಂದು ನಾಯಕ ಮಿಚೆಲ್ ಸ್ಯಾಂಟ್ನರ್ ಟಾಸ್ ವೇಳೆ ತಿಳಿಸಿದ್ದಾರೆ.
Presenting #TeamIndia's Playing XI for the #Final 🙌
— BCCI (@BCCI) March 8, 2026
Updates ▶️ https://t.co/5LXBod8bl1#T20WorldCup | #MenInBlue | #INDvNZ pic.twitter.com/FkOPQTAn5p
ಭಾರತ ತಂಡದ ಪ್ಲೇಯಿಂಗ್ Xiನಲ್ಲಿ ಯಾವುದೇ ಬದಲಾವಣೆ ಇಲ್ಲ
ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ಭಾರತ ತಂಡದ ಪ್ಲೇಯಿಂಗ್ Xiನಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂಗ್ಲೆಂಡ್ ವಿರುದ್ಧ ಆಡಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ ಎಂದು ಸೂರ್ಯ ತಿಳಿಸಿದ್ದಾರೆ. ಸತತ ವೈಫಲ್ಯದ ಹೊರತಾಗಿಯೂ ಅಭಿಷೇಕ್ ಶರ್ಮಾ ಅವರನ್ನು ಉಳಿಸಿಕೊಳ್ಳಲಾಗಿದೆ. ಜತೆಗೆ ವರುಣ್ ಚಕ್ರವರ್ತಿಯನ್ನು ಕೂಡ ಆಡಿಸಲಾಗುತ್ತಿದೆ.
🚨 Toss Update 🚨#TeamIndia have been asked to bat first in the #Final
— BCCI (@BCCI) March 8, 2026
Updates ▶️ https://t.co/5LXBod8bl1#T20WorldCup | #MenInBlue | #INDvNZ pic.twitter.com/eq6p5hb085
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್ , ಸೂರ್ಯಕುಮಾರ್‌ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ/ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್
A toss win for Mitch Santner and we’ll bowl first in the ICC T20 World Cup Final! 🏆
— BLACKCAPS (@BLACKCAPS) March 8, 2026
One change to the XI as Jacob Duffy comes in for Cole McConchie. Jimmy Neesham becomes the seventh BLACKCAPS player to play 100 T20I matches ✍️#T20WorldCup pic.twitter.com/1Vo7EBXF0v
ನ್ಯೂಜಿಲೆಂಡ್: ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಫಿನ್ ಆಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್( ನಾಯಕ), ಜಾಕೋಬ್ ಡಫಿ, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್
ತಂಡಗಳು
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್ , ಸೂರ್ಯಕುಮಾರ್‌ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ/ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್
ನ್ಯೂಜಿಲೆಂಡ್: ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಫಿನ್ ಆಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್( ನಾಯಕ), ಜಾಕೋಬ್ ಡಫಿ, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಡೆವೋನ್ ಕಾನ್ವೇ, ಕೈಲ್ ಜೇಮಿಸನ್, ಇಶ್ ಸೋಧಿ, ಕೋಲ್ ಮೆಕಾಂಚಿ