IND vs ZIM 2nd T20I: ಟಾಸ್ ಗೆದ್ದು ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ ಜಿಂಬಾಬ್ವೆ!
IND vs ZIM 2nd T20I Match Toss, Playing XI: ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇದೀಗ ನಡೆಯುತ್ತಿರುವ ಎರಡನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ನಾಯಕ ಸಿಕಂದರ್ ರಾಝಾ ಅವರು ಮೊದಲು ಬೌಲಿಂಗ್ ಆರಿಸಿಕೊಂಡಿದ್ದಾರೆ. ಆ ಮೂಲಕ ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.
ಭಾರತ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ20ಐ ಪಂದ್ಯ. -
ಹರಾರೆ: ಇಲ್ಲಿನ ಹರಾರೆ ಸ್ಪೋರ್ಡ್ಸ್ ಕ್ಲಬ್‌ನಲ್ಲಿ ಇದೀಗ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳು (IND vs ZIM) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝಾ ಅವರು ಮೊದಲು ಬೌಲಿಂಗ್ ಆರಿಸಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಆ ಮೂಲಕ ಪ್ರವಾಸಿಗರನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಲು ಆತಿಥೇಯರು ಯೋಜನೆಯನ್ನು ಹಾಕಿಕೊಂಡಿದ್ದಾರೆ.
ಸತತ ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಭಾರತ ತಂಡ, ಹರಾರೆಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಮೊದಲ ಪಂದ್ಯವನ್ನು ಗೆದ್ದಿತ್ತು. ಇದೀಗ ಅದೇ ಅಂಗಣದಲ್ಲಿ ಟೀಮ್ ಇಂಡಿಯಾ ಎರಡನೇ ಪಂದ್ಯವನ್ನು ಗೆದ್ದು ಟಿ20ಐ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಮತ್ತೊಂದೆಡೆ ಜಿಂಬಾಬ್ವೆ ತಂಡ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ.
IND vs ZIM: ಮೊದಲನೇ ಟಿ20ಐ ಗೆದ್ದರೂ ಭಾರತ ತಂಡವನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ!
ಭಾರತ ತಂಡದಲ್ಲಿ ಒಂದು ಬದಲಾವಣೆ
ಎರಡನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಯುವ ವೇಗಿ ಅಶೋಕ್ ಶರ್ಮಾಗೆ ಎರಡನೇ ಪಂದ್ಯದಲ್ಲಿ ವಿಶ್ರಾಂತಿಯನ್ನು ನೀಡಲಾಗಿದೆ. ಅವರ ಬದಲು ಯಶ್ ಠಾಕೂರ್‌ಗೆ ಸ್ಥಾನವನ್ನು ನೀಡಲಾಗಿದೆ. ಇನ್ನು ಎದುರಾಳಿ ಜಿಂಬಾಬ್ವೆ ತಂಡದಲ್ಲಿ ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ.
🚨 Toss Update 🚨
— BCCI (@BCCI) July 25, 2026
Zimbabwe won the toss and elected to field first in the 2nd T20I
Updates ▶️ https://t.co/Z8UUziVx8d#TeamIndia | #ZIMvIND pic.twitter.com/CeGlRg24qa
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೇ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಮಯಾಂಕ್ ಯಾದವ್
#TeamIndia's Playing XI for the 2nd T20I 🔽
— BCCI (@BCCI) July 25, 2026
Updates ▶️ https://t.co/Z8UUziVx8d
#ZIMvIND pic.twitter.com/KXedeQrr3V
ಜಿಂಬಾಬ್ವೆ: ಬ್ರಿಯಾನ್ ಬೆನೆಟ್, ಬೆನ್ ಕರನ್, ಡಿಯಾನ್ ಮಾಯರ್ಸ್, ಸಿಕಂದರ್ ರಾಝಾ (ನಾಯಕ), ರಯಾನ್ ಬರ್ಲ್, ವೆಸ್ಲೀ ಮಾಧೆವೆರೆ, ತಡವಾಣಷಿ ಮಾರುಮಣಿ (ವಿಕೆಟ್ ಕೀಪರ್), ಬ್ರಾಡ್ ಎವಾನ್ಸ್, ನ್ಯೂವ್ಮಾನ್ ಎನ್‌ಯಮ್ಹುರಿ, ರಿಚರ್ಡ್ ಎನ್‌ಗರವ, ಬ್ಲೆಸಿಂಗ್ ಮುಝರಬಾನಿ
ತಂಡಗಳು
ಭಾರತ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೇ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಮಯಾಂಕ್ ಯಾದವ್, ಸೂರ್ಯಾಂಶ್ ಶೆಡ್ಗೆ, ಹರ್ಷ್ ದುಬೇ, ಪ್ರಭಸಿಮ್ರನ್ ಸಿಂಗ್, ಅಶೋಕ್ ಶರ್ಮಾ
ಜಿಂಬಾಬ್ವೆ: ಬ್ರಿಯಾನ್ ಬೆನೆಟ್, ಬೆನ್ ಕರನ್, ಡಿಯಾನ್ ಮಾಯರ್ಸ್, ಸಿಕಂದರ್ ರಾಝಾ (ನಾಯಕ), ರಯಾನ್ ಬರ್ಲ್, ವೆಸ್ಲೀ ಮಾಧೆವೆರೆ, ತಡವಾಣಷಿ ಮಾರುಮಣಿ (ವಿಕೆಟ್ ಕೀಪರ್), ಬ್ರಾಡ್ ಎವಾನ್ಸ್, ನ್ಯೂವ್ಮಾನ್ ಎನ್‌ಯಮ್ಹುರಿ, ರಿಚರ್ಡ್ ಎನ್‌ಗರವ, ಬ್ಲೆಸಿಂಗ್ ಮುಝರಬಾನಿ, ತಫಢ್‌ಝ್ವಾ ಟಿಸಿಗಾ, ಇನೋಸೆಂಟ್ ಕೈಯಾ, ಟಣಕ ಚಿವಾಂಗ, ವೆಲ್ಲಿಂಗ್ಟನ್ ಮಸಕಡ್ಜಾ