Rohit sharma Test Retirement: ರೋಹಿತ್ ಶರ್ಮಾರ ಟೆಸ್ಟ್ ಕ್ರಿಕೆಟ್ ದಾಖಲೆಗಳು!
ಭಾರತ ತಂಡದ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಬುಧವಾರ ತಮ್ಮ ಟೆಸ್ಟ್ ವೃತ್ತಿ ಜೀವನಕ್ಕೆ ಹಠಾತ್ ವಿದಾಯ ಹೇಳಿದ್ದಾರೆ. ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ರೋಹಿತ್ ಶರ್ಮಾ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ಅವರ ಟೆಸ್ಟ್ ಅಂಕಿ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.



ಟೆಸ್ಟ್ ಕ್ರಿಕೆಟ್ಗೆ ಹಿಟ್ಮ್ಯಾನ್ ಗುಡ್ಬೈ
ಭಾರತ ಏಕದಿನ ತಂಡದ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಬುಧವಾರ ತಮ್ಮ ಟೆಸ್ಟ್ ವೃತ್ತಿ ಜೀವನಕ್ಕೆ ಹಠಾತ್ ವಿದಾಯ ಹೇಳಿದ್ದಾರೆ. ಈ ನಿರ್ಧಾರವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ರೋಹಿತ್ ಶರ್ಮಾ ಹೇಳಿಕೆ
"ಹಲೋ, ನಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ನಿಮಗೆ ಹೇಳಲು ಬಯಸುತ್ತೇನೆ ಬಿಳಿ ಜೆರ್ಸಿಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ನನಗೆ ಸಿಕ್ಕ ದೊಡ್ಡ ಗೌರವ. ವರ್ಷಗಳಲ್ಲಿ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಏಕದಿನ ಪಂದ್ಯಗಳಲ್ಲಿ ಭಾರತದ ಪರ ಆಡುವುದನ್ನು ಮುಂದುವರಿಸುತ್ತೇನೆ," ಎಂದು ರೋಹಿತ್ ಶರ್ಮಾ ಬರೆದಿದ್ದಾರೆ.

2013ರಲ್ಲಿ ಟೆಸ್ಟ್ಗೆ ಪದಾರ್ಪಣೆ
ರೋಹಿತ್ ಶರ್ಮಾ ಅವರು 2013ರಂದು ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ತಮ್ಮ ವೃತ್ತಿ ಜೀವನದ ಚೊಚ್ಚಲ ಇನಿಂಗ್ಸ್ನಲ್ಲಿಯೇ ರೋಹಿತ್ ಶತಕ ಬಾರಿಸಿದ್ದರು. 301 ಎಸೆತಗಳಲ್ಲಿ 23 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 177 ರನ್ ಗಳಿಸಿದ್ದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು.

ಬೌಂಡರಿ, ಸಿಕ್ಸರ್ಗಳ ದಾಖಲೆ
ರೋಹಿತ್ ಶರ್ಮಾ ತಮ್ಮ ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 473 ಬೌಂಡರಿಗಳು ಮತ್ತು 88 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 2024 ರಲ್ಲಿ ಆಸ್ಟ್ರೇಲಿಯಾದಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅವರು ಮೆಲ್ಬೋರ್ನ್ನಲ್ಲಿ ನಡೆದಿದ್ದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು.

ರೋಹಿತ್ ಶರ್ಮಾರ ಟೆಸ್ಟ್ ನಾಯಕತ್ವದ ದಾಖಲೆ
ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡ 24 ಪಂದ್ಯಗಳನ್ನು ಆಡಿದೆ. ಇದರಲ್ಲಿ 12ರಲ್ಲಿ ಗೆಲುವು ಪಡೆದಿದ್ದು, 9 ರಲ್ಲಿ ಸೋಲು ಅನುಭವಿಸಿದೆ. ಇನ್ನುಳಿದ ಮೂರು ಪಂದ್ಯಗಳು ಡ್ರಾನಲ್ಲಿ ಅಂತ್ಯ ಕಂಡಿವೆ. ಇನ್ನು ತವರಿನಲ್ಲಿ ಆಡಿದ 16 ಟೆಸ್ಟ್ ಪಂದ್ಯಗಳಲ್ಲಿ 10ರಲ್ಲಿ ಗೆದ್ದಿದೆ. ಇನ್ನುಳಿದ 5ರಲ್ಲಿ ಸೋಲು ಹಾಗೂ ಒಂದು ಡ್ರಾ ಕಂಡಿದೆ.

4301 ರನ್ ಕಲೆ ಹಾಕಿರುವ ಹಿಟ್ಮ್ಯಾನ್
ರೋಹಿತ್ ಶರ್ಮಾ ತಮ್ಮ 11 ವರ್ಷಗಳ ಸುದೀರ್ಘ ಟೆಸ್ಟ್ ವೃತ್ತಿಜೀವನದಲ್ಲಿ ಒಟ್ಟು 67 ಪಂದ್ಯಗಳ 116 ಇನಿಂಗ್ಸ್ಗಳಲ್ಲಿ 46ಕ್ಕೂ ಹೆಚ್ಚಿನ ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ ಅವರು 12 ಶತಕಗಳು ಮತ್ತು 18 ಅರ್ಧಶತಕಗಳನ್ನು ಬಾರಿಸಿದ್ದಾರೆ.