IND vs ENG: ವಿರಾಟ್ ಕೊಹ್ಲಿ ಇನ್; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ!
India's ODI Squad: ಇಂಗ್ಲೆಂಡ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಗಾಯದಿಂದ ಗುಣಮುಖರಾಗಿರುವ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಆದರೆ, ಅವರು ಬಿಸಿಸಿಐ ಸಂಟರ್ ಅಫ್ ಎಕ್ಸ್‌ಲೆನ್ಸ್‌ನಲ್ಲಿ ಫಿಟ್‌ನೆಸ್ ಟೆಸ್ಟ್ ಪಾಸ್ ಮಾಡಬೇಕಾದ ಅಗತ್ಯವಿದೆ.
ಇಂಗ್ಲೆಂಡ್ ವಿರುದ್ಧಧ ಏಕದಿನ ಸರಣಿಗೆ ಭಾರತ ತಂಡ ಪ್ರಕಟ. -
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ (IND vs ENG) ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು (India's ODI Sqaud) ಪ್ರಕಟಿಸಿದೆ. ಗಾಯದಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ (Virat Kohli) ಇದೀಗ ಇಂಗ್ಲೆಂಡ್ ಪ್ರವಾಸದ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ, ಅವರು ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಬೆಂಗಳೂರಿನಲ್ಲಿನ ಬಿಸಿಸಿಐ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ನಲ್ಲಿ ಫಿಟ್‌ನೆಸ್ ಟೆಸ್ಟ್ ಪಾಸ್ ಮಾಡಬೇಕಾದ ಅಗತ್ಯವಿದೆ. ಅಂದ ಹಾಗೆ ಭಾರತ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ ಜುಲೈ 15 ರಿಂದ 19ರವರೆಗೆ ನಡೆಲಿದೆ.
ಅಂದಿನಂತೆ ಈ ಸರಣಿಯಲ್ಲಿ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಆಫ್ಘನ್ ಎದುರಿನ ಸರಣಿಯಲ್ಲಿ ವಿಶ್ರಾಂತಿ ಪಡೆದಿದ್ದ ಜಸ್‌ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಒಡಿಐ ತಂಡಕ್ಕೆ ಮರಳಿದ್ದಾರೆ. ನಾಯಕ ಶುಭಮನ್ ಗಿಲ್‌ಗೆ ಉಪ ನಾಯಕನಾಗಿ ಶ್ರೇಯಸ್ ಅಯ್ಯರ್ ಸಾಥ್ ನೀಡಲಿದ್ದಾರೆ.
ಲಿಸ್ಟ್ 'ಎ' ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯ ಅರ್ಧಶತಕ ಸಿಡಿಸಿದ ಸೂರ್ಯವಂಶಿ
ಯಶಸ್ವಿ ಜೈಸ್ವಾಲ್, ಹಾರ್ದಿಕ್ ಪಾಂಡ್ಯ ಔಟ್
ವಿರಾಟ್ ಕೊಹ್ಲಿ ಅವರ ಸ್ಥಾನದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಆಡಿದ್ದ ಯಶಸ್ವಿ ಜೈಸ್ವಾಲ್ ಅವರನ್ನು ಕೈ ಬಿಡಲಾಗಿದೆ. ಆಫ್ಘನ್ ಎದುರು ಮೂರನೇ ಏಕದಿನ ಪಂದ್ಯದಲ್ಲಿ ಜೈಸ್ವಾಲ್ ಶತಕ ಸಿಡಿಸಿದ್ದರೂ ಅವರು, ವಿರಾಟ್ ಕೊಹ್ಲಿಗೆ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಆದರೆ, ಎಡಗೈ ಬ್ಯಾಟ್ಸ್‌ಮನ್ ಒಡಿಐ ತಂಡದ ರೇಸ್‌ನಲ್ಲಿದ್ದು, ತಮ್ಮ ಸ್ಥಾನಕ್ಕಾಗಿ ಕಾಯಬೇಕಾಗುತ್ತದೆ.
🚨 News 🚨
— BCCI (@BCCI) June 21, 2026
India’s ODI squad for the England tour announced.
𝗡𝗢𝗧𝗘: Varun Chakaravarthy has been ruled out of the Ireland T20I Series as he continues his rehab at the BCCI COE.
More Details ▶️ https://t.co/wOdXTQqJto #TeamIndia | #ENGvIND pic.twitter.com/t0GypgM4kp
ಇನ್ನು ಹಾರ್ದಿಕ್ ಪಾಂಡ್ಯ ಅವರನ್ನು ಕೂಡ ಒಡಿಐ ತಂಡದಲ್ಲಿ ಸ್ಥಾನವನ್ನು ನೀಡಲಾಗಿಲ್ಲ. ಅವರಿನ್ನೂ ಗಾಯದಿಂದ ಗುಣಮುಖರಾಗುತ್ತಿದ್ದಾರೆ. 2026ರ ಐಪಿಎಲ್ ಟೂರ್ನಿಯಲ್ಲಿಯೂ ಹಾರ್ದಿಕ್ ಫಿಟ್‌ನೆಸ್ ಸಮಸ್ಯೆಯನ್ನು ಎದುರಿಸಿದ್ದರು. ಇದೀಗ ಅವರು ಬಿಸಿಸಿಐ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ನಿತೀಶ್ ಕುಮಾರ್ ರೆಡ್ಡಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿನ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದ ಇಶಾನ್ ಕಿಶನ್ ಅವರು ಎರಡನೇ ವಿಕೆಟ್ ಕೀಪರ್ ಆಗಿ ಇಂಗ್ಲೆಂಡ್ ಪ್ರವಾಸದ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹಾಗಾಗಿ ರಿಷಭ್ ಪಂತ ಅವರನ್ನು ತಂಡಕ್ಕೆ ಪರಿಗಣಿಸಿಲ್ಲ. ಇನ್ನು ಮೊದಲನೇ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಅವರನ್ನು ಮುಂದುವರಿಸಲಾಗಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಭಾರತ ತಂಡ: ಶುಭಮನ್ ಗಿಲ್( ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ಫಿಟೆನೆಸ್ ಟೆಸ್ಟ್ ಪಾಸ್ ಮಾಡಬೇಕಾದ ಅಗತ್ಯ), ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಪ್ರಸಿಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್