ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಭಾರತ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುವುದು ಅನುಮಾನ! ಏಕೆ ಗೊತ್ತೆ?

India vs Bangladesh: ಭಾರತ ಹಾಗೂ ಬಾಂಗ್ಲಾದೇಶ ನಡುವಣ ರಾಜಕೀಯ ಕಾರಣಗಳು ಉಭಯ ತಂಡಗಳ ದ್ವಿಪಕ್ಷೀಯ ಸರಣಿಗಳ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದೆ. ಟೀಮ್‌ ಇಂಡಿಯಾ, ಬಾಂಗ್ಲಾದೇಶ ತಂಡಕ್ಕೆ ಪ್ರವಾಸ ಮಾಡಬಾರದು ಎಂದು ಭಾರತ ಸರ್ಕಾರ, ಬಿಸಿಸಿಐಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ಭಾರತ ತಂಡದ ಬಾಂಗ್ಲಾದೇಶ ಪ್ರವಾಸ ರದ್ದಾಗುವ ಸಾಧ್ಯತೆ!

ಭಾರತ ತಂಡದ ಬಾಂಗ್ಲಾದೇಶ ಪ್ರವಾಸ ಅನುಮಾನ.

Profile Ramesh Kote Jul 4, 2025 4:01 PM

ನವದೆಹಲಿ: ಭಾರತ ಹಾಗೂ ಬಾಂಗ್ಲಾದೇಶ ತಂಡಗಳ (IND vs BAN) ನಡುವಣ ಆರು ಪಂದ್ಯಗಳ ವೈಟ್‌ಬಾಲ್‌ ಪಂದ್ಯಗಳ ಸರಣಿ ರದ್ದಾಗುವ ಸಾಧ್ಯತೆ ಇದೆ. ಈ ಎರಡೂ ನೆರೆ ಹೊರೆಯ ರಾಷ್ಟ್ರಗಳ ನಡುವೆ ರಾಜಕೀಯ ಸಮಸ್ಯೆಗಳು ಎದುರಾಗಿವೆ. ಈ ಕಾರಣದಿಂದ ಟೀಮ್‌ ಇಂಡಿಯಾ (India), ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬಾರದೆಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (BCCI) ಸೂಚನೆ ನೀಡಿದೆ ಇಂಡಿಯಾ ಟುಡೇ ವರದಿ ಮಾಡಿದೆ. ಭಾರತ ಮತ್ತು ಬಾಂಗ್ಲಾದೇಶ ದೇಶಗಳು ಪ್ರಸ್ತುತ ವ್ಯಾಪಾರ ಸಂಬಂಧಿತ ಉದ್ವಿಗ್ನತೆಯನ್ನು ಎದುರಿಸುತ್ತಿವೆ. ಮೇ 17 ರಂದು ಭಾರತ ಸರ್ಕಾರ, ಬಾಂಗ್ಲಾದೇಶದಿಂದ ಸಿದ್ಧ ಉಡುಪುಗಳು ಮತ್ತು ಸಂಸ್ಕರಿಸಿದ ಆಹಾರ ಪದಾರ್ಥಗಳು ಸೇರಿದಂತೆ ಸರಕುಗಳ ಮೇಲೆ ಪ್ರಮುಖ ಆಮದು ಮಾರ್ಗ ನಿರ್ಬಂಧಗಳನ್ನು ಘೋಷಿಸಿತ್ತು.

ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯ ಪ್ರಕಾರ, ಈಶಾನ್ಯ ಮೂಲದ ಸಂಯೋಜಿತ ಚೆಕ್ ಪೋಸ್ಟ್‌ಗಳ (ICPs) ಮೂಲಕ ಯಾವುದೇ ಸಿದ್ಧ ಉಡುಪು ಉತ್ಪನ್ನಗಳನ್ನು ಭಾರತಕ್ಕೆ ಅನುಮತಿಸಲಾಗುವುದಿಲ್ಲ. ಇದಕ್ಕೂ ಮುನ್ನ ಏಪ್ರಿಲ್‌ನಲ್ಲಿ ಬಾಂಗ್ಲಾದೇಶ ವಿಧಿಸಿದ ಇದೇ ರೀತಿಯ ನಿರ್ಬಂಧಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ.

IND vs ENG: ಶುಭಮನ್‌ ಗಿಲ್ ಬಗ್ಗೆ ದೊಡ್ಡ ಭವಿಷ್ಯ ನುಡಿದ ಮೈಕಲ್ ವಾನ್!

"ಬಾಂಗ್ಲಾದೇಶದಲ್ಲಿ ರಾಜಕೀಯ ಪರಿಸ್ಥಿತಿ ಸ್ಥಿರವಾಗಿಲ್ಲ ಮತ್ತು ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಟೀಮ್‌ ಇಂಡಿಯಾದ ಈ ಪ್ರವಾಸವನ್ನು ಮುಂದುವರಿಸದಂತೆ ಬಿಸಿಸಿಐಗೆ ಸಲಹೆ ನೀಡಿದೆ," ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಮೂಲಗಳು ಮಾಧ್ಯಮಗಳಿಗೆ ವಿವರಿಸಿವೆ.

ಬಿಸಿಸಿಐ ಇನ್ನೂ ಅಧಿಕೃತ ಘೋಷಣೆ ಇನ್ನೂ ಇಲ್ಲ

ಮುಂದಿನ ಟಿ20 ವಿಶ್ವಕಪ್‌ ಟೂರ್ನಿಯ ನಿಮಿತ್ತ ಮೂರು ಪಂದ್ಯಗಳ ಟಿ20ಐ ಸರಣಿ ಹಾಗೂ ಅಷ್ಟೇ ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ ಪ್ರವಾಸದಲ್ಲಿ ನಿಗದಿಪಡಿಸಲಾಗಿತ್ತು. ಒಂದು ವೇಳೆ ಭಾರತ ತಂಡದ ಬಾಂಗ್ಲಾದೇಶ ಪ್ರವಾಸ ರದ್ದಾದರೆ, ಎರಡೂ ತಂಡಗಳಿಗೆ ಭಾರಿ ಹಿನ್ನಡೆಯಾಗಲಿದೆ. ಜನವರಿ-ಫೆಬ್ರವರಿಯಲ್ಲಿ ಇಂಗ್ಲೆಂಡ್‌ ವಿರುದ್ದ ಭಾರತ ತಂಡ ಕೊನೆಯ ಬಾರಿ ಟಿ20ಐ ಸರಣಿಯನ್ನು ಆಡಿತ್ತು. ಅಂದಿನಿಂದ ಇಲ್ಲಿಯವರೆಗೂ ಭಾರತ ವೈಟ್‌ ಬಾಲ್‌ ಸರಣಿಯನ್ನು ಇನ್ನೂ ಆಡಿಲ್ಲ.

IND vs ENG 2nd Test: ಗಿಲ್‌ ದಾಖಲೆಯ ದ್ವಿಶತಕ; ಭಾರತದ ಹಿಡಿತದಲ್ಲಿ ದ್ವಿತೀಯ ಟೆಸ್ಟ್‌

ಪ್ರಸ್ತುತ ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡ, ಇಂಗ್ಲೆಂಡ್‌ ಪ್ರವಾಸವನ್ನು ಹಮ್ಮಿಕೊಂಡಿದೆ. ಆಗಸ್ಟ್‌ ಮೊದಲ ವಾರದವರೆಗೂ ಉಭಯ ತಂಡಗಳ ನಡುವಣ ಟೆಸ್ಟ್‌ ಸರಣಿ ನಡೆಯಲಿದೆ. ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಇದೀಘ ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್‌ ಪಂದ್ಯವನ್ನು ಆಡುತ್ತಿದೆ. ಇಂಗ್ಲೆಂಡ್‌ ಪ್ರವಾಸದ ಬಳಿಕ ಭಾರತ ತಂಡ ಆಗಸ್ಟ್‌ 17 ರಂದು ಬಾಂಗ್ಲಾದೇಶ ಪ್ರವಾಸವನ್ನು ನಿಗದಿಪಡಿಸಲಾಗಿದೆ.

ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡ ಮೊದಲು ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ, ಇದಾದ ಬಳಿಕ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಆಡಲು ನಿಗದಿಪಡಿಸಲಾಗಿದೆ. ಇದಾದ ಬಳಿಕ ವೆಸ್ಟ್‌ ಇಂಡೀಸ್‌ ತಂಡಕ್ಕೆ ಭಾರತ ಟೆಸ್ಟ್‌ ಸರಣಿಗೆ ಆತಿಥ್ಯ ವಹಿಸಲಿದೆ. ಅಂದ ಹಾಗೆ ಭಾರತ ತಂಡದ ಬಾಂಗ್ಲಾದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.