2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟರ್ಸ್!
T20 World Cup 2026: ಭಾರತ ತಂಡ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಯಿತು. ಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ಎದುರು 96 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಈ ಟೂರ್ನಿಯಲ್ಲಿ ಬಹು ಸಂಖ್ಯೆಯಲ್ಲಿ ಸಿಕ್ಸರ್‌ಗಳು ಮೂಡಿ ಬಂದಿದೆ. ಅದಂತೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.
2026ರ ಟಿ20 ವಿಶ್ವಕಪ್ ಟೂರ್ನಿಯ ಟಾಪ್ 5 ಸಿಕ್ಸರ್ ಸರದಾರರು. -
ನವದೆಹಲಿ: ಕಳೆದ 2026ರ ಐಸಿಸಿ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯಲ್ಲಿ ಬೌಲರ್‌ಗಳಿಗಿಂತ ಬ್ಯಾಟ್ಸ್‌ಮನ್‌ಗಳು ಪ್ರಾಬಲ್ಯ ಮೆರೆದಿದ್ದಾರೆ. ಹಲವು ಆಟಗಾರರು ಭರ್ಜರಿ ಸಿಕ್ಸರ್‌ಗಳ ಮೂಲಕ ಟೂರ್ನಿಗೆ ಹೊಸ ಚೈತನ್ಯ ತಂದುಕೊಟ್ಟಿದ್ದಾರೆ. ತಮ್ಮ-ತಮ್ಮ ಸ್ಪೋಟಕ ಬ್ಯಾಟಿಂಗ್ ಹಾಗೂ ಭರ್ಜರಿ ಸಿಕ್ಸರ್‌ಗಳ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ಹಲವು ಸ್ಟಾರ್ ಆಟಗಾರರು ರಂಜಿಸಿದ್ದಾರೆ. ಇದರ ಪೈಕಿ ಕೆಲವು ಬ್ಯಾಟ್ಸ್‌ಮನ್‌ಗಳು ದೊಡ್ಡ-ದೊಡ್ಡ ಸಿಕ್ಸರ್‌ಗಳ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ತಾ ಮುಂದು, ನೀ ಮುಂದು ಎಂಬಂತೆ ಬ್ಯಾಟ್ಸ್‌ಮನ್‌ಗಳು ಈ ಬಾರಿ ಟೂರ್ನಿಯಲ್ಲಿ ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2026ರ ಐಸಿಸಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 96 ರನ್‌ಗಳಿಂದ ಮಣಿಸಿ ಚಾಂಪಿಯನ್ ಆಗಿತ್ತು. ಈ ಪಂದ್ಯ ಏಕಪಕ್ಷೀಯವಾಗಿತ್ತು. ಭಾರತ ತಂಡ 255 ರನ್‌ಗಳನ್ನು ಬಾರಿಸಿತ್ತು. ಗುರಿ ಹಿಂಬಾಲಿಸಿದ ಕಿವೀಸ್ 159 ರನ್‌ಗಳಿಂದ ಆಲ್‌ಔಟ್ ಆಗಿತ್ತು. ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ 89 ರನ್‌ಗಳನ್ನು ಬಾರಿಸಿದ್ದರು. ಈ ಇನಿಂಗ್ಸ್‌ನಲ್ಲಿ ಅವರು ವಿಶೇಷವಾಗಿ 8 ಸಿಕ್ಸರ್‌ಗಳನ್ನು ಬಾರಿಸಿದ್ದರು.
ಇದೀಗ ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ್ದಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.
1.ಸಂಜು ಸ್ಯಾಮ್ಸನ್
2026ರ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಕೊನೆಯ ಪಂದ್ಯ ಹಾಗೂ ಸಮಿಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ಮಿಂಚಿದ್ದ ಸಂಜು ಸ್ಯಾಮ್ಸನ್ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಆಡಿದ್ದ 5 ಇನಿಂಗ್ಸ್‌ಗಳಿಂದ ಬರೋಬ್ಬರಿ 24 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.
2.ಫಿನ್ ಆಲೆನ್
ನ್ಯೂಜಿಲೆಂಡ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಫಿನ್ ಆಲೆನ್ ಅವರು ಕೂಡ ಈ ಟೂರ್ನಿಯಲ್ಲಿ ಶತಕವನ್ನು ಭಾರಿಸಿದ್ದರು. ಅವರು ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ದಾಖಲೆಯ ಶತಕವನ್ನು ಬಾರಿಸಿದ್ದರು. ಅಂದ ಹಾಗೆ ಈ ಟೂರ್ನಿಯಲ್ಲಿ ಆಡಿದ 9 ಇನಿಂಗ್ಸ್‌ಗಳಿಂದ 20 ಸಿಕ್ಸರ್‌ಗಳ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ.
BAN vs PAK: ಬಾಬರ್ ಆಝಮ್ ಕ್ರಿಕೆಟ್ ಭವಿಷ್ಯ ಅಂತ್ಯ? ಸ್ಪಷ್ಟನೆ ನೀಡಿದ ನಾಯಕ ಶಾಹೀನ್ ಅಫ್ರಿದಿ!
3.ಶಿಮ್ರಾನ್ ಹೆಟ್ಮಾಯೆರ್
ವೆಸ್ಟ್ ಇಂಡೀಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶಿಮ್ರಾನ್ ಹೆಟ್ಮಾಯೆರ್ ಕೂಡ ಈ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇವರು ಈ ಟೂರ್ನಿಯಲ್ಲಿ 20 ಸಿಕ್ಸರ್‌ಗಳ ಮೂಲಕ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಪ್ರತಿನಿಧಿಸುವ ವೆಸ್ಟ್ ಇಂಡೀಸ್ ತಂಡ, ಸೂಪರ್-8ರ ಕೊನೆಯ ಪಂದ್ಯದಲ್ಲಿ ಭಾರತದ ಎದುರು ಸೋಲುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾದರು.
4.ಸಾಹಿಬ್‌ಜಾದಾ ಫರ್ಹಾನ್
ಪಾಕಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಹಿಬ್‌ಜಾದಾ ಫರ್ಹಾನ್ ಅವರು ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್. ಆದರೂ ಇವರ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ. ಎಡಗೈ ಬ್ಯಾಟ್ಸ್‌ಮನ್ ಆರು ಇನಿಂಗ್ಸ್‌ಗಳಿಂದ ಎರಡು ಶತಕಗಳು ಸೇರಿದಂತೆ 383 ರನ್‌ಗಳನ್ನು ಬಾರಿಸಿದ್ದಾರೆ. ಇವರು ಕೂಡ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
T20I Rankings: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡ ವರುಣ್ ಚಕ್ರವರ್ತಿ!
5.ಇಶಾನ್ ಕಿಶನ್
ಐದನೇ ಸ್ಥಾನದಲ್ಲಿ ಭಾರತದ ಸ್ಫೋಟಕ ಎಡಗೈ ಬ್ಯಾಟರ್ ಇಶಾನ್ ಕಿಶನ್ ಇದ್ದಾರೆ. ಅವರು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸುಮಾರು ಎರಡು ವರ್ಷಗಳ ಕಾಲ ಭಾರತದ ಟಿ20ಐ ತಂಡದಿಂದ ಹೊರಗಿದ್ದ ಅವರು, ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಅವರು 193.29 ಸ್ಟ್ರೈಕ್‌ರೇಟ್‌ನೊಂದಿಗೆ ಒಟ್ಟು 317 ರನ್ ಗಳಿಸಿದರು. ಕೇವಲ ಒಂಬತ್ತು ಇನಿಂಗ್ಸ್‌ಗಳಲ್ಲಿ ಅವರು 18 ಸಿಕ್ಸರ್‌ಗಳನ್ನು ಸಿಡಿಸಿದರು. ಈ ಪಟ್ಟಿಯಲ್ಲಿ ಇವರು ಐದನೇ ಸ್ಥಾನದಲ್ಲಿದ್ದಾರೆ.