RCB vs LSG: ಟಾಸ್ ಗೆದ್ದು ಚೇಸಿಂಗ್ ಆರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು!
RCB vs LSG match: ಲಖನೌದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಆರ್‌ಸಿಬಿ vs ಎಲ್‌ಎಸ್‌ಜಿ ಐಪಿಎಲ್ ಪಂದ್ಯ. -
ಲಖನೌ: ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜಯಂಟ್ಸ್ (RCB vs LSG) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಆತಿಥೇಯ ಲಖನೌ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.
ಟಾಸ್ ಗೆದ್ದ ಬಳಿಕ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು ಹಾಗೂ ಈ ವೇಳೆ ಮಾತನಾಡಿದ ರಜತ್, ಇಲ್ಲಿನ ಮಣ್ಣು ಕಪ್ಪು ಹಾಗೂ ಸ್ಲೋ ವಿಕೆಟ್ ಇದಾಗಿದೆ. ಕಳೆದ ನಾಲ್ಕೂ ಅಥವಾ ಐದುಪ ಪಂದ್ಯಗಳಲ್ಲಿ ಕಡಿಮೆ ರನ್‌ಗಳ ಮೂಡಿ ಬಂದಿವೆ, ಹಾಗಾಗಿ ನಾನು ಮೊದಲು ಬೌಲ್ ಮಾಡಿದ ಆತಿಥೇಯ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುತ್ತೇವೆಂದು ತಿಳಿಸಿದ್ದಾರೆ. ಅಲ್ಲದೆ ಆರ್‌ಸಿಬಿ ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಮುಂದುವರಿಸುತ್ತೇವೆಂದು ತಿಳಿಸಿದ್ದಾರೆ.
LSG vs RCB: ಇಂದಿನ ಪಂದ್ಯದಲ್ಲಿ ಆರ್‌ಸಿಬಿ-ಲಖನೌ ತಂಡದ ಆಟಗಾರರು ನಿರ್ಮಿಸಬಹುದಾದ ದಾಖಲೆಗಳಿವು
ಆದರೆ, ರಿಷಭ್ ಪಂತ್ ನಾಯಕತ್ವದ ಎಲ್‌ಎಸ್‌ಜಿ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಜಾಶ್ ಇಂಗ್ಲಿಸ್ ಗಾಯಕ್ಕೆ ತುತ್ತಾಗಿದ್ದಾರೆ, ಹಾಗಾಗಿ ಅವರ ಸ್ಥಾನಕ್ಕೆ ಅರ್ಶಿನ್ ಕುಲಕರ್ಣಿ ಆರಂಭಿಕನಾಗಿ ತಂಡಕ್ಕೆ ಮರಳಿದ್ದಾರೆ. ಮಣಿಮಾರನ್ ಸಿದ್ದಾರ್ಥ್ ಅವರ ಸ್ಥಾನಕ್ಕೆ ಶಹಬಾಝ್ ಅಹ್ಮದ್ ಬಂದಿದ್ದಾರೆ. ಇನ್ನು ಗಾಯದ ಕಾರಣ ಮೊಹ್ಸಿನ್ ಖಾನ್‌ಗೆ ವಿಶ್ರಾಂತಿ ನೀಡಲಾಗಿದೆ ಎಂದು ಪಂತ್ ಟಾಸ್ ವೇಳೆ ಹೇಳಿದ್ದಾರೆ.
🚨 Toss 🚨@RCBTweets have won the toss and elected to bowl first against @LucknowIPL in Lucknow.
— IndianPremierLeague (@IPL) May 7, 2026
Updates ▶️ https://t.co/W0eDq9aWb7#TATAIPL | #KhelBindaas | #LSGvRCB pic.twitter.com/Z5DSxyelwt
ಅಗ್ರ ಸ್ಥಾನದ ಮೇಲೆ ಆರ್‌ಸಿಬಿ ಕಣ್ಣು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರು ಸೋಲು ಅನುಭವಿಸಿತ್ತು. ಆದರೂ ಇಲ್ಲಿಯವರೆಗೂ ಆಡಿದ 9 ಪಂದ್ಯಗಳಲ್ಲಿ ಆರ್‌ಸಿಬಿ ಆರರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ. ಇದೀಗ 12 ಅಂಕಗಳ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ಇದೀಗ ಲಖನೌ ಎದುರು ಗೆದ್ದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 14 ಪಾಯಿಂಟ್ಸ್ ಹಾಗೂ ಪಾಸಿಟಿವ್ ರನ್‌ರೇಟ್ ಮೂಲಕ ಅಗ್ರ ಸ್ಥಾನಕ್ಕೆ ಲಗ್ಗೆ ಇಡಲಿದೆ.
🪙 𝐓𝐎𝐒𝐒 𝐔𝐏𝐃𝐀𝐓𝐄 🗞️⬇️
— Royal Challengers Bengaluru (@RCBTweets) May 7, 2026
Back after a week and Captain Patidar opts to bowl after winning the toss. ❤️
Same eleven as the last game. 𝙃𝙀𝙍𝙀. 𝙒𝙀. 𝙂𝙊. 1️⃣2️⃣𝙏𝙃 𝙈𝘼𝙉 𝘼𝙍𝙈𝙔. 🙌#PlayBold #ನಮ್ಮRCB #IPL2026 #LSGvRCB @nothingindia pic.twitter.com/N4S0TKFMBi
ಆದರೆ, ಲಖನೌ ಸೂಪರ್ ಜಯಂಟ್ಸ್ ತಂಡ ಇಲ್ಲಿಯವರೆಗೂ ಆಡಿದ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ, ಇನ್ನುಳಿದ 7ರಲ್ಲಿ ಸೋಲು ಅನುಭವಿಸಿದೆ. ಆ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಪಂತ್ ಪಡೆಗೆ ಪ್ಲೇಆಫ್ಸ್ ಹಾದಿ ಅತ್ಯಂತ ಕಠಿಣವಾಗಿದೆ.
ಇತ್ತಂಡಗಳ ಪ್ಲೇಯಿಂಗ್ Xi
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ಸಿ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ರಸಿಖ್ ಸಲಾಮ್ ದಾರ್, ಜಾಶ್ ಹೇಝಲ್‌ವುಡ್
ಲಖನೌ ಸೂಪರ್ ಜಯಂಟ್ಸ್: ಮಿಚೆಲ್ ಮಾರ್ಷ್, ಅರ್ಶಿನ್ ಕುಲಕರ್ಣಿ, ನಿಕೋಲಸ್ ಪೂರನ್, ಏಡೆನ್ ಮಾರ್ಕ್ರಮ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ಅಕ್ಷತ್ ರಘುವಂಶಿ, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ದಿಗ್ವೇಶ್ ಸಿಂಗ್ ರಾಠಿ, ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್