ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RCB vs RR: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

‌RCB vs RR Match Toss, Playing XI: ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 16ನೇ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಆರ್‌, ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಆರ್‌ಸಿಬಿ ಮೊದಲು ಬ್ಯಾಟ್‌ ಮಾಡಲಿದೆ.

IPL 2026: ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್!

ಆರ್‌ಸಿಬಿ vs ಆರ್‌ಆರ್‌ ನಡುವಣ ಐಪಿಎಲ್‌ ಪಂದ್ಯ. -

Profile
Ramesh Kote Apr 10, 2026 8:19 PM

ಗುವಾಹಟಿ: ಇಲ್ಲಿನ ಬರ್ಸಪರ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 16ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು (RCB vs RR) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಆರ್‌ಸಿಬಿ ತಂಡ ಮೊದಲು ಬ್ಯಾಟ್‌ ಮಾಡಲಿದೆ. ಈ ಎರಡೂ ತಂಡಗಳು ಅಜೇಯವಾಗಿ ಮುನ್ನಡೆಯುತ್ತಿದ್ದು, ಈ ಪಂದ್ಯದಲ್ಲಿ ತೀವ್ರ ಪೈಪೋಟಿಯನ್ನು ನಿರೀಕ್ಷೆ ಮಾಡಬಹುದಾಗಿದೆ.

ಪ್ರಸ್ತುತ ನಡೆಯುತ್ತಿರುವ ಟೂರ್ನಿಯಲ್ಲಿ ಈ ಎರಡೂ ತಂಡಗಳು ಅಜೇಯವಾಗಿ ಮುನ್ನಡೆಯುತ್ತಿವೆ. ಆರ್‌ಸಿಬಿ ತಂಡ ಆಡಿದ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದಿವೆ. ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗೆದ್ದು ಬೆಂಗಳೂರು ತಂಡ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದೆ.

ʼನನ್ನನ್ನು ಹುಚ್ಚ ಎಂದಿದ್ರು, ನಾನು ತಲೆ ಕೆಡಿಸಿಕೊಳ್ಳಲಿಲ್ಲʼ: ಕಷ್ಟದ ದಿನಗಳನ್ನು ನೆನೆದ ಮುಕುಲ್‌ ಚೌಧರಿ ತಂದೆ!

ಇನ್ನು ಎದುರಾಳಿ ರಾಜಸ್ಥಾನ್‌ ರಾಯಲ್ಸ್‌ ತಂಡ ಕೂಡ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಆರು ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಚೆನ್ನೈ ಸೂಪರ್‌ ಕಿಂಗ್ಸ್‌, ಗುಜರಾತ್‌ ಟೈಟನ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ವಿರುದ್ಧ ಗೆದ್ದು ಆರ್‌ಆರ್‌, ಟೂರ್ನಿಯಲ್ಲಿ ಭರ್ಜರಿ ಆರಂಭವನ್ನು ಪಡೆದಿದೆ. ಇದೀಗ ಆರ್‌ಸಿಬಿಯನ್ನು ಮಣಿಸಿ ಗೆಲುವಿನ ಓಟವನ್ನು ಮುಂದುವರಿಸಲು ಆತಿಥೇಯ ತಂಡ ಎದುರು ನೋಡುತ್ತಿದೆ.



ಜಾಶ್‌ ಹೇಝಲ್‌ವುಡ್‌ ಇನ್‌

ಆರ್‌ಸಿಬಿ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಎರಡೂ ಪಂದ್ಯಗಳಲ್ಲಿ ತಂಡದ ಪರ ಉತ್ತಮ ಬೌಲಿಂಗ್‌ ಪ್ರದರ್ಶನವನ್ನು ತೋರಿದ್ದ ಜೇಕಬ್‌ ಡಫಿ ಅವರ ಬದಲು ಜಾಶ್‌ ಹೇಝಲ್‌ವುಡ್‌ಗೆ ತಂಡದ ಪ್ಲೇಯಿಂಗ್‌ Xiನಲ್ಲಿ ಸ್ಥಾನವನ್ನು ನೀಡಲಾಗಿದೆ. ಆಸೀಸ್‌ ವೇಗಿ ಈ ಸೀಸನ್‌ನಲ್ಲಿ ಮೊದಲ ಪಂದ್ಯವನ್ನು ಆಡಲು ಎದುರು ನೋಡುತ್ತಿದ್ದಾರೆ. ಗಾಯದಿಂದ ಗುಣಮುಖರಾಗುತ್ತಿದ್ದ ಕಾರಣ ಇವರು ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.



ಆರ್‌ಆರ್‌ ಪ್ಲೇಯಿಂಗ್‌ Xiನಲ್ಲಿಯೂ ಒಂದು ಬದಲಾವಣೆ

ರಾಜಸ್ಥಾನ್‌ ರಾಯಲ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿಯೂ ಒಂದು ಬದಲಾವಣೆ ತರಲಾಗಿದೆ. ತುಷಾರ್‌ ದೇಶಪಾಂಡೆ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನಕ್ಕೆ ಬ್ರಿಜೇಶ್‌ ಶರ್ಮಾ ಅವರನ್ನು ಕರೆ ತರಲಾಗಿದೆ. ಇನ್ನು ಪ್ಲೇಯಿಂಗ್‌ XIನಲ್ಲಿ ವೈಭವ್‌ ಸೂರ್ಯವಂಶಿ ಇಲ್ಲವಾದರೂ ಅವರನ್ನು ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಿಸಲಾಗುತ್ತಿದೆ.

Sanju Samson: ಅಭಿಮಾನಿಗೆ ದುಬಾರಿ ಬೆಲೆಯ ಮೊಬೈಲ್‌ ಉಡುಗೊರೆ ನೀಡಿದ ಸಂಜು ಸ್ಯಾಮ್ಸನ್

ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ರೊಮ್ಯಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಶ್ ಹೇಝಲ್‌ವುಡ್

ರಾಜಸ್ಥಾನ್‌ ರಾಯಲ್ಸ್:‌ ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿ.ಕೀ), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮಾಯರ್, ಡೊನೊವನ್ ಫೆರೀರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ