ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IND vs WI: ಟಿ20ಐ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳ ಪೂರ್ಣಗೊಳಿಸಿದ ಸಂಜು ಸ್ಯಾಮ್ಸನ್‌!

ವೆಸ್ಟ್‌ ಇಂಡೀಸ್‌ ವಿರುದ್ಧದ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ ಸ್ಪೋಟಕ ಅರ್ಧಶತಕವನ್ನು ಬಾರಿಸಿದರು. ತಮ್ಮ ಅರ್ಧಶತಕದಲ್ಲಿ ಅವರು 4 ಸಿಕ್ಸರ್‌ ಬಾರಿಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅವರು 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ರೋಹಿತ್‌ ಶರ್ಮಾ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

ಟಿ20ಐ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ ಪೂರ್ಣಗೊಳಿಸಿದ ಸಂಜು ಸ್ಯಾಮ್ಸನ್!

100 ಟಿ20ಐ ಸಿಕ್ಸರ್‌ ಪೂರ್ಣಗೊಳಿಸಿದ ಸಂಜು ಸ್ಯಾಮ್ಸನ್‌. -

Profile
Ramesh Kote Oct 14, 2026 10:05 PM

ಹೈದರಾಬಾದ್‌: ವೆಸ್ಟ್‌ ಇಂಡೀಸ್‌ ವಿರುದ್ಧದ ನಾಲ್ಕನೇ ಟಿ20ಐ ಪಂದ್ಯದಲ್ಲಿ (IND vs WI) ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ (Sanju Samson) ಸ್ಪೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಅವರು ಈ ಅರ್ಧಶತಕದ ಇನಿಂಗ್ಸ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಅವರು ಮಾಜಿ ನಾಯಕ ರೋಹಿತ್‌ ಶರ್ಮಾ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಇದೀಗ ಬಲಗೈ ಬ್ಯಾಟರ್‌ ಸಂಜು ಸೇರ್ಪಡೆಯಾಗಿದ್ದಾರೆ.

ಬುಧವಾರ ಇಲ್ಲಿನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ವೆಸ್ಟ್‌ ಇಂಡೀಸ್‌ ತಂಡ, ಶೇಯ್‌ ಹೋಪ್‌ ಶತಕ ಹಾಗೂ ಶೆರ್ಫೆನ್‌ ಋದರ್‌ಫೋರ್ಡ್‌ ಅವರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 247 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಆತಿಥೇಯ ಟೀಮ್‌ ಇಂಡಿಯಾಗೆ 248 ರನ್‌ಗಳ ಕಠಿಣ ಗುರಿಯನ್ನು ನೀಡಿತು.

IND vs WI: ಮೂರನೇ ಕ್ರಮಾಂಕದಲ್ಲಿ ಇಶಾನ್‌ ಕಿಶನ್‌ ಮುಂದುವರಿಯಲಿ ಎಂದ ಚೇತೇಶ್ವರ್‌ ಪೂಜಾರ!

ಬಳಿಕ ಭಾರತ ತಂಡದ ಪರ ಇನಿಂಗ್ಸ್‌ ಆರಂಭಿಸಿದ ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್‌ ಶರ್ಮಾ ಜೋಡಿಯಿಂದ ಸ್ಪೋಟಕ ಬ್ಯಾಟಿಂಗ್‌ ಮೂಡಿಬಂತು. ಈ ಜೋಡಿ ಮೊದಲನೇ ವಿಕೆಟ್‌ಗೆ 25 ಎಸೆತಗಳಲ್ಲಿ 60 ರನ್‌ ಮೂಡಿಬಂತು. ಅಚ್ಚರಿಯ ಸಂಗತಿ ಏನೆಂದರೆ ಈ ಜೊತೆಯಾಟದಲ್ಲಿ ಅಭಿಷೇಕ್‌ ಗಳಿಸಿದ್ದು ಕೇವಲ ಎರಡು ರನ್‌ ಮಾತ್ರ. ಆದರೆ, ಸಂಜು 23 ಎಸೆತಗಳಲ್ಲಿ 56 ರನ್‌ಗಳನ್ನು ಸಿಡಿಸಿದರು.



<blockquote class="twitter-tweet"><p lang="en" dir="ltr">Century of Maximums 💯🙌 @IamSanjuSamson's memorable feat 🫡 Updates ▶️ https://t.co/ksuQbTW6n5 #TeamIndia | #INDvWI | @mflone_ https://t.co/Wy1Y9j0TV0</p>&mdash; BCCI (@BCCI) <a href="https://x.com/BCCI/status/2110396773047083027?ref_src=twsrc%5Etfw">October 14, 2026</a></blockquote> <script async src="https://platform.x.com/widgets.js" charset="utf-8"></script>

ಸ್ಕೋರ್‌ ಬೋರ್ಡ್‌ ಒತ್ತಡದಲ್ಲಿ ಕ್ರೀಸ್‌ಗೆ ಬಂದ ಸಂಜು ಸ್ಯಾಮ್ಸನ್‌, ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್‌ಗೆ ಕೈ ಹಾಕಿದರು. ಅವರು ಆಡಿದ 20 ಎಸೆತಗಳಲ್ಲಿಯೇ ಅರ್ಧಶತಕವನ್ನು ಬಾರಿಸಿದ್ದರು. ಅಲ್ಲದೆ ಔಟ್‌ ಆಗುವುದಕ್ಕೂ ಮುನ್ನ ಅವರು 23 ಎಸೆತಗಳಲ್ಲಿ 56 ರನ್‌ಗಳನ್ನು ಸಿಡಿಸಿದ್ದರು. ಅಂದ ಹಾಗೆ ದೊಡ್ಡ ಇನಿಂಗ್ಸ್‌ ಆಡುವ ಭರವಸೆಯನ್ನು ಮೂಡಿಸಿದ್ದ ಸಂಜು ಸ್ಯಾಮ್ಸನ್‌, ಕಿಮೋ ಪಾಲ್‌ ಎಸೆತದಲ್ಲಿ ಸಿಕ್ಸರ್‌ ಬಾರಿಸಲು ಹೋಗಿ ಡೀಪ್‌ ಸ್ಕೈರ್‌ಲೆಗ್‌ನಲ್ಲಿ ಶಿಮ್ರಾನ್‌ ಹೆಟ್ಮಾಯೆರ್‌ಗೆ ಕ್ಯಾಚ್‌ ಕೊಟ್ಟು ಔಟ್‌ ಆದರು.

ಆರನೇ ಭಾರತೀಯ ಬ್ಯಾಟ್ಸ್‌ಮನ್‌ ಸಂಜು

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ ಪೂರ್ಣಗೊಳಿಸಿದ ಭಾರತದ ಆರನೇ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಇದೀಗ ಸಂಜು ಬರೆದಿದ್ದಾರೆ. ಇದೀಗ ಸಂಜು ಸ್ಯಾಮ್ಸನ್‌ 102 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. 205 ಸಿಕ್ಸರ್‌ಗಳ ಮೂಲಕ ರೋಹಿತ್‌ ಶರ್ಮಾ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ಸೂರ್ಯಕುಮಾರ್‌ ಯಾದವ್‌ (179) ಎರಡನೇ ಸ್ಥಾನದಲ್ಲಿದ್ದಾರೆ. 141 ಸಿಕ್ಸರ್‌ಗಳ ಮೂಲಕ ಅಭಿಷೇಕ್‌ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಹಾರ್ದಿಕ್‌ ಪಾಂಡ್ಯ (126) ಹಾಗೂ ವಿರಾಟ್‌ ಕೊಹ್ಲಿ (124) ನಂತರದ ಸ್ಥಾನಗಳಲ್ಲಿದ್ದಾರೆ.