Vijay Hazare Trophy: ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ, ರಿಷಭ್ ಪಂತ್!
ಆಂಧ್ರ ವಿರುದ್ಧದ 2025-26ರ ಸಾಲಿನ ವಿಜಯ್ ಹಝಾರೆ ಟ್ರೋಫಿ ಟೂರ್ನಿಯ ತನ್ನ ಆರಂಭಿಕ ಪಂದ್ಯದ ನಿಮಿತ್ತ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಡಿಸೆಂಬರ್ 24 ರಂದು ದೆಹಲಿ ಹಾಗೂ ಆಂಧ್ರ ತಂಡಗಳು ತಮ್ಮ-ತಮ್ಮ ಮೊದಲನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ.
ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ, ರಿಷಭ್ ಪಂತ್. -
ಬೆಂಗಳೂರು: ಬಹುನಿರೀಕ್ಷಿತ 2025-26ರ ವಿಜಯ್ ಹಝಾರೆ ಟ್ರೋಫಿ (Vijay Hazare Trophy 2025-26) ಟೂರ್ನಿಯ ನಿಮಿತ್ತ ಭಾರತ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ (Virat Kohli) ಹಾಗೂ ರಿಷಭ್ ಪಂತ್ (Rishabh Pant) ರಾಜಧಾನಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಅವರು ಡಿಸೆಂಬರ್24 ರಂದು ಆಂಧ್ರ ವಿರುದ್ಧ ದೆಹಲಿ ಪರ ಆಡಲಿದ್ದಾರೆ. ಟೀಮ್ ಇಂಡಿಯಾ ಸ್ಟಾರ್ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ತರಬೇತಿ ಸಮಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಸಂಭಾಷಣೆ ನಡೆಸುತ್ತಿರುವ ಫೋಟೋ ಹಾಗೂ ವಿರಾಟ್ ಕೊಹ್ಲಿ ಹಾಗೂ ಇಶಾಂತ್ ಶರ್ಮಾ ಸಂಭಾಷಣೆ ಮಾಡುತ್ತಿರುವ ಫೋಟೋಗಳನ್ನು ಪಿಟಿಐ ಸುದ್ದಿ ಸಂಸ್ಥೆ ಹಂಚಿಕೊಂಡಿದೆ. 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ದೇಶಿ ಕ್ರಿಕೆಟ್‌ನ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲಿದ್ದಾರೆ. ವಿರಾಟ್ ಕೊಹ್ಲಿ ಆಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಆಂಧ್ರ ನಡುವಣ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟೆಸ್ಟ್ ಹಾಗೂ ಟಿ20ಐ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಚಿಸಿರುವ ಹಿನ್ನೆಲೆಯಲ್ಲಿ ಕೊಹ್ಲಿ ಇದೀಗ 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದಾರೆ.
Virat Kohli: ವಿರಾಟ್ ಕೊಹ್ಲಿ ಭಾಗವಹಿಸಬೇಕಿದ್ದ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಇಲ್ಲ, ಮತ್ತೆಲ್ಲಿ?
ಅಂದ ಹಾಗೆ ದೆಹಲಿ ಹಾಗೂ ಆಂಧ್ರ ಪ್ರದೇಶ ನಡುವಣ ಪಂದ್ಯ ಬೆಂಗಳೂರಿನ ಹೃದಯ ಭಾಗದಲ್ಲಿರುವ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ, ಭದ್ರತೆಯ ಕಾರಣ ಈ ಪಂದ್ಯದ ಸ್ಥಳವನ್ನು ಬೆಂಗಳೂರಿನ ಹೊರವಲಯದಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆಂಟ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಈ ವರ್ಷದ ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚೊಚ್ಚಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ನಂತರ ಸರ್ಕಾರ ನೇಮಿಸಿದ ಸಮಿತಿಯು ಈ ನಿರ್ಧಾರವನ್ನು ಪರಿಶೀಲಿಸಿತು. ಇದರ ಪರಿಣಾಮವಾಗಿ, ಗಮನವು ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಳಕ್ಕೆ ಸ್ಥಳಾಂತರಗೊಳ್ಳುತ್ತದೆ, ಇದು ಆರಂಭಿಕ ಹಂತದಲ್ಲಿ ಹಲವು ಪಂದ್ಯಗಳನ್ನು ಆಯೋಜಿಸಲಿದೆ.
Virat Kohli and Rishabh Pant in the practice session. pic.twitter.com/DUdLeJsX5X
— Mufaddal Vohra (@mufaddal_vohra) December 23, 2025
ಕೊಹ್ಲಿ ಮತ್ತು ಪಂತ್ ಹೊರತುಪಡಿಸಿ, ವಿಜಯ್ ಹಝಾರೆ ಟ್ರೋಫಿಯಲ್ಲಿ ಭಾರತದ ಇತರ ಆಟಗಾರರು ಭಾಗವಹಿಸಲಿದ್ದು, ಅಂತಾರಾಷ್ಟ್ರೀಯ ಅನುಭವ ಮತ್ತು ಉದಯೋನ್ಮುಖ ಪ್ರತಿಭೆಗಳ ಅಪರೂಪದ ಮಿಶ್ರಣವನ್ನು ನೀಡಲಿದ್ದಾರೆ. ದೆಹಲಿಗೆ, ಆಂಧ್ರ ವಿರುದ್ಧದ ಆರಂಭಿಕ ಪಂದ್ಯವು ಉತ್ತಮವಾಗಿ ಆರಂಭಿಸಲು ಅವಕಾಶವನ್ನು ಒದಗಿಸುತ್ತದೆ, ಆದರೆ ಅಭಿಮಾನಿಗಳು ಮತ್ತು ಆಯ್ಕೆದಾರರಿಗೆ, ಸ್ಪರ್ಧಾತ್ಮಕ ಪರಿಸ್ಥಿತಿಗಳಲ್ಲಿ ಫಾರ್ಮ್ ಮತ್ತು ಫಿಟ್ನೆಸ್ ಅನ್ನು ನಿರ್ಣಯಿಸಲು ಈ ಟೂರ್ನಿಯು ಅವಕಾಶವನ್ನು ಒದಗಿಸುತ್ತದೆ.
ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಅಡಲಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ!
ಈ ಪಂದ್ಯಗಳು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಎಲ್ಲರ ಚಿತ್ತ ದೆಹಲಿಯ ಮೊದಲ ಪಂದ್ಯದ ಮೇಲೆ ಇದೆ, ಜೊತೆಗೆ ಭಾರತೀಯ ಕ್ರಿಕೆಟ್‌ನ ಕೆಲವು ಗುರುತಿಸಬಹುದಾದ ಮುಖಗಳ ಉಪಸ್ಥಿತಿಯೂ ಇರುತ್ತದೆ.
ದೆಹಲಿ ಏಕದಿನ ತಂಡ: ರಿಷಭ್ ಪಂತ್, ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ನವದೀಪ್ ಸೈನಿ, ಆಯುಷ್ ಬದೋನಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ದಹಿಯಾ, ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ರೋಹನ್ ಕನ್ಸೆದ್, ರೋಹನ್ ಕನ್ಸೆದ್, ದಿವಿಬ್ ಕನ್ಸೆದ್, ದಿವಿಜ್ ಕನ್ಸೆದ್, ಅನುಜ್ ರಾವತ್ (ಸ್ಟ್ಯಾಂಡ್-ಬೈ)