MUM vs RAJ: ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೂ ಮುನ್ನ ಶತಕ ಬಾರಿಸಿದ ಯಶಸ್ವಿ ಜೈಸ್ವಾಲ್!
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರಾಜಸ್ಥಾನ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅದ್ಭುತ ಶತಕವನ್ನು ಬಾರಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ದದ ರಣಜಿ ಟ್ರೋಫಿ ಪಂದ್ಯದಲ್ಲಿ ಅವರು ಶತಕ ಬಾರಿಸಿದ್ದಾರೆ. ಆದರೂ ಈ ಪಂದ್ಯದಲ್ಲಿ ಡ್ರಾನಲ್ಲಿ ಮುಗಿಯಿತು.
ರಾಜಸ್ಥಾನ್ ರಾಯಲ್ಸ್ ಎದುರು ಭರ್ಜರಿ ಶತಕ ಬಾರಿಸಿದ ಯಶಸ್ವಿ ಜೈಸ್ವಾಲ್. -
ಜೈಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ (IND vs AUS) ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ (Yashasvi jaiswal) ಅವರು ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ಅವರು ರಾಜಸ್ಥಾನ್ ರಾಯಲ್ಸ್ ವಿರುದ್ದದ 2025-26ರ ಸಾಲಿನ ರಣಜಿ ಟ್ರೋಫಿ (Ranji Trophy 2025-26) ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ. ಈ ಶತಕದ ಮೂಲಕ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ತಮ್ಮ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ. ಎಡಗೈ ಆಟಗಾರನ ಶತಕದ ಹೊರತಾಗಿಯೂ ಮುಂಬೈ ತಂಡ, ರಾಜಸ್ಥಾನ್ ರಾಯಲ್ಸ್ ಎದುರು ಪಂದ್ಯವನ್ನು ಡ್ರಾ ವನ್ನು ಸಾಧಿಸಿತು. ಅಂದ ಹಾಗೆ ಹರಿಣ ಪಡೆಯ ವಿರುದ್ದದ ಟೆಸ್ಟ್ ಸರಣಿಯು ನವೆಂಬರ್ 14 ರಂದು ಆರಂಭವಾಗಲಿದೆ.
ಇಲ್ಲಿನ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ಅಂತ್ಯವಾದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಯಶಸ್ವಿ ಜೈಸ್ವಾಲ್, 120 ಎಸೆತಗಳಲ್ಲಿ 11 ಬೌಂಡರಿಗಳೊಂದಿಗೆ ಶತಕವನ್ನು ಪೂರ್ಣಗೊಳಿಸಿದರು. ಅಂತಿಮವಾಗಿ ಅವರು ಆಡಿದ 174 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 18 ಬೌಂಡರಿಗಳೊಂದಿಗೆ 156 ರನ್‌ಗಳನ್ನು ಕಲೆ ಹಾಕಿದರು. ಇದು ಇವರ 17ನೇ ಪ್ರಥಮ ದರ್ಜೆ ಕ್ರಿಕೆಟ್ ಶತಕವಾಗಿದೆ. ಇದಕ್ಕೂ ಮುನ್ನ ಪ್ರಥಮ ಇನಿಂಗ್ಸ್‌ನಲ್ಲಿ ಜೈಸ್ವಾಲ್ 67 ರನ್ ಕಲೆ ಹಾಕಿದ್ದರು.
Ranji Trophy 2025-26: ಮೊಹ್ಸಿನ್ ಖಾನ್ ಸ್ಪಿನ್ ಮೋಡಿಗೆ ಕೇರಳ ತತ್ತರ, ಕರ್ನಾಟಕ ತಂಡಕ್ಕೆ ಇನಿಂಗ್ಸ್ ಜಯ!
ರಾಜಸ್ಥಾನ್ ರಾಯಲ್ಸ್‌ಗೆ 3 ಅಂಕ
ಭಾರತ ಪರ ಆಡಿರುವ ದೀಪಕ್ ಹೂಡಾ ರಾಜಸ್ಥಾನ ತಂಡದ ಪ್ರಥಮ ಇನಿಂಗ್ಸ್‌ನಲ್ಲಿ 4ನೇ ಸ್ಥಾನದಲ್ಲಿ ಬ್ಯಾಟ್ ಮಾಡಿ ದ್ವಿಶತಕ ಗಳಿಸಿದರು. ಹೂಡಾ 335 ಎಸೆತಗಳನ್ನು ಎದುರಿಸಿ 248 ರನ್ ಗಳಿಸಿದರು. ಅವರು ತಮ್ಮ ಇನಿಂಗ್ಸ್‌ನಲ್ಲಿ 22 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಸಹ ಗಳಿಸಿದ್ದರು. ಇದರ ಫಲವಾಗಿ ರಾಜಸ್ಥಾನ್ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 617 ರನ್ ಗಳಿಸಿ ಮುನ್ನಡೆ ಪಡೆಯುವ ಮೂಲಕ ಮೂರು ಅಂಕಗಳನ್ನು ಕಲೆ ಹಾಕಿದೆ. ಆದರೆ, ಪ್ರಥಮ ಇನಿಂಗ್ಸ್‌ನಲ್ಲಿ 254 ರನ್‌ಗಳು ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ 269 ರನ್ ಗಳಿಸಿ ಮುಂಬೈ ಕೇವಲ ಒಂದು ಅಂಕ ಪಡೆಯಿತು.
🚨JAISWAL RESCUES MUMBAI🚨
— Cricbuzz (@cricbuzz) November 4, 2025
Yashasvi Jaiswal smashed 156 off just 174 balls to ensure Mumbai draw against Rajasthan #RanjiTrophy
He is ready for South Africa!! 🔥 pic.twitter.com/Q9czuQXuBF
ಯಶಸ್ವಿ ಜೈಸ್ವಾಲ್ ಅಂಕಿಅಂಶಗಳು
23ನೇ ವಯಸ್ಸಿನ ಯಶಸ್ವಿ ಜೈಸ್ವಾಲ್ 2023 ರಲ್ಲಿ ಭಾರತ ಪರ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ, ಅವರು 26 ಟೆಸ್ಟ್‌ಗಳು, ಒಂದು ಏಕದಿನ ಮತ್ತು 23 ಟಿ20ಐ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಜೈಸ್ವಾಲ್ ಏಳು ಶತಕಗಳು ಮತ್ತು 12 ಅರ್ಧಶತಕಗಳು ಸೇರಿದಂತೆ 2,428 ರನ್ ಗಳಿಸಿದ್ದಾರೆ. ಜೈಸ್ವಾಲ್ ಅವರ ಹೆಸರಿನಲ್ಲಿ 15 ಏಕದಿನ ರನ್‌ಗಳಿವೆ. ಜೈಸ್ವಾಲ್ ಟಿ20ಐಗಳಲ್ಲಿ 723 ರನ್ ಗಳಿಸಿದ್ದಾರೆ, 164.3 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಟಿ20ಐ ಕ್ರಿಕೆಟ್‌ನಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ.