MI vs GT: 500 ರನ್ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯಕುಮಾರ್ ಯಾದವ್!
Suryakumar Yadav Scored 500 Runs: ಗುಜರಾತ್ ಟೈಟನ್ಸ್ ವಿರುದ್ಧದ ಮಂಗಳವಾರದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟ್ ಮಾಡಿದ ಸೂರ್ಯಕುಮಾರ್ ಯಾದವ್ 35 ರನ್‌ಗಳನ್ನು ಗಳಿಸಿದರು. ಆ ಮೂಲಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 500 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ಮುಂಬೈ ಇಂಡಿಯನ್ಸ್ ಪರ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

2025ರ ಐಪಿಎಲ್ ಟೂರ್ನಿಯಲ್ಲಿ 500 ರನ್‌ಗಳನ್ನು ದಾಟಿದ ಸೂರ್ಯಕುಮಾರ್ ಯಾದವ್.

ಮುಂಬೈ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ (Mumbai Indains) ತಂಡದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ (Suryakumar Yadav) 500 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಮಂಗಳವಾರ ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ 24 ಎಸೆತಗಳಲ್ಲಿ 35 ರನ್ ಗಳಿಸಿ ಸೂರ್ಯ ಔಟ್ ಆದರು. ಆದರೂ ಪ್ರಸಕ್ತ ಆವೃತ್ತಿಯಲ್ಲಿ ಅವರು 500ರನ್ ಗಳನ್ನು ಕಲೆ ಹಾಕಿದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಟೂರ್ನಿಯಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.
ಮಂಗಳವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಹಾಗೂ ರಯಾನ್ ರಿಕೆಲ್ಟನ್ ಬಹುಬೇಗ ವಿಕೆಟ್ ಒಪ್ಪಿಸಿದರು. ಆ ಮೂಲಕ ಮುಂಬೈ ಕೇವಲ 26 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತು.
IPL 2025: ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಕಡಿಮೆ ಎಂದವರಿಗೆ ಎಬಿಡಿ ತಿರುಗೇಟು!
ಮೂರನೇ ವಿಕೆಟ್‌ಗೆ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ವಿಲ್ ಜ್ಯಾಕ್ಸ್ 71 ರನ್‌ಗಳನ್ನು ಕಲೆ ಹಾಕಿದರು. ವಿಲ್ ಜ್ಯಾಕ್ಸ್ 53 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 35 ರನ್‌ಗಳ ಕೊಡುಗೆಯನ್ನು ನೀಡಿದರು. ಅರ್ಧಶತಕದಂಚಿನಲ್ಲಿ ಆಡುತ್ತಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ಸಾಯಿ ಕಿಶೋರ್ ಔಟ್ ಮಾಡಿದರು.
ವಿಶೇಷ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
ಗುಜರಾತ್ ಟೈಟನ್ಸ್ ವಿರುದ್ದದ ಈ ಅಲ್ಪ ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ 2025ರ ಐಪಿಎಲ್ ಟೂರ್ನಿಯಲ್ಲಿ 500 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ವಿರಾಟ್ ಕೊಹ್ಲಿ ಹಾಗೂ ಸಾಯಿ ಸುದರ್ಶನ್ ಬಳಿಕ 500ರ ಗಡಿ ದಾಟಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು ಸೂರ್ಯಕುಮಾರ್ ಯಾದವ್. ಇಲ್ಲಿಯ ತನಕ ಆಡಿದ 12 ಇನಿಂಗ್ಸ್‌ಗಳಿಂದ ಸೂರ್ಯಕುಮಾರ್ 63.75ರ ಸರಾಸರಿ ಮತ್ತು 170.56ರ ಸ್ಟ್ರೈಕ್ ರೇಟ್‌ನಲ್ಲಿ 510 ರನ್‌ಗಳನ್ನು ಕಲೆ ಹಾಕಿದ್ದಾರೆ.
IPL 2025: ಭಾರತ, ಆರ್‌ಸಿಬಿ ನಾಯಕತ್ವವನ್ನು ತೊರೆಯಲು ಕಾರಣ ತಿಳಿಸಿದ ವಿರಾಟ್ ಕೊಹ್ಲಿ!
ಮುಂಬೈ ಇಂಡಿಯನ್ಸ್ ಪರ ಶ್ರೇಷ್ಠ ದಾಖಲೆ
ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ ಸೂರ್ಯಕುಮಾರ್ ಯಾದವ್ ಅವರು ಮೂರನೇ ಬಾರಿ 500ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಇದಕ್ಕೂ ಮುನ್ನ 2018 ಮತ್ತು 2023ರ ಟೂರ್ನಿಗಳಲ್ಲಿಯೂ ಸೂರ್ಯ 500ಕ್ಕೂ ಅಧಿಕ ರನ್‌ಗಳನ್ನು ಬಾರಿಸಿದ್ದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪರ ಮೂರು ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಕ್ವಿಂಟನ್ ಡಿ ಕಾಕ್ ಈ ಹಿಂದೆ ಮುಂಬೈ ಪರ ಎರಡು ಬಾರಿ 500ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದಾರೆ.
IPL 2025: ಮಾದಕದ್ರವ್ಯ ಸೇವನೆ ಶಿಕ್ಷೆ ಮುಗಿಸಿ ಐಪಿಎಲ್ ಆಡಲು ಸಜ್ಜಾದ ರಬಾಡ
ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಸೀಸನ್‌ನಲ್ಲಿ 500ಕ್ಕೂ ಅಧಿಕ ರನ್ ಗಳಿಸಿದವರು
ಸೂರ್ಯಕುಮಾರ್ ಯಾದವ್: 3 (2018, 2023, 2025)
ಕ್ವಿಂಟನ್ ಡಿ ಕಾಕ್:2 (2019, 2020)
ಸಚಿನ್ ತೆಂಡೂಲ್ಕರ್:2 (2010,2011)
ರೋಹಿತ್ ಶರ್ಮಾ: 1 (2013)
ಸನತ್ ಜಯಸೂರ್ಯ: 1(2008)
ಇಶಾನ್ ಕಿಶನ್: 1(2020)
ದಿನೇಶ್ ಕಾರ್ತಿಕ್: 1 (2013)
ಲೆಡ್ಲ್ ಸಿಮನ್ಸ್: 1 (2015)