ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಟ್ರಾವಿಸ್ ಹೆಡ್!
Travis Head breaks Virat Kohli's Record: ಇಂಗ್ಲೆಂಡ್ ವಿರುದ್ಧ ಐದನೇ ಹಾಗೂ ಆಷಸ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ ಬಳಿಕ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಆ ಮೂಲಕ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿದಿದ್ದಾರೆ.
ವಿರಾಟ್ ಕೊಹ್ಲಿಯ ದಾಖಲೆ ಮುರಿದ ಟ್ರಾವಿಸ್ ಹೆಡ್. -
ಸಿಡ್ನಿ: ಇಂಗ್ಲೆಂಡ್ ವಿರುದ್ಧ ಐದನೇ ಹಾಗೂ ಆಷಸ್ (Ashes) ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ ನೆರವು ನೀಡಿದ ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ (Travis Head) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸಿಡ್ನಿ ಪಂದ್ಯದ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಈ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ 166 ಎಸೆತಗಳಲ್ಲಿ 163 ರನ್‌ಗಳನ್ನು ಗಳಿಸಿದ್ದ ಟ್ರಾವಿಸ್ ಹೆಡ್, ದ್ವಿತೀಯ ಇನಿಂಗ್ಸ್‌ನಲ್ಲಿ 35 ಎಸೆತಗಳಲ್ಲಿ 29 ರನ್‌ಗಳನ್ನು ಬಾರಿಸಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ ನೆರವು ನೀಡಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ವಿರಾಟ್ ಕೊಹ್ಲಿಯ (Virat Kohli) ದಾಖಲೆಯನ್ನು ಟ್ರಾವಿಸ್ ಹೆಡ್ ಮುರಿದಿದ್ದಾರೆ.
ಟ್ರಾವಿಸ್ ಹೆಡ್ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 11 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆಯುವಂತಾಯಿತು. ಆ ಮೂಲಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯ ಪಂದ್ಯ ಶ್ರೇಷ್ಠ ಪ್ರಶಸ್ತಿಗಳ ದಾಖಲೆಯನ್ನು ಹೆಡ್ ಮುರಿದಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅಂದ ಹಾಗೆ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ದೀರ್ಘಾವಧಿ ಸ್ವರೂಪಕ್ಕೆ ವಿದಾಯ ಹೇಳಿದ್ದರು.
ಆಷಸ್ ಟೆಸ್ಟ್ ಸರಣಿಯಲ್ಲಿ 500 ರನ್ ಕಲೆ ಹಾಕಿ ಯಶಸ್ವಿ ಜೈಸ್ವಾಲ್ ದಾಖಲೆ ಮುರಿದ ಟ್ರಾವಿಸ್ ಹೆಡ್!
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ಆಲ್‌ರೌಂಡರ್ ಜಾಕ್ ಕಾಲಿಸ್ ಅಗ್ರ ಸ್ಥಾನದಲ್ಲಿದ್ದಾರೆ. ಇವರು ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 23 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಕಾಲಿಸ್ ಆಡಿದ 166 ಟೆಸ್ಟ್ ಪಂದ್ಯಗಳಲ್ಲಿ 292 ವಿಕೆಟ್‌ಗಳು ಹಾಗೂ 13289 ರನ್‌ಗಳನ್ನು ಬಾರಿಸಿದ್ದಾರೆ. 20ಕ್ಕೂ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಜಾಕ್ ಕಾಲಿಸ್ ಹೆಸರಿನಲ್ಲಿದೆ.
Congratulations to our Australian Men's Cricket Team on securing the NRMA Insurance Ashes series 4-1 🇦🇺#Ashes pic.twitter.com/0VWis6gA5P
— Cricket Australia (@CricketAus) January 8, 2026
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರು
ಜಾಕ್ ಕಾಲಿಸ್: 23
ಮುತ್ತಯ್ಯ ಮುರಳಿಧರನ್: 19
ವಸೀಮ್ ಅಕ್ರಮ್: 17
ಶೇನ್ ವಾರ್ನ್: 17
ಕುಮಾರ ಸಂಗಕ್ಕಾರ: 16
ರಿಕಿ ಪಾಂಟಿಂಗ್: 16
ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅವರು ಆಡಿದ 65 ಟೆಸ್ಟ್ ಪಂದ್ಯಗಳಿಂದ 12 ಶತಕಗಳು ಹಾಗೂ 20 ಅರ್ಧಶತಕಗಳ ಮೂಲಕ 4592 ರನ್‌ಗಳನ್ನು ಬಾರಿಸಿದ್ದಾರೆ. 2018ರಲ್ಲಿ ಇವರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇವರು 90ಕ್ಕೂ ಅಧಿಕ ಟೆಸ್ಟ್ ಪಂದ್ಯಗಳನ್ನು ಆಡಲು ಎದುರು ನೋಡುತ್ತಿದ್ದಾರೆ.