ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IND vs ENG: ಗಾಯಾಳು ನಿತೀಶ್‌ ಕುಮಾರ್‌ ರೆಡ್ಡಿ ಸ್ಥಾನಕ್ಕೆ ಭಾರತ ಒಡಿಐ ತಂಡ ಸೇರಿದ ಶಿವ ದುಬೇ!

ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಗಾಯಾಳು ನಿತೀಶ್‌ ಕುಮಾರ್‌ ರೆಡ್ಡಿ ಏಕದಿನ ತಂಡದಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಶಿವಂ ದುಬೇ ಅವರಿಗೆ ಸ್ಥಾನವನ್ನು ನೀಡಲಾಗಿದೆ.

IND vs ENG: ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದ ಶಿವಂ ದುಬೇ!

ಭಾರತ ಏಕದಿನ ತಂಡಕ್ಕೆ ಆಯ್ಕೆಯಾದ ಶಿವಂ ದುಬೇ. -

Profile
Ramesh Kote Jul 6, 2026 9:57 PM

ನವದೆಹಲಿ: ಇಂಗ್ಲೆಂಡ್‌ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯ (IND vs ENG) ಭಾರತ ತಂಡದಲ್ಲಿ ಒಂದು ಮಹತ್ತರ ಬದಲಾವಣೆಯನ್ನು ತರಲಾಗಿದೆ. ಗಾಯಾಳು ಆಲ್‌ರೌಂಡರ್‌ ನಿತೀಶ್‌ಕುಮಾರ್‌ ರೆಡ್ಡಿ (Nitish Kumar Reddy) ಏಕದಿನ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಆಲ್‌ರೌಂಡರ್‌ ಶಿವಂ ದುಬೇ (Shivam Dubey) ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಸದ್ಯ ಭಾರತ ತಂಡ, ಇಂಗ್ಲೆಂಡ್‌ ಎದುರು ಟಿ20ಐ ಸರಣಿಯನ್ನು ಆಡುತ್ತಿದ್ದು, ಇದಾದ ಬಳಿಕ ಏಕದಿನ ಸರಣಿಯನ್ನು ಆಡಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಸದ್ಯ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಕಾದಾಟ ನಡೆಸುತ್ತಿವೆ. ಎರಡು ಪಂದ್ಯಗಳ ಅಂತ್ಯಕ್ಕೆ ಭಾರತ ತಂಡ 0-1 ಹಿನ್ನಡೆಯನ್ನು ಅನುಭವಿಸಿದೆ. ಟಿ20ಐ ಸರಣಿಯ ಬಳಿಕ ಜುಲೈ 14 ರಂದು ಏಕದಿನ ಸರಣಿ ಆರಂಭವಾಗಲಿದೆ. ಮೊದಲನೇ ಪಂದ್ಯ ಬರ್ಮಿಂಗ್‌ಹ್ಯಾಮ್‌ ಎಜ್‌ಬಾಸ್ಟನ್‌ನಲ್ಲಿ ಮೊದಲನೇ ಪಂದ್ಯ ನಡೆಯಲಿದ್ದು, ಎರಡನೇ ಪಂದ್ಯ ಜುಲೈ 16 ರಂದು ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಇನ್ನು ಮೂರನೇ ಹಾಗೂ ಕೊನೆಯ ಪಂದ್ಯ ಜುಲೈ 19 ರಂದು ಲಂಡನ್‌ ಲಾರ್ಡ್ಸ್‌ ಅಂಗಣದಲ್ಲಿ ನಡೆಯಲಿದೆ.

IND vs ENG: ಮೂರನೇ ಟಿ20ಐ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್‌ XI ಪ್ರಕಟ!

ನಿತೀಶ್ ಕುಮಾರ್ ರೆಡ್ಡಿ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಗಾಯಕ್ಕೆ ಒಳಗಾಗಿದ್ದು, ಅದರ ಪರಿಣಾಮವಾಗಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯಿಂದ ಹೊರಗುಳಿದಿದ್ದರು. ಅವರ ಚೇತರಿಕೆಗೆ ಇನ್ನೂ ಹೆಚ್ಚಿನ ಸಮಯ ಬೇಕಾಗಿರುವುದರಿಂದ, ಇಂಗ್ಲೆಂಡ್ ಪ್ರವಾಸದ ಏಕದಿನ ಸರಣಿಗೂ ಅವರು ಲಭ್ಯರಾಗುವುದಿಲ್ಲ.

ಇದರೊಂದಿಗೆ ಭಾರತ ತನ್ನ ಮೊದಲ ಆಯ್ಕೆಯ ಇಬ್ಬರು ವೇಗದ ಬೌಲಿಂಗ್ ಮಾಡುವ ಬ್ಯಾಟಿಂಗ್ ಆಲ್‌ರೌಂಡರ್‌ಗಳನ್ನು ಕಳೆದುಕೊಂಡಂತಾಗಿದೆ. ಹಾರ್ದಿಕ್ ಪಾಂಡ್ಯ ಕೂಡ ಗಾಯದಿಂದ ಬಳಲುತ್ತಿದ್ದು, ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಆಡಿರಲಿಲ್ಲ.



ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಶಿವಂ ದುಬೆ ಅವರಿಗೆ ಮತ್ತೆ ಭಾರತ ಏಕದಿನ ತಂಡದಲ್ಲಿ ಅವಕಾಶ ದೊರೆತಿದೆ. ದುಬೆ ಕೊನೆಯದಾಗಿ 2024ರ ಆಗಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಪರ ಏಕದಿನ ಪಂದ್ಯವಾಡಿದ್ದರು. 32 ವರ್ಷದ ಆಲ್‌ರೌಂಡರ್ ಭಾರತದ ಟಿ20 ತಂಡದ ಪ್ರಮುಖ ಆಟಗಾರರಾಗಿದ್ದು, 2024 ಹಾಗೂ 2026ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಭಾರತ ಟಿ20 ತಂಡದಲ್ಲಿ ರಜತ್‌ ಪಾಟಿದಾರ್‌ಗೆ ಸ್ಥಾನ ನೀಡಿ ಎಂದ ಇರ್ಫಾನ್‌ ಪಠಾಣ್‌!

ದುಬೆ 2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದುವರೆಗೆ ಅವರು ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, 10.75ರ ಸರಾಸರಿಯಲ್ಲಿ 43 ರನ್ ಗಳಿಸಿದ್ದಾರೆ. ಜೊತೆಗೆ, ಬೌಲಿಂಗ್‌ನಲ್ಲಿ ಒಂದು ವಿಕೆಟ್ ಕೂಡ ಪಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಪ್ರಸಿಧ್‌ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್‌ನೂರ್ ಬ್ರಾರ್ ಹಾಗೂ ಶಿವಂ ದುಬೇ