AUS vs WI: ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ವಿಶೇಷ ದಾಖಲೆ ಬರೆದ ಟ್ರಾವಿಸ್ ಹೆಡ್!
Travis Head Creates history: ವೆಸ್ಟ್ ಇಂಡೀಸ್ ವಿರುದ್ದದ ಮೊದಲನೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ ಅರ್ಧಶತಕಗಳನ್ನು ಸಿಡಿಸುವ ಮೂಲಕ ಆಸ್ಟ್ರೇಲಿಯಾ ತಂಡದ 159 ರನ್ಗಳ ಗೆಲುವಿಗೆ ನೆರವು ನೀಡಿದ್ದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಆ ಮೂಲಕ ಆಸೀಸ್ ಬ್ಯಾಟರ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

ಟ್ರಾವಿಸ್ ಹೆಡ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

ಬಾರ್ಬಡೋಸ್: ಟ್ರಾವಿಸ್ ಹೆಡ್ ಅವರ ಎರಡು ಅರ್ಧಶತಕಗಳ ಬಲದಿಂದ ಆಸ್ಟ್ರೇಲಿಯಾ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ(AUS vs WI) ವೆಸ್ಟ್ ಇಂಡೀಸ್ ತಂಡದ ವಿರುದ್ಧ 159 ರನ್ಗಳ ಭರ್ಜರಿ ಗೆಲುವು ಪಡೆಯಿತು. ಈ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ ಅರ್ಧಶತಕಗಳನ್ನು ಬಾರಿಸಿದ ಟ್ರಾವಿಸ್ ಹೆಡ್ (Travis Head) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಆ ಮೂಲಕ ಟ್ರಾವಿಸ್ ಹೆಡ್ ಅವರು ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.
ಬಾರ್ಬಡೋಸ್: ಟ್ರಾವಿಸ್ ಹೆಡ್ (Travis Head) ಅವರ ಎರಡು ಅರ್ಧಶತಕಗಳ ಬಲದಿಂದ ಆಸ್ಟ್ರೇಲಿಯಾ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ(AUS vs WI) ವೆಸ್ಟ್ ಇಂಈಸ್ ವಿರುದ್ಧ 159 ರನ್ಗಳ ಭರ್ಜರಿ ಗೆಲುವು ಪಡೆಯಿತು. ಈ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ದೊಡ್ಡ ಮೊತ್ತದ ರನ್ಗಳನ್ನು ಕಲೆ ಹಾಕಲು ತೊಂದರೆ ಅನುಭವಿಸಿದ್ದರು. ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ (Australia) ತಂಡ ಪ್ರಥಮ ಇನಿಂಗ್ಸ್ನಲ್ಲಿ 180 ರನ್ಗಳಿಗೆ ಆಲ್ಔಟ್ ಆಗಿತ್ತು. ನಂತರ ಅತ್ಯುತ್ತಮ ಬೌಲ್ ಮಾಡಿದ್ದ ಆಸೀಸ್, ಎದುರಾಳಿ ತಂಡವನ್ನು ಪ್ರಥಮ ಇನಿಂಗ್ಸ್ನಲ್ಲಿ 190 ರನ್ಗಳಿಗೆ ಕಟ್ಟಿ ಹಾಕಿತ್ತು. ನಂತರ ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ 310 ರನ್ಗಳನ್ನು ಕಲೆ ಹಾಕಿತ್ತು. ನಂತರ ನಾಲ್ಕನೇ ಇನಿಂಗ್ಸ್ನಲ್ಲಿ ವಿಂಡೀಸ್ ತಂಡವನ್ನು ಆಸೀಸ್ ಬೌಲರ್ಗಳು 141 ರನ್ಗಳಿಗೆ ಆಲ್ಔಟ್ ಮಾಡಿದ್ದರು.
AUS vs WI: 3 ವಿಕೆಟ್ ಪಡೆದು ಎರಡು ಮಹತ್ವದ ದಾಖಲೆ ಬರೆದ ಪ್ಯಾಟ್ ಕಮಿನ್ಸ್!
ಈ ಟೆಸ್ಟ್ ಪಂದ್ಯದಲ್ಲಿ ಬೌಲರ್ಗಳು ಪ್ರಾಬಲ್ಯ ಸಾಧಿಸಿದ್ದರು. ಆದರೆ, ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ಪ್ರಾಬಲ್ಯ ಮೆರೆದಿದ್ದರು. ಇವರು ಎರಡೂ ಇನಿಂಗ್ಸ್ಗಳಲ್ಲಿ ಅರ್ಧಶತಕಗಳನ್ನು ಬಾರಿಸುವ ಮೂಲಕ ತೊಂದರೆ ಅನುಭವಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ ನೆರವು ನೀಡಿದ್ದರು. ಇವರು ಪ್ರಥಮ ಇನಿಂಗ್ಸ್ನಲ್ಲಿ 59 ರನ್ಗಳನ್ನು ಗಳಿಸಿದ್ದರೆ, ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ 61 ರನ್ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ವೇಳೆ ಹೆಡ್ 61 ರನ್ಗಳನ್ನು ಗಳಿಸಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡ ಕಮ್ಬ್ಯಾಕ್ ಮಾಡಿತ್ತು. ಟ್ರಾವಿಸ್ ಹೆಡ್ ಹಾಗೂ ಬೇ ವೆಬ್ಸ್ಟರ್ ಅವರು ಕೂಡ ಅರ್ಧಶತಕಗಳನ್ನು ಬಾರಿಸಿದ್ದರು.
ವಿಶೇಷ ದಾಖಲೆ ಬರೆದ ಟ್ರಾವಿಸ್ ಹೆಡ್
ಈ ಟೆಸ್ಟ್ ಪಂದ್ಯದಲ್ಲಿ ಎರಡು ಅರ್ಧಶತಕಗಳನ್ನು ಬಾರಿಸುವ ಮೂಲಕ ಟ್ರಾವಿಸ್ ಹೆಡ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದ ವಿಶ್ವದ ಮೊದಲ ಆಟಗಾರ ಎಂಬ ಅಪರೂಪದ ದಾಖಲೆಯನ್ನು ಟ್ರಾವಿಸ್ ಹೆಡ್ ಬರೆದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಟ್ರಾವಿಸ್ ಹೆಡ್ ಅವರು ಅತ್ಯಂತ ಸ್ಥಿರ ಬ್ಯಾಟಿಂಗ್ ಪ್ರದರ್ಶನವನ್ನು ತೋರುತ್ತಿದ್ದಾರೆ. ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್ ಹಾಗೂ ಉಸ್ಮಾನ್ ಖವಾಜ ಬಳಿಕ ಆಸ್ಟ್ರೇಲಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಸಾಲಿನಲ್ಲಿ ಟ್ರಾವಿಸ್ ಹೆಡ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಹೆಡ್ ಆಡಿದ 50 ಟೆಸ್ಟ್ ಪಂದ್ಯಗಳಿಂದ 8 ಶತಕಗಳು ಹಾಗೂ 15 ಅರ್ಧಶತಕಗಳೊಂದಿಗೆ 3199 ರನ್ಗಳನ್ನು ಗಳಿಸಿದ್ದಾರೆ.
WTC Points Table: ಆಸ್ಟ್ರೇಲಿಯಾಗೆ ಅಗ್ರ ಸ್ಥಾನ, 5ನೇ ಸ್ಥಾನಕ್ಕೆ ಕುಸಿದ ಭಾರತ ತಂಡ!
ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರು
ಟ್ರಾವಿಸ್ ಹೆಡ್: 10
ಬೆನ್ ಸ್ಟೋಕ್ಸ್: 5
ಜೋ ರೂಟ್: 5
ಹ್ಯಾರಿ ಬ್ರೂಕ್: 4
ನಾಲ್ಕನೇ ಬ್ಯಾಟ್ಸ್ಮನ್
ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ 400 ಬೌಂಡರಿಗಳನ್ನು ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಜೋ ರೂಟ್, ಮಾರ್ನಸ್ ಲಾಬುಶೇನ್ ಹಾಗೂ ಸ್ಟೀವನ್ ಸ್ಮಿತ್ ಅವರು ಇದಕ್ಕೂ ಮೊದಲು ಈ ಸಾಧನೆ ಮಾಡಿದ್ದರು. ಅತಿ ಹೆಚ್ಚು ಬೌಂಡರಿಗಳನ್ನು ಗಳಿಸಿದ ಬ್ಯಾಟ್ಸ್ಮನ್ಗಳ ಸಾಲಿನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರು 576 ಬೌಂಡರಿಗಳನ್ನು ಬಾರಿಸಿದ್ದರೆ, ಲಾಬುಶೇನ್ ಮತ್ತು ಸ್ಮಿತ್ ಕ್ರಮವಾಗಿ 476 ಮತ್ತು 443 ಬೌಂಡರಿಗಳನ್ನು ಬಾರಿಸಿದ್ದರು. ಟ್ರಾವಿಸ್ ಹೆಡ್ ಇದೀಗ 83 ಇನಿಂಗ್ಸ್ಗಳಿಂದ 401 ಬೌಂಡರಿಗಳನ್ನು ಗಳಿಸಿದ್ದಾರೆ.