IND vs ENG: ದ್ರಾವಿಡ್, ಸೆಹ್ವಾಗ್ ದಾಖಲೆ ಮುರಿಯುವ ಸನಿಹದಲ್ಲಿ ಯಶಸ್ವಿ ಜೈಸ್ವಾಲ್!
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಭಾರತ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಬಳಿಕ ಭಾರತೀಯ ಟೆಸ್ಟ್ ಕ್ರಿಕೆಟ್ ಎಲ್ಲರ ಗಮನ ಸೆಳೆಯುತ್ತಿದೆ. ಇದರ ನಡುವೆ ಭಾರತ ತಂಡದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 2000 ರನ್ ಪೂರೈಸಿ ನೂತನ ಮೈಲುಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ.

ವಿಶೇಷ ದಾಖಲೆಯ ಸನಿಹದಲ್ಲಿ ಯಶಸ್ವಿ ಜೈಸ್ವಾಲ್.

ನವದೆಹಲಿ: ಭಾರತ ತಂಡದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ (Yashaswi Jaisval) 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿತ್ತಿದ್ದಾರೆ. ಇದೇ ಲಯವನ್ನು ಇಂಗ್ಲೆಂಡ್ ವಿರುದ್ದ ಮುಂಬರುವ ಟೆಸ್ಟ್ ಸರಣಿಯಲ್ಲಿಯೂ (IND vs ENG) ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಇಂಗ್ಲೆಂಡ್ ವಿರುದ್ದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ವಿಶೇಷ ದಾಖಲೆಯನ್ನು ಬರೆಯಲು ಎದುರು ನೋಡುತ್ತಿದ್ದಾರೆ. 2024ರ ವರ್ಷದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಜೈಸ್ವಾಲ್ ಇದೀಗ ಅದೇ ಲಯವನ್ನು ಪ್ರಸಕ್ತ ವರ್ಷದಲ್ಲಿ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಜೂನ್ 20 ರಂದು ಇಂಗ್ಲೆಂಡ್ ವಿರುದ್ದ ಭಾರತ ತಂಡ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.
2023ರ ಜುಲೈನಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಯಶಸ್ವಿ ಜೈಸ್ವಾಲ್ ತಮ್ಮ ಟೆಸ್ಟ್ ಕ್ರಿಕೆಟ್ ಕರಿಯರ್‌ನ ಮೊದಲನೇ ಪಂದ್ಯದಲ್ಲಿ 171 ರನ್ ಸಿಡಿಸುವ ಮೂಲಕ ಭರ್ಜರಿ ಆರಂಭವನ್ನು ಪಡೆದಿದ್ದರು. ಆ ಮೂಲಕ ಟೆಸ್ಟ್ ಕ್ರಿಕೆಟ್‌ನ ಪದಾರ್ಪಣೆ ಪಂದ್ಯದಲ್ಲೇ ಶತಕ ಬಾರಿಸಿದ ಭಾರತದ 17ನೇ ಅಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಅವರು ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಮತ್ತೊಂದು ದಾಖಲೆಯನ್ನು ಬರೆಯಲು ಸಜ್ಜಾಗುತ್ತಿದ್ದಾರೆ. ವೀರೆಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್‌ರವರ ದಾಖಲೆ ಹಿಂದಿಕ್ಕುವ ಸನಿಹದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರಿಯಲು ಬಯಸಿದ್ದರು, ಆದರೆ…!: ಮೊಹಕೈಫ್ ಕೈಫ್
ಜೂನ್ 20 ರಂದು ಭಾರತ ತಂಡ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಆರ್ ಅಶ್ವಿನ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ವಿರುದ್ದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆರಂಭಿಸಲಿದೆ. ಈ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ನಾಯಕನನ್ನು ಆಯ್ಕೆ ಮಾಡುವ ಪ್ರಯತ್ನದಲ್ಲಿದೆ. ಇದರ ನಡುವೆ ದೀರ್ಘಾವಧಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶುಭ್‌ಮನ್ ಗಿಲ್‌ಗೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ.
ಜೈಸ್ವಾಲ್ ರೆಡ್ ಬಾಲ್ ಕ್ರಿಕೆಟ್ ಮಾದರಿಯಲ್ಲಿ 19 ಪಂದ್ಯಗಳನ್ನಾಡಿ 1798 ರನ್‌ಗಳನ್ನು ಕಲೆಹಾಕಿದ್ದು, 2000 ರನ್ ದಡ ಸೇರಲು ಕೇವಲ 202 ಮಾತ್ರ ಬಾಕಿ ಉಳಿದಿವೆ. ಇನ್ನೂ ಭಾರತೀಯ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ತಲಾ 40 ಇನಿಂಗ್ಸ್ ಆಡುವ ಮೂಲಕ ಅತೀ ವೇಗವಾಗಿ 2000 ರನ್ ಕಲೆಹಾಕಿದ ದಾಖಲೆ ವೀರೆಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಇದುವರೆಗೂ 36 ಇನಿಂಗ್ಸ್‌ಗಳನ್ನು ಆಡಿರುವ ಜೈಸ್ವಾಲ್, ಇವರಿಬ್ಬರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.
ʻಶ್ರೇಷ್ಠ ಬ್ಯಾಟ್ಸ್‌ಮನ್ʼ: ವಿರಾಟ್ ಕೊಹ್ಲಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಆಂಡರ್ಸನ್!
ಇದೀಗ ಭಾರತ ತಂಡದ ಮಾಜಿ ನಾಯಕ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ರೋಹಿತ್ ಅನುಪಸ್ಥಿತಿಯಲ್ಲಿ ಜೈಸ್ವಾಲ್‌ಗೆ ಹೊಸ ಆರಂಭಿಕ ಜೋಡಿಯಾಗಿ ಕನ್ನಡಿಗ ಕೆ ಎಲ್ ರಾಹುಲ್ ಜೊತೆಯಾಗುವ ಸಾಧ್ಯತೆಯಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 2O ರಿಂದ ಆಗಸ್ಟ್ 4ರವರೆಗೆ ನಡೆಯಲಿದ್ದು ತಂಡಕ್ಕೆ ಹೊಸ ನಾಯಕನ ಘೋಷಣೆ ಆಗಬೇಕಿದೆ. ನಾಯಕತ್ವ ದೊರಕುವ ನಿರೀಕ್ಷೆಯಲ್ಲಿದ್ದ ಭಾರತ ತಂಡದ ಹಿರಿಯ ವೇಗಿ ಜಸ್‌ಪ್ರೀತ್ ಬುಮ್ರಾಗೆ ನಾಯಕತ್ವ ಲಭಿಸುವ ಸಾಧ್ಯತೆ ಕಡಿಮೆಯಿದೆ. ಹೊಸ ನಾಯಕ ಯಾರು ಎಂಬುದನ್ನು ಕಾದು ನೋಡಬೇಕಿದೆ. ಇನ್ನೂ 2018 ರಿಂದ ತಂಡದಲ್ಲಿ ನಿಯಮಿತವಾಗಿ ಸ್ಥಾನ ಪಡೆದಿರುವ ರಿಷಭ್ ಪಂತ್ ಟೆಸ್ಟ್ ತಂಡದ ಪೂರ್ಣಾವಧಿ ಉಪನಾಯಕನಾಗುವ ಸಾಧ್ಯತೆಯಿದೆ.