IPL 2025: ಆರ್‌ಸಿಬಿ ಈ ಸಲ ಕಪ್ ಗೆಲ್ಲುವ ನೆಚ್ಚಿನ ತಂಡ ಎಂದ ಸುನೀಲ್ ಗವಾಸ್ಕರ್!
Sunil Gavaskar on IPL Title Favourites: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಶ್ಲಾಘಿಸಿದ್ದಾರೆ. ಮುಂಬೈ ಇಂಡಿಯನ್ಸ್ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಆದರೆ, ಆರ್‌ಸಿಬಿ ಈ ಬಾರಿ ಟ್ರೋಫಿ ಗೆಲ್ಲುವ ತಂಡವಾಗಿದೆ ಎಂದು ಮಾಜಿ ನಾಯಕ ಭವಿಷ್ಯ ನುಡಿದಿದ್ದಾರೆ.

ಆರ್‌ಸಿಬಿ ತಂಡಕ್ಕೆ ಸುನೀಲ್ ಗವಾಸ್ಕರ್ ಬೆಂಬಲ!

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉತ್ತಮ ಪ್ರದರ್ಶನ ತೋರುತ್ತಿದೆ. ಇಲ್ಲಿಯ ತನಕ ಆಡಿದ 10 ಪಂದ್ಯಗಳಲ್ಲಿ ಆರ್‌ಸಿಬಿ ಮೂರರಲ್ಲಿ ಸೋಲು ಅನುಭವಿಸಿದ ಇನ್ನುಳಿದ 7 ಪಂದ್ಯಗಳಲ್ಲಿ ಗೆಲುವು ಪಡೆದಿದೆ. ಆರ್‌ಸಿಬಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಇನ್ನುಳಿದ ನಾಲ್ಕು ಪಂದ್ಯಗಳಲ್ಲಿ ಒಂದನ್ನು ಗೆಲ್ಲಬೇಕು. ಆದರೆ, ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಎರಡರಲ್ಲಿ ಸ್ಥಾನವನ್ನು ಪಡೆಯಲು ಎದುರು ನೋಡುತ್ತಿದ. ಭಾರತ ತಂಡದ ಮಾಜಿ ನಾಯಕ ಹಾಗೂ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ (Sunil Gavaskar), ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಆರಿಸಿದ್ದಾರೆ. ಆದರೆ, ಪ್ರಸ್ತುತ ಟೇಬಲ್ ಟಾಪರ್ ಗುಜರಾತ್ ಟೈಟನ್ಸ್ ತಂಡವನ್ನು ಕಡೆಗಣಿಸಿದ ಗವಾಸ್ಕರ್, ಆರ್‌ಸಿಬಿ ತಂಡವನ್ನು ಆರಿಸಿದ್ದಾರೆ.
ಇಲ್ಲಿಯ ತನಕ ಆಡಿದ ಮೂರು ಬಾರಿ ಐಪಿಎಲ್ ಟೂರ್ನಿಗಳಲ್ಲಿ ರನ್ನರ್ ಅಪ್ ಆಗಿತ್ತು. 2009, 2011 ಹಾಗೂ 2016ರ ಟೂರ್ನಿಗಳಲ್ಲಿ ಫೈನಲ್ ತಲುಪಿದ್ದ ಆರ್‌ಸಿಬಿ, ಸೋತು ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು. ಆದರೆ, ಈ ವರ್ಷ ಆರ್‌ಸಿಬಿ, ಅತ್ಯುತ್ತಮ ಸಂಯೋಜನೆಯೊಂದಿಗೆ ಆಡುತ್ತಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಆರ್‌ಸಿಬಿ ಅತ್ಯಂತ ಬಲಿಷ್ಠವಾಗಿದೆ. ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್, ಆರ್‌ಸಿಬಿಯ ಸನಿಹ ಬರಲಿದೆ. ಆದರೆ, ಅಂತಿಮವಾಗಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ ಎಂದು ಬ್ಯಾಟಿಂಗ್ ದಿಗ್ಗಜ ಭವಿಷ್ಯ ನುಡಿದಿದ್ದಾರೆ.
IPL 2025: ತಾವು ಎದುರಿಸಿದ ಅತ್ಯಂತ ಕಠಿಣ ಬೌಲರ್ ಅನ್ನು ಆರಿಸಿದ ವಿರಾಟ್ ಕೊಹ್ಲಿ!
ಇಂಡಿಯಾ ಟುಡೇ ಸಂದರ್ಶನದಲ್ಲಿ ಮಾತನಾಡಿದ ಸುನೀಲ್ ಗವಾಸ್ಕರ್, "ರಾಯಲ್ ಚಾಲೆಂಜರ್ಸ್ ಬೆಂಗಳೂರು. ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದಾರೆ ಹಾಗೂ ಫೀಲ್ಡಿಂಗ್‌ನಲ್ಲಿಯೂ ಗಮನ ಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ಪ್ರಶಸ್ತಿ ಗೆಲ್ಲುವ ಸನಿಹ ಬರಲಿದೆ. ಆದರೆ, ಇವರು ಈಗಷ್ಟೇ ಫಾರ್ಮ್‌ಗೆ ಮರಳಿದ್ದಾರೆ. ಮುಂದಿನ ಪಂದ್ಯಗಳು ಮುಂಬೈಗೆ ಅತ್ಯಂತ ಕಠಿಣವಾಗಿವೆ ಹಾಗೂ ಅವರು ಗೆಲುವಿನ ಲಯವನ್ನು ಹೇಗೆ ಮುಂದುವರಿಸಲಿದ್ದಾರೆಂದು ನೋಡಬೇಕಾಗಿದೆ. ಆದರೆ, ಆರ್‌ಸಿಬಿ ತಂಡ ಪ್ರಶಸ್ತಿ ಗೆಲ್ಲುವ ಅತ್ಯಂತ ನೆಚ್ಚಿನ ತಂಡವಾಗಿದೆ," ಎಂದು ಭವಿಷ್ಯ ನುಡಿದಿದ್ದಾರೆ.
IPL 2025: ಐಪಿಎಲ್‌ನಲ್ಲಿ 4 ಸಾವಿರ ರನ್ ಪೂರೈಸಿ ಎಲೈಟ್ ಪಟ್ಟಿ ಸೇರಿದ ಬಟ್ಲರ್
ಬಲಿಷ್ಠ ಸಂಯೋಜನೆಯನ್ನು ಹೊಂದಿರುವ ಆರ್‌ಸಿಬಿ
ಕಳೆದ ಹಲವು ಆವೃತ್ತಿಗಳಲ್ಲಿ ಆರ್‌ಸಿಬಿ ಬೌಲಿಂಗ್‌ನಲ್ಲಿ ಸಾಕಷ್ಟು ವೈಫಲ್ಯು ಅನುಭವಿಸಿತ್ತು. ಆದರೆ, ಈ ಸೀಸನ್‌ನಲ್ಲಿ ಜಾಶ್ ಹೇಝಲ್‌ವುಡ್ ಹಾಗೂ ಭುವನೇಶ್ವರ್ ತಂಡದಲ್ಲಿದ್ದಾರೆ. ಇದು ಆರ್‌ಸಿಬಿ ಬೌಲಿಂಗ್ ವಿಭಾಗವನ್ನು ಅತ್ಯಂತ ಬಲಿಷ್ಠಗೊಳಿಸಿದೆ. ಅಲ್ಲದೆ ಸ್ಪಿನ್ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಆಗಮನದಿಂದ ಆರ್‌ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅತ್ಯಂತ ಡೆಪ್ತ್ ಹೊಂದಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಈ ಬಾರಿ ಅತ್ಯಂತ ಬಲಿಷ್ಠವಾಗಿದೆ. ಆ ಮೂಲಕ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ.