Asia Cup 2025: ಭಾರತ ಟಿ20ಐ ತಂಡಕ್ಕೆ ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ಸಾಧ್ಯತೆ!
ದೇಶಿ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ತೋರಿದ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದ ಶ್ರೇಯಸ್ ಅಯ್ಯರ್ ಅವರನ್ನು ಮುಂಬರುವ ಏಷ್ಯಾ ಕಪ್ ಟೂರ್ನಿಯ ಭಾರತ ಟಿ20ಐ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಅತಿ ಶೀಘ್ರದಲ್ಲಿಯೇ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸುವ ಸಾಧ್ಯತೆ ಇದೆ.

ಏಷ್ಯಾ ಕಪ್ ಟೂರ್ನಿಯ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್?

ನವದೆಹಲಿ: ಬಿಸಿಸಿಐ ಗುತ್ತಿಗೆಯಿಂದ ಸ್ಥಾನ ಕಳೆದುಕೊಂಡ ಬಳಿಕ ಹಿರಿಯ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ದೇಶಿ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ತೋರಿದ್ದರು ಹಾಗೂ ಕಳೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ಗಮನಾರ್ಹ ಪ್ರದರ್ಶನವನ್ನು ತೋರಿದ್ದರು. ಇದೀಗ ಏಷ್ಯಾ ಕಪ್ (Asia Cup 2025) ಟೂರ್ನಿಯ ಭಾರತ ಟಿ20ಐ ತಂಡದಲ್ಲಿ ಸದ್ಥಾನ ಪಡೆಯುವ ಸಾಧ್ಯತೆ ಇದೆ. ಇವರು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೊನೆಯ ಬಾರಿ ಭಾರತ ತಂಡದಲ್ಲಿ ಆಡಿದ್ದ ಶ್ರೇಯಸ್ ಅಯ್ಯರ್, ನಂತರ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದರು. 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL 2025) ಅಯ್ಯರ್ ಉತ್ತಮ ಪ್ರದರ್ಶನವನ್ನು ತೋರಿದ್ದರು. ಇವರ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ತಂಡ ರನ್ನರ್ ಅಪ್ ಆಗಿತ್ತು. ಈಗಾಗಲೇ ಒಡಿಐ ತಂಡಕ್ಕೆ ಬಂದಿರುವ ಅವರು, ಟಿ20ಐ ಹಾಗೂ ಟೆಸ್ಟ್ ತಂಡಗಳಿಗೂ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ.
2025ರ ಏಷ್ಯಾ ಕಪ್ ಟೂರ್ನಿಯ ಭಾರತ ತಂಡದ ಆಯ್ಕೆಗೆ ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಪರಿಗಣಿಸುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರು ಈಗಾಗಲೇ ಏಕದಿನ ತಂಡದಲ್ಲಿ ಆಡುತ್ತಿರುವ ಶ್ರೇಯಸ್ ಅಯ್ಯರ್ ಟಿ20ಐ ತಂಡದಲ್ಲಿ ಆಡಲು ಎದುರು ನೋಡುತ್ತಿದ್ದಾರೆ. ಆಗಸ್ಟ್ ತಿಂಗಳಲ್ಲಿ ಏಷ್ಯಾ ಕಪ್ ಟೂರ್ನಿಯ ಭಾರತ ತಂಡವನ್ನು ಪ್ರಕಟಿಸಲಾಗುವುದು.
ಶುಭಮನ್ ಗಿಲ್ ಔಟ್! IND vs ENG ಸಂಯೋಜನೆಯ ಪ್ಲೇಯಿಂಗ್ XI ಆರಿಸಿದ ಸ್ಟುವರ್ಟ್ ಬ್ರಾಡ್
ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಸರಣಿಗಳಿಗೆ ಶ್ರೇಯಸ್ ಅಯ್ಯರ್?
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕರುಣ್ ನಾಯರ್ ಹಾಗೂ ಸಾಯಿ ಸುದರ್ಶನ್ ಅವರು ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಸರಣಿಗಳಿಗೆ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ನೀಡುವ ಸಾಧ್ಯತೆ ಇದೆ.
"ನಮಗೆ ಶ್ರೇಯಸ್ ಅಯ್ಯರ್ ಅವರ ಕ್ಲಾಸ್ ಮತ್ತು ಎಲ್ಲಾ ಸ್ವರೂಪಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಅನುಭವವನ್ನು ಹೊಂದಿದ್ದಾರೆ. ಶ್ರೇಯಸ್ ಅಯ್ಯರ್ ಅವರ ಅನುಭವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಸಮಯದಲ್ಲಿ ನಾವು ಇಂಗ್ಲೆಂಡ್‌ನಲ್ಲಿ ತಪ್ಪಿಸಿಕೊಂಡ ವಿಷಯವಾಗಿದೆ. ಅಯ್ಯರ್ ಸ್ಪಿನ್ ಬೌಲಿಂಗ್‌ನ ಅತ್ಯುತ್ತಮ ಆಟಗಾರ ಎಂದು ಆಯ್ಕೆದಾರರಿಗೆ ತಿಳಿದಿದೆ. ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಲಾ ಎರಡೆರಡು ಪಂದ್ಯಗಳ ಟೆಸ್ಟ್ ಸರಣಿಗಳು ನಡೆಯಲಿವೆ. ಈ ಸರಣಿಗೆ ಅಯ್ಯರ್ ಅವರನ್ನು ಪರಿಗಣಿಸಬಹದು," ಎಂದು ಹತ್ತಿರದ ಮೂಲಗಳು ತಿಳಿಸಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
IND vs ENG: ಶುಭಮನ್ ಗಿಲ್ ಇನ್ನೂ ಕಲಿಯಬೇಕೆಂದಿದ್ದ ಕಪಿಲ್ ದೇವ್‌ಗೆ ಯೋಗರಾಜ್ ಸಿಂಗ್ ತಿರುಗೇಟು!
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಭಾರತ ತಂಡದಲ್ಲಿ ಆಡಿದ್ದರು. ಬರೋಬ್ಬರಿ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತ್ತು. ಐದು ಪಂದ್ಯಗಳಿಂದ ಶ್ರೇಯಸ್ ಅಯ್ಯರ್ ಅವರು 243 ರನ್‌ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದರು.