ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ENG vs IND: 4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 8 ವರ್ಷದ ಬಳಿಕ ಮರಳಿದ ಸ್ಪಿನ್ನರ್‌

England Playing XI: ಇಂಗ್ಲೆಂಡ್‌ ತನ್ನ ಆಡುವ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಲಾರ್ಡ್ಸ್‌ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದ ವೇಳೆ ಮೂಳೆ ಮುರಿತಕ್ಕೆ ಒಳಗಾಗಿ ಸರಣಿಯಿಂದ ಹೊರಬಿದ್ದ ಆಫ್‌ ಸ್ಪಿನ್ನರ್‌ ಶೋಯೆಬ್‌ ಬಶೀರ್‌ ಸ್ಥಾನದಲ್ಲಿ ಲಿಯಾಮ್ ಡಾಸನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಉಳಿದಂತೆ ಯಾವುದೇ ಬದಲಾವಣೆ ಮಾಡಿಲ್ಲ.

4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; ಒಂದು ಬದಲಾವಣೆ

Profile Abhilash BC Jul 21, 2025 9:27 PM

ಮ್ಯಾಂಚೆಸ್ಟರ್: ಲಾರ್ಡ್ಸ್‌ ಟೆಸ್ಟ್‌ ಪಂದ್ಯವನ್ನು ಗೆದ್ದು 5 ಪಂದ್ಯಗಳ ಸರಣಿಯಲ್ಲಿ 2-1ರಿಂದ ಮುನ್ನಡೆ ಕಾಯ್ದುಕೊಂಡಿರುವ ಇಂಗ್ಲೆಂಡ್‌, ಓಲ್ಡ್‌ ಟ್ರಾಫ‌ರ್ಡ್‌ ಮೈದಾನದಲ್ಲಿ ಜು.23 ರಂದು ಆರಂಭವಾಗಲಿರುವ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್‌ ಪಂದ್ಯಕ್ಕೆ ತನ್ನ ಆಡುವ ಬಳಗವನ್ನು ಪ್ರಕಟಿಸಲಿದೆ. ಇಂಗ್ಲೆಂಡ್‌ ತನ್ನ ಆಡುವ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ.

ಲಾರ್ಡ್ಸ್‌ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದ ವೇಳೆ ಮೂಳೆ ಮುರಿತಕ್ಕೆ ಒಳಗಾಗಿ ಸರಣಿಯಿಂದ ಹೊರಬಿದ್ದ ಆಫ್‌ ಸ್ಪಿನ್ನರ್‌ ಶೋಯೆಬ್‌ ಬಶೀರ್‌ ಸ್ಥಾನದಲ್ಲಿ ಲಿಯಾಮ್ ಡಾಸನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಉಳಿದಂತೆ ಯಾವುದೇ ಬದಲಾವಣೆ ಮಾಡಿಲ್ಲ.

8 ವರ್ಷದ ಬಳಿಕ ತಂಡಕ್ಕೆ ಮರಳಿದ ಡಾಸನ್

ಡಾಸನ್ 8 ವರ್ಷದ ಬಳಿಕ ಇಂಗ್ಲೆಂಡ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದರು. ಜುಲೈ 2017 ರಲ್ಲಿ ನಾಟಿಂಗ್‌ಹ್ಯಾಮ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅವರು ಕೊನೆಯ ಬಾರಿಗೆ ಆಡಿದ್ದರು. 3 ಟೆಸ್ಟ್‌ ಆಡಿದ್ದು 7 ವಿಕೆಟ್‌ ಕಿತ್ತಿದ್ದಾರೆ. 14 ಟಿ20 ಮತ್ತು 6 ಏಕದಿನ ಪಂದ್ಯಗಳನ್ನಾಡಿ ಕ್ರಮವಾಗಿ 11 ಮತ್ತು 5 ವಿಕೆಟ್‌ ಪಡೆದಿದ್ದಾರೆ.

ಇಂಗ್ಲೆಂಡ್‌ ಆಡುವ ಬಳಗ

ಜಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿ.ಕೀ.), ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್.