ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ʻರೋಹಿತ್‌, ಕೊಹ್ಲಿ ಅನುಪಸ್ಥಿತಿʼ-ಭಾರತಕ್ಕೆ ಮೊಯೀನ್‌ ಅಲಿ ವಾರ್ನಿಂಗ್!

Moeen Ali on IND vs ENG Test Series: ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿಯ ಅನುಪಸ್ಥಿತಿ ಭಾರತ ತಂಡದ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ ತಂಡಕ್ಕೆ ಲಾಭವಾಗಲಿದೆ ಎಂದು ಆಂಗ್ಲರ ಸ್ಪಿನ್ನರ್‌ ಮೊಯೀನ್‌ ಅಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಟೆಸ್ಟ್‌ ಸರಣಿ ಗೆಲ್ಲಲಿದೆ: ಮೊಯೀನ್‌ ಅಲಿ ಭವಿಷ್ಯ!

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಟೆಸ್ಟ್‌ ನಿವೃತ್ತಿ ಬಗ್ಗೆ ಮೊಯೀನ್‌ ಅಲಿ ಪ್ರತಿಕ್ರಿಯೆ.

Profile Ramesh Kote May 13, 2025 10:29 PM

ನವದೆಹಲಿ: ರೋಹಿತ್‌ ಶರ್ಮಾ (Rohit sharma) ಹಾಗೂ ವಿರಾಟ್‌ ಕೊಹ್ಲಿ (Virat Kohli) ಅವರ ಅನುಪಸ್ಥಿತಿ ಭಾರತದ ವಿರುದ್ಧ ಮುಂಬರುವ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ (IND vs ENG) ಇಂಗ್ಲೆಂಡ್‌ ತಂಡ ಲಾಭವಾಗಲಿದೆ ಎಂದು ಆಂಗ್ಲರ ಮಾಜಿ ಆಲ್‌ರೌಂಡರ್‌ ಮೊಯೀನ್‌ ಅಲಿ (Moeen Ali) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ರೋಹಿತ್‌ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದಾದ ಬೆನ್ನಲ್ಲೆ ಮೇ 12 ರಂದು ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ಕೂಡ ದೀರ್ಘಾವಧಿ ಸ್ವರೂಪಕ್ಕೆ ವಿದಾಯ ಹೇಳಿದ್ದರು. ಇದೀಗ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡ, ಇಂಗ್ಲೆಂಡ್‌ ವಿರುದ್ದ ಟೆಸ್ಟ್‌ ಸರಣಿಯಲ್ಲಿ ಆಡಲಿದೆ. ಆ ಮೂಲಕ ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನ ಅಭಿಯಾನವನ್ನು ಆರಂಭಿಸಲಿದೆ.

ಸ್ಕೈ ಸ್ಪೋರ್ಟ್ಸ್‌ ಜೊತೆ ಮಾತನಾಡಿದ ಮೊಯೀನ್‌ ಅಲಿ, "ಹೌದು, ಖಂಡಿತವಾಗಿಯೂ ಇವರಿಬ್ಬರ ಅನುಪಸ್ಥಿತಿ ಇಂಗ್ಲೆಂಡ್‌ಗೆ ಲಾಭವಾಗಲಿದೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಹಲವು ಬಾರಿ ಟೆಸ್ಟ್‌ ಕ್ರಿಕೆಟ್‌ ಆಡಿರುವ ಇಬ್ಬರು ಅಗ್ರ ಆಟಗಾರರು ಅನುಭವಿಗಳಾಗಿದ್ದಾರೆ. ಕೊನೆಯ ಇಂಗ್ಲೆಂಡ್‌ನಲ್ಲಿ ರೋಹಿತ್‌ ಶರ್ಮಾ ಅದ್ಭುತವಾಗಿ ಆಡಿದ್ದನ್ನು ನಾನು ನೆನಪಿಸಿಕೊಳ್ಳುತ್ತೇನೆ. ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಇಬ್ಬರೂ ದೊಡ್ಡ ಬ್ಯಾಟ್ಸ್‌ಮನ್‌ಗಳು ಹಾಗೂ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಹಾಗಾಗಿ ಇವರ ಅನುಪಸ್ಥಿ ಭಾರತ ತಂಡಕ್ಕೆ ದೊಡ್ಡ ನಷ್ಟವಾಗಲಿದೆ," ಎಂದು ಹೇಳಿದ್ದಾರೆ.

IND vs ENG: ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಸ್ಥಾನ ತುಂಬಬಲ್ಲ ಟಾಪ್‌ 5 ಆಟಗಾರರು!

ಮೊಯೀನ್‌ ಅಲಿ ಇಂಗ್ಲೆಂಡ್‌ ತಂಡದ 68 ಟೆಸ್ಟ್‌ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 3000ಕ್ಕೂ ಅಧಿಕ ರನ್‌ಗಳು ಹಾಗೂ 200ಕ್ಕೂ ಅಧಿಕ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವರು ತಮ್ಮ ವೃತ್ತಿ ಜೀವನದಲ್ಲಿ ವಿರಾಟ್‌ ಕೊಹ್ಲಿಯನ್ನು ಸಾಕಷ್ಟು ಬಾರಿ ಔಟ್‌ ಮಾಡಿದ್ದಾರೆ. ವಿರಾಟ್‌ ಕೊಹ್ಲಿ ಭಾರತ ತಂಡದ ಪರ 123 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು 9,230 ರನ್‌ಗಳನ್ನು ಕಲೆ ಹಾಕಿದ್ದಾರೆ. ಇದರಲ್ಲಿ ಅವರು 7 ದ್ವಿಶತಕಗಳು, 30 ಶತಕಗಳು ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ನಾಯಕನಾಗಿ ಭಾರತ ತಂಡದ ಪರ ಆಡಿ 68 ಪಂದ್ಯಗಳಲ್ಲಿ 40 ರಲ್ಲಿ ಗೆಲುವು ಪಡೆದಿದ್ದಾರೆ. ಆ ಮೂಲಕ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಭಾರತದ ಪರ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

"ವಿರಾಟ್‌ ಕೊಹ್ಲಿ ವಿದಾಯ ಹೇಳಿದ್ದರಿಂದ ಟೆಸ್ಟ್‌ ಕ್ರಿಕೆಟ್‌ಗೆ ದೊಡ್ಡ ಹೊಡೆತ ಬೀಳುತ್ತದೆ. ಟೆಸ್ಟ್‌ ಕ್ರಿಕೆಟ್‌ ಅನ್ನು ಮುನ್ನಡೆಸಿದ ಒಬ್ಬ ಪ್ರವರ್ತಕ ವಿರಾಟ್‌ ಕೊಹ್ಲಿ. ಅವರು ಅದ್ಭುತ ಆಟಗಾರ ಹಾಗೂ ಅವರದು ಅದ್ಭುತ ವೃತ್ತಿ ಜೀವನ," ಎಂದು ಕೋಲ್ಕತಾ ನೈಟ್‌ ರೈಡರ್ಸ್‌ ಸ್ಪಿನ್ನರ್‌ ತಿಳಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ವಿರಾಟ್‌ ಕೊಹ್ಲಿಗೆ ಸಚಿನ್‌ ತೆಂಡೊಲ್ಕರ್ ವಿಶೇಷ ಸಂದೇಶ!

"ಅವರು ಟೆಸ್ಟ್‌ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ, ಅದರಲ್ಲಿಯೂ ವಿಶೇಷವಾಗಿ ಭಾರತದಲ್ಲಿ ಅವರ ಕೊಡುಗೆ ಸಾಕಷ್ಟಿದೆ. ಸಚಿನ್‌ ತೆಂಡೂಲ್ಕರ್‌ ಬಳಿಕ ಒಬ್ಬ ಆಟಗಾರನನ್ನು ನೋಡಲು ಪ್ರತಿಯೊಬ್ಬರೂ ಕ್ರೀಡಾಂಗಣಕ್ಕೆ ಬರುತ್ತಾರೆ ಅಂದರೆ ಅದು ವಿರಾಟ್‌ ಕೊಹ್ಲಿ. ಅದ್ಭುತ ದಾಖಲೆ, ಅವರ ಆಟವನ್ನು ನೋಡಲು ತುಂಬಾ ಖುಷಿಯಾಗುತ್ತದೆ. ಅವರು ತಮ್ಮ ವೃತ್ತಿ ಜೀವನದಲ್ಲಿ ಉತ್ತಮವಾಗಿ ಆಡಿದ್ದಾರೆ ಹಾಗೂ ನಾಯಕತ್ವದಲ್ಲಿಯೂ ಅವರು ಅದ್ಭುತವಾಗಿದ್ದರು. ಅವರ ಅನುಪಸ್ಥಿತಿ ಟೆಸ್ಟ್‌ ಕ್ರಿಕೆಟ್‌ಗೆ ದೊಡ್ಡ ನಷ್ಟ," ಎಂದು ಮೊಯೀನ್‌ ಅಲಿ ಹೇಳಿದ್ದಾರೆ.