ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Women's World Cup: 245 ರನ್‌ ಚೇಸ್‌ ಮಾಡಿ ವಿಶೇಷ ದಾಖಲೆ ಬರೆದ ಆಸ್ಟ್ರೇಲಿಯಾ!

ಆಸ್ಟ್ರೇಲಿಯಾ ಮಹಿಳಾ ತಂಡ ಇಂಗ್ಲೆಂಡ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು.ಆ ಮೂಲಕ ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸೀಸ್‌ ಐದನೇ ಗೆಲುವು ದಾಖಲಿಸಿತು. 245 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 40.3 ಓವರ್‌ಗಳಲ್ಲಿ ಗೆದ್ದು ಬೀಗಿತು. ಈ ಗೆಲುವಿನ ಮೂಲಕ ಆಸೀಸ್‌ ವಿಶೇಷ ಸಾಧನೆಗೆ ಭಾಜನವಾಗಿದೆ.

ಇಂಗ್ಲೆಂಡ್‌ ವಿರುದ್ದ ಗೆದ್ದು ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ ವನಿತೆಯರು!

ಇಂಗ್ಲೆಂಡ್‌ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ. -

Profile Ramesh Kote Oct 23, 2025 12:05 AM

ನವದೆಹಲಿ: ಮಹಿಳಾ ಏಕದಿನ ವಿಶ್ವಕಪ್‌ (Women's World Cup 2025) ಟೂರ್ನಿಯಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ (Australia) ತನ್ನ ಗೆಲುವಿನ ಲಯವನ್ನು ಮುಂದುವರಿಸಿದೆ. ಈ ತಂಡ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ. ಬುಧವಾರ ನಡೆದಿದ್ದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್ England) ಮಹಿಳಾ ತಂಡವನ್ನು ಮಣಿಸಿದೆ. 2025ರ ವಿಶ್ವಕಪ್‌ ಟೂರ್ನಿಯಲ್ಲಿ ಇದು ಆಸೀಸ್‌ಗೆ ಐದನೇ ಗೆಲುವು. 6 ವಿಕೆಟ್‌ಗಳ ಗೆಲುವಿನ ಮೂಲಕ ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ ವನಿತೆಯರು ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ, ಇಂಗ್ಲೆಂಡ್ ಆಸ್ಟ್ರೇಲಿಯಾಕ್ಕೆ ಗೆಲ್ಲಲು 245 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಆಸ್ಟ್ರೇಲಿಯಾ ಈ ಗುರಿಯನ್ನು ಕೇವಲ 40.3 ಓವರ್‌ಗಳಲ್ಲಿ ಬೆನ್ನಟ್ಟಿತು. ಇದು ವಿಶ್ವಕಪ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಯಶಸ್ವಿಯಾಗಿ ಚೇಸ್‌ ಮಾಡಿದ ಅತ್ಯಧಿಕ ಗುರಿಯಾಗಿದೆ. 2013 ರಲ್ಲಿ ಬ್ರಬೋರ್ನ್‌ನಲ್ಲಿ ಶ್ರೀಲಂಕಾ ಚೇಸ್‌ ಮಾಡಿದ್ದ 239 ರನ್‌ಗಳು ಹಿಂದಿನ ಅತ್ಯಧಿಕ ಗುರಿಯಾಗಿತ್ತು.

ಆಸ್ಟ್ರೇಲಿಯಾ ಮಹಿಳಾ ತಂಡ ಮತ್ತು ಇಂಗ್ಲೆಂಡ್ ಮಹಿಳಾ ತಂಡದ ನಡುವೆ ನಡೆದ ಪಂದ್ಯದಲ್ಲಿ, ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲ್ ಮಾಡಲು ನಿರ್ಧರಿಸಿತು.‌ ಹಾಗಾಗಿ ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಇಂಗ್ಲೆಂಡ್ ಬ್ಯಾಟಿಂಗ್‌ಗೆ ಇಳಿದು ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 244 ರನ್ ಗಳಿಸಿತು. ನಂತರ ಆಸ್ಟ್ರೇಲಿಯಾ ರನ್ ಬೆನ್ನಟ್ಟಲು ಮುಂದಾಯಿತು. ಆಸೀಸ್‌ ತಂಡವು 64 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಕಳಪೆ ಆರಂಭವನ್ನು ಪಡೆಯಿತು, ಆದರೆ ನಂತರ ಗಾರ್ಡ್ನರ್ ಮತ್ತು ಸದರ್ಲ್ಯಾಂಡ್ 180 ರನ್‌ಗಳ ಅಜೇಯ ಪಾಲುದಾರಿಕೆಯನ್ನು ನೀಡಿ 40.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದರು.

IND vs AUS 2nd ODI: ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಲು ಭಾರತ ಸಜ್ಜು!

ಗಾರ್ಡ್ನರ್ ಮತ್ತು ಸದರ್ಲ್ಯಾಂಡ್ ನಡುವಿನ ಅಜೇಯ 180 ರನ್‌ಗಳ ಪಾಲುದಾರಿಕೆಯು ಒಡಿಐಗಳಲ್ಲಿ ಐದನೇ ವಿಕೆಟ್ ಅಥವಾ ಅದಕ್ಕಿಂತ ಕಡಿಮೆ ವಿಕೆಟ್‌ಗೆ ದಾಖಲಿಸಿದ ಎರಡನೇ ಅತ್ಯಧಿಕ ಪಾಲುದಾರಿಕೆಯಾಗಿದೆ. 2000 ರ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್‌ನ ಜೇನ್ ಸ್ಮಿಟ್ ಮತ್ತು ಕ್ಲೇರ್ ಟೇಲರ್ ನಡುವಿನ ಐದನೇ ವಿಕೆಟ್‌ಗೆ ಅಜೇಯ 188 ರನ್‌ಗಳ ಪಾಲುದಾರಿಕೆ ಮೂಡಿ ಬಂದಿತ್ತು. ಈ ಪಂದ್ಯದಲ್ಲಿ ಈ ಇಬ್ಬರು ಬ್ಯಾಟ್ಸ್‌ವುಮನ್‌ಗಳು ಬಲವಾದ ದಾಖಲೆಯನ್ನು ಸ್ಥಾಪಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.



ಸೆಮಿಫೈನಲ್‌ ರೇಸ್‌ನಲ್ಲಿ ಭಾರತ

ಮೂರು ತಂಡಗಳು ಈಗಾಗಲೇ 2025ರ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. ಈ ತಂಡಗಳಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಸೇರಿವೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿವೆ. ಏಕೈಕ ಸೆಮಿಫೈನಲ್ ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಭಾರತ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಇದೀಗ ಸೆಮಿಫೈನಲ್‌ ರೇಸ್‌ನಲ್ಲಿವೆ. ಇದರಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಸೆಮಿಫೈನಲ್‌ ರೇಸ್‌ನಲ್ಲಿ ಒಂದು ಹೆಜ್ಜೆ ಮುಂದಿದೆ. ಕಿವೀಸ್‌ ಹಾಗೂ ಶ್ರೀಲಂಕಾ ಕೇವಲ ಒಂದೊಂದು ಪಂದ್ಯವನ್ನು ಗೆದ್ದಿವೆ. ಈಗಾಗಲೇ ಆರು ಪಂದ್ಯಗಳನ್ನು ಸೋತಿರುವ ಲಂಕಾ ಬಹುತೇಕ ಟೂರ್ನಿಯಿಂದ ಹೊರ ಬಿದ್ದಿದೆ.